Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಸ್ತಿಗಾಗಿ ಅತ್ಯಾಚಾರ ಮಾಡಿರುವ ಆರೋಪ

ಸುದ್ದಿಮೂಲವಾರ್ತೆ

ಕೊಪ್ಪಳ ಆ 14; ಆಸ್ತಿ ವಿಷಯಕ್ಕೆ ಭಾವನಿಂದ ಅತ್ಯಾಚಾರ ಮಾಡಿರುವ ಆರೋಪವನ್ನು ಅತ್ಯಾಚಾರಕ್ಕೊಳಗಾದವರ ಪತಿ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ತಿಳಿಸಿದ್ದಾರೆ.

ಈ ಕುರಿತು ಇಂದು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂತ್ರಸ್ತೆ ಹಾಗು ಕುಟುಂಬದವರು ಮಾಧ್ಯಮಗೋಷ್ಠಿ ನಡೆಸಿದ್ದು. ಜು 25 ರಂದು ಗಂಗಾವತಿ ತಾಲೂಕಿನ ದಾಸನಾಳ ಬಳಿ ಈ ಘಟನೆ ನಡೆದಿದೆ.ಘಟನೆ ನಡೆದು ಹದಿನೈದು ದಿನವಾದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಇಲ್ಲಿ ಪೊಲೀಸರೇ ಸಂದಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಸಾಪಟ್ಟಣ ಬೋಜ್ಜ ಶ್ರೀನಿವಾಸರಾವ್ ಎಂಬುವವರಿಂದ ಎರಡು ಬಾರಿ ಅತ್ಯಾಚಾರವಾಗಿದೆ. ಇದೇ ವೇಳೆ ದಾಸನಾಳ ಕಾಲುವೆಯ ಬಳಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಮಾಡಿದ್ದಾರೆ.ತಕ್ಷಣ112 ಗೆ ಫೋನು ಮಾಡಿ ತಿಳಿಸಲಾಗಿದೆ. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಗೆ ದೂರು ನೀಡಿದರೂ ಸಂದಾನ ಮಾಡಲು ಮುಂದಾಗಿದ್ದಾರೆ. ಸಿಪಿಐ ಮಂಜುನಾಥ ಹಾಗು ಪಿಎಸ್ಐ ಶಾರದಮ್ಮ ಸಂದಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಹಿಳಾ ಆಯೋಗ.‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಮನವಿ ಮಾಡಿಕೊಂಡ ನಂತರ ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಸನಾಳ ಬಳಿಯ ಆರು ಎಕರೆ ಭೂಮಿಯಲ್ಲಿ ಉಳುಮೆ ಮಾಡಲು ಬೊಜ್ಜ ಶ್ರೀನಿವಾಸ ಬಿಡುತ್ತಿಲ್ಲ. ದೌರ್ಜನ್ಯ ಮಾಡುತ್ತಿದ್ದಾರೆ. ಈ ಕುರಿತು ಗಂಗಾವತಿ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ಈ ಕುರಿತು ಪರಿಶೀಲಿಸಲಾಗುತ್ತಿದೆ. ಆಸ್ತಿಗಾಗಿ 7 ವರ್ಷಗಳಿಂದ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿದೆ. ದೂರು ಹಾಗು ವಿವಸ್ತ್ರ ಗೊಳಿಸಿರುವ ವಿಡಿಯೋ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತದೆ.ಪರಿಶೀಲನೆಯ ನಂತರ ಕ್ರಮ ಕೈಗೊಳ್ಳಲಾಗುವುದು ಕೊಪ್ಪಳ ಎಸ್ಪಿ ಯಶೋದಾ ವಂಟಿಗೋಡಿ ಹೇಳಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ