Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪರಿಸರ ಸ್ನೇಹಿ ಗಣೇಶ ಪೂಜಿಸಲು ಮನವಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.1: ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ‌ ಕುರಿತು ವಿವಿಧ ಇಲಾಖೆಗಳ ಜೊತೆ ನಡೆದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ, ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕೆಲ ಪ್ರದೇಶಗಳಲ್ಲಿ ಕೆರೆಗಳು ವಸತಿ ಪ್ರದೇಶದಿಂದ ದೂರವಿರುವುದರಿಂದ ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಿದರು.

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ ಅಳವಡಿಸಬೇಕು. ಎಲ್ಲಾ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಲು ಸೂಚಿಸಿದರು.

ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜೊತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು‌‌. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆಯನ್ನು ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

ಪರಿಸರ ಸ್ನೇಹಿ ಮೂರ್ತಿ ಪೂಜಿಸಿ:

ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಹಾಗೂ ಬಣ್ಣದ, ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕೆಂದು ಸಾರ್ವಜನಿಕರಲ್ಲಿ ಮುಖ್ಯ ಆಯುಕ್ತರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಬಿಬಿಎಂಪಿಯ ಎಲ್ಲಾ ವಿಶೇಷ, ವಲಯ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಉಪ ಆಯುಕ್ತರು (ಆಡಳಿತ), ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ