Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ರಾಹುಲ್ ಗಾಂಧಿ ಜೊತೆ ಎಐಸಿಸಿ ಕಾರ್ಯದರ್ಶಿ ಎನ್ಎಸ್ ಬೋಸರಾಜು ಚರ್ಚೆ.

ಸುದ್ದಿಮೂಲ ವಾರ್ತೆ ,


ರಾಯಚೂರು ಏ.೧೧ :  ಹಿಂದುಳಿದ ಹಾಗೂ ಮಹಾತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡಲು ಆಗ್ರಹಿಸಿ ಸುಮಾರು 384 ದಿನದಿಂದ ನಡೆಯುತ್ತಿರುವ ಹೋರಾಟ 84 ದಿನಗಳ ಸರದಿ ಉಪವಾಸ ಸತ್ಯಾಗ್ರಹದ ಮೂಲಕ ಏಮ್ಸ್ ಹೋರಾಟದಿಂದ ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳಿಗೆ  ಮನವಿ‌ಮಾಡಲಾಗಿದೆ. ಆದರೇ‌ ಬಿಜೆಪಿ‌ ಸರ್ಕಾರ ಬರೀ ಸುಳ್ಳು ಹೇಳುವ ಮೂಲಕ ಜನರನ್ನು ಮೋಸ ಮಾಡುತ್ತಿದೆ. ಹಾಗಾಗಿ ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ರಾಯಚೂರಿಗೆ ಏಮ್ಸ್ ಭರವಸೆ ನೀಡುವಂತೆ ಎಐಸಿಸಿ ಕಾರ್ಯದರ್ಶಿ ಎನ್ಎಸ್ ಬೋಸರಾಜು ಹಾಗೂ ರವಿ ಬೋಸರಾಜು ಅವರು ರಾಹುಲ್ ಗಾಂದಿ ಅವರೊಂದಿಗೆ ಚರ್ಚಿಸಿ  ಮನವಿ‌ ಮಾಡಿದ್ದಾರೆ‌.


ದೆಹಲಿಯ ರಾಹುಲ್ ಗಾಂದಿ ನಿವಾಸದಲ್ಲಿ ಎಐಸಿಸಿ ಕಾರ್ಯದರ್ಶಿ ಎನ್ಎಸ್ ಬೋಸರಾಜು ಅವರು ರಾಹುಲ್‌ಗಾಂದಿಯವರೊಂದಿಗೆ ಸುಧೀರ್ಘ ವಾಗಿ ಚರ್ಚಿಸಿ ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಲು ಎಲ್ಲಾ ಮೂಲ ಸಂಪನ್ಮೂಲಗಳಿದ್ದರು ಕಡೆಗಣಿಸಲಾಗುತ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಯಚೂರಿನ ಜನತೆ ಮನವಿ ಮಾಡಿದ್ದರು ಎಂದು ತಿಳಿಸಿದರು.


ರಾಹುಲ್‌ಗಾಂದಿ‌ ಮಾತನಾಡಿ ಈ ಬಗ್ಗೆ ಪ್ರಣಾಳಿಕೆಯಲ್ಲಿ ಸೇರಿಸಲು ಕರ್ನಾಟಕ‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರಿಗೆ ನಿರ್ದೇಶಿಸಲಾಗುವದು ಎಂದು ತಿಳಿಸಿದ್ದಾರೆ.


ಇತ್ತೀಚೆಗೆ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಿಲ್ಲೆಗೆ ಏಮ್ಸ್ ನೀಡುತ್ತೇವೆಂದು ಆಶ್ವಾಸನೆ ನೀಡಿ ಸುಳ್ಳು ಹೇಳುವ ಮೂಲಕ ಜನರನ್ನು ಹಾಗೂ ಅನಿರ್ಧಿಷ್ಟಾವಧಿ ಏಮ್ಸ್  ಹೋರಾಟಗಾರರನ್ನು ಕಡೆಗಣಿಸಿ ಮೋಸ ಮಾಡಿದ್ದಲ್ಲದೆ ದೇಶದಲ್ಲಿ ಎಲ್ಲೂ ಇಲ್ಲದ ಏಮ್ಸ್ ಮಾದರಿ ಆಸ್ಪತ್ರೆ ನೀಡುತ್ತೇವೆಂದು ಬಜೆಟ್ ನಲ್ಲಿ ನಯಾಪೈಸೆಯೂ ಮೀಸಲಿಡದೆ ಮತ್ತೊಮ್ಮೆ ಜನರಿಗೆ ಹಸಿ ಸುಳ್ಳು ಹೇಳುವ ಮೂಲಕ ರಾಜಕೀಯವಾಗಿಯೂ ಮೋಸ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಹಾಗಾಗಿ ಕಾಂಗ್ರೆಸ್ ಪಕ್ಷದ ವಿಧಾನಸಭಾ ಚುನಾವಣೆಯ ಭರವಸೆಯ ಪ್ರಣಾಳಿಯಲ್ಲಿ ಜಿಲ್ಲೆಗೆ ಎಮ್ಸ್ ಮಂಜೂರು ಭರವಸೆ ನೀಡಬೇಕೆಂದು ತಿಳಿಸಿದ್ದಾರೆ‌.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ