Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮ ಅಳವಡಿಕೆ:  ಡಾ.ಎಂ.ಸಿ ಸುಧಾಕರ್‌

 

ಬೆಂಗಳೂರು,ಜೂ. 10: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆದುಕೊಳ್ಳುವಂತೆ ಅನುವು ಮಾಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಗಳ ಅಳವಡಿಕೆಯತ್ತ ಉನ್ನತ ಶಿಕ್ಷಣ ಇಲಾಖೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್‌ ಹೇಳಿದರು.

ಇಂದು ನಗರದ ಬಸವನಗುಡಿಯ ನ್ಯಾಷನಲ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 9 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಮಾತನಾಡಿದರು. ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ನ್ಯಾಷನಲ್‌ ಕಾಲೇಜು ನೀಡಿರುವ ಕೊಡುಗೆ ಬಹಳಷ್ಟು. ಡಾ.ಎಚ್‌.ಎನ್‌ ನರಸಿಂಹಯ್ಯ ಅವರ ನೇತೃತ್ವದಲ್ಲಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದ ಬಹಳ ಸಂತಸದ ವಿಷಯ. ಕಾಲೇಜಿನ ವಿದ್ಯಾರ್ಥಿನಿಲಯದಲ್ಲೇ ವಾಸವಾಗಿದ್ದ ಅವರೊಂದಿಗಿನ ಒಡನಾಟ ಇಂದಿಗೂ ನನ್ನ ಕಣ್ಣಮುಂದಿದೆ. ಯಾವುದೇ ಪ್ರತಿಫಲಾಕ್ಷೇಪೆಯಿಲ್ಲದೇ ಒಂದು ಸಂಸ್ಥೆಯನ್ನು ಬೆಳಸಿದ ಹೆಗ್ಗಳಿಕೆ ಅವರದ್ದು. ವಿದ್ಯಾರ್ಥಿಯಾಗಿ ಕಾಲೇಜಿನ ಅವರಣದಲ್ಲಿ ನಾವು ಕೈಗೊಂಡ ಚಟುವಟಿಕೆಗಳು ಹಾಗೂ ಕಲಿಕೆ ನನ್ನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಮೆಲಕು ಹಾಕಿದರು.

ಉದ್ಯೋಗಾಧಾರಿತ ಪಠ್ಯಕ್ರಮ
ಬಹಳಷ್ಟು ಕ್ಯಾಂಪಸ್‌ ಸಂದರ್ಶನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಇದು ಅವರ ಸಾಮರ್ಥ್ಯದ ಕೊರತೆಯಿಂದ ಅಲ್ಲ. ಆದರೆ, ನಮ್ಮ ಪಠ್ಯಕ್ರಮದಲ್ಲಿನ ಕೊರತೆಯಿಂದಾಗಿ ಅವರು ಉದ್ಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಉನ್ನತ ಶಿಕ್ಷಣದಲ್ಲಿ ಉದ್ಯೋಗದಾತರುಗಳಿಗೆ ಅವಶ್ಯಕತೆ ಇರುವಂತಹ ಅಂಶಗಳನ್ನು ಅಳವಡಿಸುವುದು ಬಹಳ ಮುಖ್ಯ. ಇದರ ಹೊರತಾಗಿ ನಾವು ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದರೂ ಅದಕ್ಕೆ ತಕ್ಕದಾದ ಕೌಶಲ್ಯ ಹೊಂದಿಲ್ಲದಿದ್ದರೆ ಅಭ್ಯರ್ಥಿಗೆ ಉದ್ಯೋಗ ಸಿಗುವುದಿಲ್ಲ. ಈ ಹಿನ್ನಲೆಯಲ್ಲಿ ಈಗಾಗಲೇ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಉದ್ಯೋಗಾಧಾರಿತ ಅಂಶಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಆದರೆ ಅದು ನಿರೀಕ್ಷೀತ ಮಟ್ಟದಲ್ಲಿ ಇಲ್ಲ. ಈ ಹಿನ್ನಲೆಯಲ್ಲಿ ನಮ್ಮ ಸರಕಾರ ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಹೇಳಿದರು.

ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಬಿಡಿಎ ಆಯುಕ್ತರಾದ ಡಾ. ಜಿ. ಕುಮಾರ್‌ ನಾಯ್ಕ್‌ ಅವರು ತಮ್ಮ ಘಟಿಕೋತ್ಸವ ಭಾಷಣದಲ್ಲಿ*, ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆದುಕೊಳ್ಳುವ ಜೊತೆಯಲ್ಲಿಯೇ ಉದ್ಯಮಿಗಳಾಗುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ದೇಶದಲ್ಲಿ ಅದರಲ್ಲೂ ಕರ್ನಾಟಕ ರಾಜ್ಯದಲ್ಲಿ ಸ್ವಂತ ಉದ್ಯಮಗಳನ್ನು ಪ್ರಾರಂಭಿಸಲು ವಿಫುಲ ಅವಕಾಶಗಳಿವೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಪ್ರೋತ್ಸಾಹದಾಯಕವಾದ ಯೋಜನೆಗಳನ್ನು ರೂಪಿಸಿದೆ. ವಿದ್ಯಾರ್ಥಿಗಳು ಉದ್ಯಮಿಗಳಾಗುವ ಮೂಲಕ ಹೆಚ್ಚು ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು ಕರೆ ನೀಡಿದರು.

ಶೀಘ್ರದಲ್ಲೇ ರಾಜ್ಯದ 32 ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್‌ ಹಾಗೂ ಅಕಾಡಿಮಿಕ್‌ ಕೌನ್ಸಿಲ್‌ ಸದಸ್ಯರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಸಿಂಡಿಕೆಟ್‌ ಸದಸ್ಯರ ನೇಮಕಮಾಡುವಂತೆ ಶಿಕ್ಷಣ ತಜ್ಞರು ಸರಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನಲೆಯಲ್ಲಿ ಈ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದರು. ಎನ್‌ಇಪಿ ಸಾಧಕ ಭಾದಕಗಳ ಬಗ್ಗೆ ಮಾಹಿತಿ ನೀಡುವಂತೆ ಶಿಕ್ಷಣ ತಜ್ಞರು ಹಾಗೂ ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಸೂಚಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸದಂತೆ ಈ ಬಗ್ಗೆ ಸರಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ಡಾ. ಎಂ.ಸಿ ಸುಧಾಕರ್‌, ಉನ್ನತ ಶಿಕ್ಷಣ ಸಚಿವರು.

ಕಾರ್ಯಕ್ರಮದಲ್ಲಿ ಎನ್‌.ಇ.ಎಸ್‌ ಆಫ್‌ ಕರ್ನಾಟಕದ ಅಧ್ಯಕ್ಷರಾದ ಡಾ. ಎಚ್‌.ಎನ್‌ ಸುಬ್ರಹ್ಮಣ್ಯ, ಕಾರ್ಯದರ್ಶಿಗಳಾದ ವಿ.ವೆಂಕಟಶಿವಾರೆಡ್ಡಿ, ಬಿ.ಎಸ್‌. ಅರುಣ್‌ಕುಮಾರ್‌, ಜಯನಗರ ನ್ಯಾಷನಲ್‌ ಕಾಲೇಜಿನ ಅಧ್ಯಕ್ಷರಾದ ಡಾ. ವೆಂಕಟರಾಮ ರೆಡ್ಡಿ, ಆಡಳಿತ ಮಂಡಳಿಯ ಸದಸ್ಯರಾದ ಜಿ.ಎಂ ರವೀಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ 15 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು 55 ವಿದ್ಯಾರ್ಥಿಗಳಿಗೆ ರ್ಯಾಂಕ್‌ ಸೇರಿದಂತೆ 628 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ