Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ದಸರಾ ಆಚರಣೆಗೆ 16 ಉಪ ಸಮಿತಿ ರಚನೆ : ಬ್ರ್ಯಾಂಡ್‌ ಮೈಸೂರು ಸ್ಪರ್ಧೆ

ಸುದ್ದಿಮೂಲ ವಾರ್ತೆ

ಮೈಸೂರು, ಆ.14 : ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬೇಕಾದ ಸಿದ್ದತೆಗಳು ಚುರುಕುಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹಾದೇವಪ್ಪನವರ ಅಧ್ಯಕ್ಷತೆಯಲ್ಲಿ ಸೋಮವಾರ ದಸರಾ ಮಹೋತ್ಸವ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಮೈಸೂರು, ಮಂಡ್ಯ ಜಿಲ್ಲೆಗಳ ಶಾಸಕರು ಮತ್ತು ಉನ್ನತ ಸಮಿತಿ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಮಹದೇವಪ್ಪನವರು, ಸೆಪ್ಟಂಬರ್ 1ಕ್ಕೆ ಗಜಪಯಣ ನಡೆಯಲಿದ್ದು, ದಸರಾ ಆಚರಣೆಗಾಗಿ 16 ಉಪ ಸಮಿತಿ ರಚನೆ ಮಾಡಲಾಗುತ್ತದೆ ಈ ಬಾರಿ ದಸರಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಲಾಗುವುದು. ದಸರಾ ಆನೆಗಳು ಸೆಪ್ಟೆಂಬರ್ 4ಕ್ಕೆ ಅರಮನೆ ಆವರಣ ಪ್ರವೇಶಿಸಲಿವೆ ಎಂದು ವಿವರಿಸಿದರು.

ದಸರಾ ಆಚರಣೆಗಾಗಿ 16 ಉಪ ಸಮಿತಿ ರಚಿಸಲಾಗಿದೆ. ಅಗತ್ಯ ಬಿದ್ದರೆ ಮತ್ತೆ ಮೂರು ಸಮಿತಿಗಳನ್ನು ರಚಿಸಲಾಗುತ್ತದೆ. ಈ ಬಾರಿ ಬ್ಯ್ರಾಂಡ್ ಮೈಸೂರು ಸ್ಪರ್ಧೆ ಆಯೋಜಿಸಲಾಗುವುದು. ದಸರಾಗೆ ಅಗತ್ಯ ಅನುದಾ‌ನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ. ಕಳೆದ ಬಾರಿಗಿಂತ ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡುತ್ತೇವೆ ಎಂದು ಹೇಳಿದರು.

ನರಿ ಮತ್ತು ಆನೆ ಕಥೆ

ಸಚಿವ ಡಾ. ಮಹದೇವಪ್ಪನವರು, ಏಳು ತಿಂಗಳಿನಲ್ಲಿ ಸರ್ಕಾರ ಬೀಳುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ನರಿ ಮತ್ತು ಆನೆ ಕಥೆ ಹೇಳುವ ಮೂಲಕ ತಿರುಗೇಟು ನೀಡಿದ್ದು ಹೀಗೆ ಒಂದಾನೆ ಆದರ ಪಾಡಿಗೆ ಹೋಗುತ್ತಿರುತ್ತದೆ. ಆಗ ನರಿ ಆನೆಯದ್ದು ಅದೇ ಬೀಳುತ್ತದೆ ಎಂದು ಕಾಯುತ್ತಿರುತ್ತದೆ. ಆನೆದು ಬೀಳಲ್ಲ. ನರಿ ಆಸೆ ಈಡೇರಲ್ಲ ಎಂದು ವ್ಯಂಗ್ಯವಾಡಿದದರು. ಅಪರೇಷನ್ ಕಮಲ ಯಾವುದು ಕರ್ನಾಟಕದಲ್ಲಿ ನಡೆಯುವುದಿಲ್ಲ. ಅಂತಹ ಅಪರೇಷನ್ ನಡೆಸಿದ್ದಕ್ಕೆ ಅವರಿಗೆ ಇವತ್ತು ಈ ಸ್ಥಿತಿ ಬಂದಿದೆ. ಇಲ್ಲಿ ಬಿಜೆಪಿಯ ಯಾವ ಆಟವೂ ನಡೆಯುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.

ಜೆಡಿಎಸ್‌, ಬಿಜೆಪಿ ಅವರೇ ಬರುತ್ತಿದ್ದಾರೆ

ಇದೇ ವೇಳೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಾತನಾಡಿ, ಬಿಜೆಪಿ, ಜೆಡಿಎಸ್ ನಿಂದಲೇ ಕಾಂಗ್ರೆಸ್‌ ಕಡೆಗೆ ಬರುವವರು ತಯಾರಿದ್ದಾರೆ. ನಾವೇನೂ ಕರೆಯುತ್ತಿಲ್ಲ. ಅವರಾಗಿ ಅವರೇ ಬರುತ್ತಿದ್ದಾರೆ. ಇನ್ನೂ ಈ ಸ್ಥಿತಿಯಲ್ಲಿ ಸರ್ಕಾರ ಹೇಗೆ ಅಸ್ಥಿರವಾಗುತ್ತದೆ. ನೂರು ಸುಳ್ಳು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಎಂದು ಟೀಕಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ