Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಧುಗಿರಿಯಲ್ಲಿ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ

ಸುದ್ದಿಮೂಲ ವಾರ್ತೆ

ತುಮಕೂರು ಸೆ. 4 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕ್ಷೀರಭಾಗ್ಯ ಯೋಜನೆಗೆ ದಶಮಾನೋತ್ಸವ ಸಂಭ್ರಮ. ಈಯೋಜನೆಯ ದಶಮಾನೋತ್ಸವ ಕಾರ್ಯಕ್ರಮಕ್ಕಾಗಿ ಮಧುಗಿರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನೊಳಗೊಂಡಂತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎನ್. ರಾಜಣ್ಣ ಅವರು, ಮಧುಗಿರಿ ಪಟ್ಟಣಕ್ಕೆ ಸೆ. 6ರಂದು ಆಗಮಿಸುತ್ತಿರುವ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಗ್ರಾಮೀಣ ಜನರ ಆರ್ಥಿಕಾಭಿವೃದ್ಧಿಗೆ ಹೈನುಗಾರಿಕೆ ಹೆಚ್ಚು ಪೂರಕ. ಹಾಗಾಗಿ ಹಳ್ಳಿಗಳಲ್ಲಿ ಹೈನುಗಾರಿಕೆ ಮತ್ತಷ್ಟು ಹೆಚ್ಚಾಗಬೇಕು. ಜತೆಗೆ ಹೆಚ್ಚಿನ ಗುಣಮಟ್ಟದ ಪದಾರ್ಥ ನೀಡುವ ಕೆಲಸವನ್ನು ಹಾಲು ಒಕ್ಕೂಟ ಮಾಡುತ್ತಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಮಧುಗಿರಿಯ ಇತಿಹಾಸದಲ್ಲಿ ಈ ಹಿಂದೆ ಎಂದೂ ನೋಡದ ಕ್ಷೀರಭಾಗ್ಯ ಕಾರ್ಯಕ್ರಮ ನಡೆಯುತ್ತಿದೆ. ಕ್ಷೀರಭಾಗ್ಯ ಯೋಜನೆಯು ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಯಾಯಿತು. ಮಕ್ಕಳ ಪೌಷ್ಟಿಕತೆಗೆ ಸಹಾಯವಾಗಲಿ ಎಂದು ಅಂದು ಜಾರಿಗೆ ತಂದಿದ್ದರು.

ಇದರಿಂದ ರಾಜ್ಯದಲ್ಲಿ ಸುಮಾರು 65 ಲಕ್ಷ ಮಕ್ಕಳಿಗೆ ಅನುಕೂಲವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸುಮಾರು 156 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 13 ಮಳಿಗೆಗಳನ್ನು ಸ್ಥಾಪಿಸಿ ಜನರಿಗೆ ಅನುಕೂಲವಾಗುವ ಮಾರ್ಗದರ್ಶನ ಮಾಡಲಾಗುತ್ತದೆ ಎಂದರು.

ಈ ಬಾರಿ ದಾವಣಗೆರೆ, ತುಮಕೂರು, ಕೋಲಾರ, ಚಿತ್ರದುರ್ಗ,ಚಿಕ್ಕಬಳ್ಳಾಪುರ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ವಿಫಲವಾಗಿದೆ. ಹಾಗಾಗಿ ಬರಪೀಡಿತ ಜಿಲ್ಲೆಗಳ ಘೋಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಶೇ.98ರಷ್ಟು ಮಳೆ ವಿಫಲವಾಗಿದೆ. ಆದ್ದರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್, ಶಾಸಕರಾದ ಹೆಚ್.ವಿ. ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ಕೆಎಂಎಫ್ ಎಂಡಿ ಜಗದೀಶ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಸಿಇಓ ಜಿ.ಪ್ರಭು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್,ಉಪವಿಭಾಗಾಧಿಕಾರಿ ರಿಷಿ ಆನಂದ್, ತಹಶೀಲ್ದಾರ್ ಸಿಬ್ಗತ್‌ವುಲ್ಲಾ, ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ