Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸ್ ಸರಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.18: ರಾಜ್ಯದಲ್ಲಿ ಶಿವಾನಂದ ಪಾಟೀಲ, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ, ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ- ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು.

ಅಬಕಾರಿ, ಕೈಗಾರಿಕಾ ವಲಯ, ಎಲ್ಲ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‍ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್‍ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1ರಿಂದ 3 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದರು.

ನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಬೆಂಗಳೂರಿನಲ್ಲಿ ವಿಪರೀತ ಹಣ ಸಂಗ್ರಹಿಸಿದ್ದಾರೆ. ಅಂಥ ಸಾವಿರಾರು ಕೋಟಿ ಹಣವನ್ನು ಚುನಾವಣೆ ನಡೆಯುವ ಪಂಚ ರಾಜ್ಯಗಳಿಗೆ ಕಳುಹಿಸಿ ಕೊಡುತ್ತಿದ್ದಾರೆ. ಅದರಲ್ಲಿ ಎಷ್ಟು ಕಳುಹಿಸುತ್ತಾರೆ; ಎಷ್ಟು ಜೇಬಿಗೆ ಇಳಿಸುತ್ತಾರೆ ಎಂಬುದರ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು.

ನಿನ್ನೆ ಮತ್ತು ಮೊನ್ನೆ ಎಲ್ಲ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಲ್ಲಿ ಸೇರಿ 117ಕ್ಕೂ ಹೆಚ್ಚು ಕಡೆ ಬಿಜೆಪಿ ಹೋರಾಟ ಮಾಡಿದೆ. ನಮ್ಮ ಹೋರಾಟ ಮುಂದುವರೆಯಲಿದೆ. ತನಿಖೆಗೆ ಕೊಡುವವರೆಗೆ ಹೋರಾಟ ಮುಂದುವರೆಯುತ್ತದೆ ಎಂದು ಪ್ರಕಟಿಸಿದರು.

ಕರ್ನಾಟಕವೆಂಬ ಕಾಂಗ್ರೆಸ್ ಎಟಿಎಂ:

ರಾಜ್ಯದಲ್ಲಿ 251ಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಕುರಿತು ಒಂದು ಪೈಸೆ ಪರಿಹಾರ ನೀಡಿಲ್ಲ. ಬರ, ಬಿಸಿಲಿನಿಂದ ರಾಜ್ಯದ ಸಂಪೂರ್ಣ ಬೆಳೆ ನಾಶವಾಗಿದೆ; ಕರೆಂಟಿಲ್ಲದೆ ನೀರಾವರಿ ಬೆಳೆಯೂ ನಾಶವಾಗಿದೆ. ಇದರ ಬಗ್ಗೆಯೂ ಪರಿಹಾರ ಕೊಡುತ್ತಿಲ್ಲ. ಪ್ರತಿದಿನ ಕಾವೇರಿ ನೀರನ್ನು ಹರಿಸುತ್ತಿದ್ದಾರೆ. ಅದನ್ನು ನಿಲ್ಲಿಸಿಲ್ಲ; ಕರ್ನಾಟಕವು ಪೂರ್ತಿ ಎಟಿಎಂ ಆಗಿದೆ ಎಂದು ರವಿಕುಮಾರ್ ಅವರು ದೂರಿದರು.

ತಮಿಳುನಾಡಿಗೆ ಕಾವೇರಿ ನೀರು ಮತ್ತು ಪಂಚರಾಜ್ಯಗಳಿಗೆ ಹಣದ ಹರಿವು ನಿರಂತರವಾಗಿ ಸಾಗಿದೆ ಎಂದು ಅವರು ಆಕ್ಷೇಪಿಸಿದರು.

ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ರೂಪಾಯಿ ಹಣದ ಮಳೆಯನ್ನು ಬರುವಂತೆ ಮಾಡಿದ್ದಾರೆ. ಸಂಗ್ರಹಿತ ಕೋಟಿಗಿಂತ ಹೆಚ್ಚು ಹಣ ಅವರು ಕುಳಿತಿದ್ದ ಕಡೆ ಕಾಲಿನಡಿ ರಾಶಿರಾಶಿ ರೀತಿ ಸಿಕ್ಕಿದೆ. ಇದರ ಕುರಿತು ಸಂಪೂರ್ಣ ತನಿಖೆ ಆಗಬೇಕು ಎಂದು ರವಿಕುಮಾರ್ ಅವರು ಒತ್ತಾಯಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ