Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕನ್ನಡ ಉಳಿಸುವಲ್ಲಿ ಆಟೋ ಚಾಲಕರ ಪಾತ್ರ ದೊಡ್ಡದು: ಆಂಜನಪ್ಪ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ನ.25: ತಾಲ್ಲೂಕಿನ ಕುಂಬಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಚ್.ಕ್ರಾಸ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಸ್.ಎನ್ ಕ್ರಿಯಾ ಟ್ರಸ್ಟಿನ ಅಧ್ಯಕ್ಷ ಆಂಜಿನಪ್ಪ ಪುಟ್ಟು ಅವರು ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ತಿಳಿಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಚ್.ಕ್ರಾಸ್ ನಲ್ಲಿರುವ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಕನ್ನಡ ಚಲನಚಿತ್ರವಾದ ರಾಜಯೋಗ ಚಿತ್ರ ವೀಕ್ಷಣೆ ಮಾಡಲು ಉಚಿತವಾಗಿ ಟಿಕೆಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆಂಜಿನಪ್ಪ, ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವುದರಲ್ಲಿ ಮೊದಲಿಗರು ಆಟೋ ಚಾಲಕರು ಹಾಗೂ ಆಟೋ ಮಾಲೀಕರು. ಇಂತಹ ಕೆಳವರ್ಗದಲ್ಲಿ ದುಡಿಯುವಂತಹ ಇವರೇ ಕನ್ನಡದ ಬಗ್ಗೆ, ಕನ್ನಡ ನಾಡಿನ ಬಗ್ಗೆ, ಕನ್ನಡದ ನೆಲ, ಜಲ, ಭಾಷೆಯ ಬಗ್ಗೆ ಇಷ್ಟೊಂದು ಅಭಿಮಾನ ಇಟ್ಟುಕೊಂಡಿದ್ದರೆ. ಸುಶಿಕ್ಷಿತವಾದ ಸಮಾಜದಲ್ಲಿ ಮುಂದುವರೆದ ಸಮಾಜದವರು ಹೆಚ್ಚಿನ ಆಸಕ್ತಿವಹಿಸಿ ತುಂಬಾ ಜಾಗೃತಿಯಿಂದ ಕನ್ನಡವನ್ನು ಉಳಿಸಿಕೊಂಡರೆ ಮಾತ್ರ ಕನ್ನಡ ನಾಡಲ್ಲಿ ಕನ್ನಡ ಉಳಿಯುತ್ತದೆ. ಇಲ್ಲದೆ ಹೋದರೆ ನೆರೆ ಭಾಷೆಗಳ ವ್ಯಾಮೋಹಕ್ಕೆ ತುತ್ತಾಗಿ ಕನ್ನಡ ನಶಿಸಿಹೋಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ತಾಲ್ಲೂಕು ಅಧ್ಯಕ್ಷರಾದ ವಸಂತ್ ಕುಮಾರ್, ಹೆಚ್.ಕ್ರಾಸ್ ಆಟೋ ಘಟಕದ ಅಧ್ಯಕ್ಷರಾದ ವೆಂಕಟೇಶ್, ಶಾಂತಕುಮಾ‌ರ್, ಮಂಜುನಾಥ್, ಹೊಸಪೇಟೆ ಶಶಿಕುಮಾರ್, ಕಾಳನಾಯಕನಹಳ್ಳಿ ಎನ್. ರಮೇಶ್,ಮುನಿವೆಂಕಟಪ್ಪ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಎನ್.ರಾಮಾಂಜನೇಯ, ಸುನಿಲ್,ಪ್ರಮೋದ್, ಹೆಚ್ ಕ್ರಾಸ್ ಉದಯ್, ಕ್ಯಾಸಿಗರೆ ಶ್ರೀನಿವಾಸ್, ಬಳುವನಹಳ್ಳಿ ಮೂರ್ತಿ ಹಾಗೂ ಆಟೋ ಚಾಲಕರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ