Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಟೀಲ ವಿರುದ್ದ ಪ್ರಕರಣ ದಾಖಲು! ಇದು ಷಡ್ಯಂತ್ರ:ಖೂಬಾ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.24:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್ ಮೇಲೆ ಎಫ್ಐಆರ್ ದಾಖಲಾಗಿರುವುದು ಅದು ಕಾಂಗ್ರೆಸ್ ಸರಕಾರದ ಷಡ್ಯಂತ್ರ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೇಟ್‌ ನೀಡಿ ಅವಕಾಶ ಕೊಡುವ ಪಕ್ಷ ಅಂದ್ರೆ ಅದು ಬಿಜೆಪಿಯಲ್ಲಿ ಮಾತ್ರ.ಕಟೀಲ್‌ ಅವರ ಮೇಲೆ ಎಫ್‌ಐಆರ್‌ ಅವರ ಮೇಲೆ ಎಫ್‌ಐಆರ್‌ ದಾಖಲಾಗಿದ್ದರೆ ಅದು ಕಾಂಗ್ರೆಸ್‌ನ ಷಡ್ಯಂತ್ರ. ೨೦೨೩ ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೀವಿ ಎಂಬ ಅಹಂಕಾರದ ಪ್ರತಿಬಿಂಬವಿದು.ರಾಜ್ಯ ಸರಕಾರ ಕುತಂತ್ರಿ ಸರ್ಕಾರ ಎಂದು ಜರಿದರು.

ಬರುವ ಲೋಕಸಭೆಗೆ ಕಾಂಗ್ರೆಸ್‌ಗೆ ಎಲ್ಲಿಯೂ ನೆಲೆ ಸಿಗುತ್ತಿಲ್ಲ.ರಾಜಕೀಯ ನಾಯಕರನ್ನು ಎಲ್ಲರೂ ಬಂದು ಭೇಟಿಯಾಗುತ್ತಾರೆ.ಹಾಗಂದ ಮಾತ್ರಕ್ಕೆ ವ್ಯವಹಾರ ನಡೆದಿದೆ ಎಂದಲ್ಲ.ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ ಇದ್ದರೆ ಮೊದಲು ಅಧಿಕಾರದಿಂದ ಕೆಳಗಿಳಿಯಬೇಕು. ರಾಜ್ಯ ಕಾಂಗ್ರೆಸ್ ಸರಕಾರ ಜನರ ಯಾವ ಕಷ್ಟಗಳಿಗೆ ಸ್ಪಂದಿಸುತ್ತಿದೆ?‌ ರೈತರಿಗೆ ಸರಿಯಾದ ವಿದ್ಯುತ್‌ ಪೂರೈಸುತ್ತಿಲ್ಲ. ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಭ್ರಷ್ಟಚಾರ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ನವರು ಲೂಟಿ ಹೊಡೆದು ಬೇರೆ ರಾಜ್ಯಗಳಿಗೆ ಹಣವನ್ನು ಸಾಗಿಸುತ್ತಿದ್ದಾರೆ. ಬರ ಘೋಷಣೆ ಮಾಡಿದ್ದರೂ ರೈತರಿಗೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ. ರಾಜ್ಯ ಕಾಂಗ್ರೆಸ್‌ ಸರಕಾರ ಎಲ್ಲರನ್ನೂ ಕಷ್ಟಕ್ಕೆ ತಳ್ಳುವ ಸರಕಾರವಿದು. ಐದು ತಿಂಗಳಲ್ಲಿ ರಾಜ್ಯ ಸರಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ರಾಜ್ಯ ಸರಕಾರಕ್ಕೆ ನಾಚಿಕೆಯಾಗಬೇಕು. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ನೆರೆ ಬಂದಾಗ ರಾಜ್ಯದ ಬೊಕ್ಕಸದಿಂದ ಪರಿಹಾರ ನೀಡಿದ್ದರು.ಅದರಂತೆ ಈ ಸರಕಾರ ರೈತರಿಗೆ ಪರಿಹಾರ ನೀಡಿ ಆಮೇಲೆ ಕೇಂದ್ರದಿಂದ ಪಡೆದುಕೊಳ್ಳಬೇಕು ಎಂದರು.

ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.ಅವರಿಗೆ ದೇವರು ಒಳ್ಳೆಯದು ಮಾಡಲಿ. ಬಿಜೆಪಿಯವರು ಯಾರೂ ಕಾಂಗ್ರೆಸ್‌ಗೆ ಹೋಗೋದಿಲ್ಲ ಎಂದು ಹೇಳಿದರು.

ಇದೇ ವೇಳೆ ಗವಿಮಠದ ಕೇಂದ್ರ ಸ್ವಾಮಿಜಿಯ ಜೊತೆಯಲ್ಲಿ ವಾಕಿಂಗ್ ಮಾಡಿದರು. ಖಾಸಗಿ ಕಾರ್ಯಕ್ರಮಕ್ಕೆ ಕೊಪ್ಪಳಕ್ಕೆ ಆಗಮಿಸಿದ್ದರು.ಸದ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಸ್ವಾಮಿಜಿ ಜೊತೆಯಲ್ಲಿ ಚರ್ಚೆ ಮಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ