Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆನೆ ತುಳಿತದಿಂದ ಗಿರಿಜನ ಯುವಕ ಸಾವು

ಸುದ್ದಿಮೂಲ ವಾರ್ತೆ,

ಮೈಸೂರು,ಅ.27:ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕಾಡಾನೆಗಳ ಕಾಟ ತಪ್ಪುತ್ತಿಲ್ಲ. ಆಗಾಗ್ಗೆ ಕಾಡುಪ್ರಾಣಿಗಳ ದಾಳಿಯಿಂದ ಮಾನವರ ಸಾವು, ನೋವು ಜೊತೆಗೆ ಬೆಳೆದ ಬೆಳೆಗಳು ರೈತರ ಹಟ್ಟಿ ಸೇರುತ್ತಿಲ್ಲ. ಸಾವು- ನೋವು ಮುಂದುವರಿದಿದೆ.

ಗುರುವಾರ ರಾತ್ರಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು ಕಾವಲು ಕಾಯಲು ಹೋಗಿದ್ದ ಎಚ್‌.ಡಿ.ಕೋಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ವೀರನಹೊಸಹಳ್ಳಿ ವಲಯದ ಮಾಸ್ತಿ ಗುಡಿ ಪುನರ್ವಸತಿ ಕೇಂದ್ರದಲ್ಲಿ ಗಿರಿಜನ ಯುವಕನೋರ್ವ ಆನೆ ತುಳಿತದಿಂದ ಮೃತಪಟ್ಟಿದ್ದಾನೆ. ಕೇಂದ್ರದ ರಾಮ ಎಂಬುವವರು ಪುತ್ರ ವಸಂತ(34) ಆನೆ ತುಳಿತಕ್ಕೆ ಮೃತಪಟ್ಟಿರುವ ಯುವಕ.

ಪುನರ್ವಸತಿ ಕಲ್ಪಿಸಿದ ವೇಳೆ ತಮಗೆ ನೀಡಿದ ಜಮೀನಿನಲ್ಲಿ ಮುಸುಕಿನ ಜೋಳವನ್ನು ಬಿತ್ತನೆ ಮಾಡಿ, ಕಟಾವು ಮಾಡಿದ್ದರು. ಕಟಾವಾಗಿದ್ದ ಜೋಳವನ್ನು ಎಂದಿನಂತೆ ರಾತ್ರಿಯ ವೇಳೆ ಕಾವಲು ಕಾಯಲು ತೆರಳಿದ್ದ ವೇಳೆ ಮಧ್ಯರಾತ್ರಿ 1 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.

ಗ್ರಾಮಸ್ಥರ ಆಕ್ರೋಶ- ಪ್ರತಿಭಟನೆ

ಶುಕ್ರವಾರ ಹಾಡಿ ಮಹಿಳೆಯರು ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಹಿಳೆಯರು ಮಾತನಾಡಿ, ನಮ್ಮನ್ನು ಪುನರ್ವಸತಿ ನೆಪಹೇಳಿ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ತಂದಿಟ್ಟಿದ್ದಾರೆ,ಇಲ್ಲಿ ರಕ್ಷಣೆ ಇಲ್ಲ, ರಸ್ತೆ ಇಲ್ಲ, ನಾವು ಬೆಳೆದ ಬೆಳೆ ಕಾಡುಪ್ರಾಣಿಗಳ ಪಾಲಾಗುತ್ತಿದೆ. ಕುಡಿಯಲು ಶುದ್ಧ ನೀರಿಲ್ಲ, ಮಾನವನ ಪ್ರಾಣಕ್ಕೆ ಇಲ್ಲಿ ಬೆಲೆಯೇ ಇಲ್ಲ. ಕೊಡಗು, ಬಳ್ಳೆ ಸೇರಿದಂತೆ ಅನೇಕ ಕಡೆಯಿಂದ ಒಕ್ಕಲೆಬ್ಬಿಸಿ ನಮ್ಮನ್ನು ಸೌಕರ್ಯವಿಲ್ಲದ ಜೈಲಿನಂತಿರುವ ಈ ಪ್ರದೇಶಕ್ಕೆ ಕರೆತಂದಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸೂಕ್ತ ಪರಿಹಾರ ನೀಡಬೇಕು, ಅಲ್ಲದೇ ಕಾಡು ಪ್ರಾಣಿಗಳ ಉಪಟಳದಿಂದಾಗಿ ಬೆಳೆ ಹಾನಿಯಾದರೆ ಕೇವಲ ಎರಡು ಮೂರು ಸಾವಿರ ಮಾತ್ರ ಪರಿಹಾರ ನೀಡಲಾಗುತ್ತದೆ.ಈ ಪರಿಹಾರ ಪಡೆದುಕೊಳ್ಳಲು ನಮ್ಮ ಹಣವೇ ಹೆಚ್ಚು ಖರ್ಚಾಗುತ್ತದೆ ಎಂದು ಆರೋಪಿಸಿದರು.ಅಲ್ಲದೇ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡಬೇಕು ಎಂದು ಆಗ್ರಹಿಸಿದರು.ಡಿದರು.

ಸ್ಥಳಕ್ಕೆ ಆಗಮಿಸಿದ ತಹಸ್ದೀರ್‌ ಸಣ್ಣರಾಮಪ್ಪ, ಪಿಎಸ್‌ ಐ ಶಬ್ಬೀರ್ ಹುಸೇನ್ ಅವರು, ಮನವೊಲಿಸಲು ಯತ್ನಿಸಿದರು. ಆದರೆ ಪ್ರತಿಭಟನಾಕಾರರು ಪಟ್ಟು ಬಿಡದೇ, ನಾಗರಹೊಳೆ ಸಹಾಯಕ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟುಹಿಡಿದರು.

ನಂತರ ಸ್ಥಳಕ್ಕೆ ಬಂದ ಹರ್ಷಕುಮಾರ್ ಚಿಕ್ಕನರಗುಂದ ಭೇಟಿ ನೀಡಿ ಮಾತನಾಡಿ, ಆಗಿರುವ ಘಟನೆಗೆ ಸೂಕ್ತ ಪರಿಹಾರ ನೀಡಲಾಗುವುದು. ಸರ್ಕಾರದಿಂದ 15 ಲಕ್ಷ ರೂ ಪರಿಹಾರವನ್ನು ನೀಡಲಾಗುವುದು. ಜೊತೆಗೆ ಪತ್ನಿಗೆ ನಾಲ್ಕು ವರ್ಷದವರಗೆ ಪ್ರತಿ ತಿಂಗಳು 4 ಸಾವಿರ ರೂ ಮಾಸಾಶನ ನೀಡಲಾಗುವುದು. 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರೊಬ್ಬರಿಗೆ ಇಲಾಖೆಯಲ್ಲಿ ಕೆಲಸ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಪ್ರತಿಭಟನೆಯನ್ನು ಕೈ ಬಿಟ್ಟರು ನಂತರ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ