Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕದ ಜನ ಕಾಂಗ್ರೆಸ್ ಪಕ್ಷವನ್ನು ಕ್ಷಮಿಸುವುದಿಲ್ಲ: ಅರುಣ್ ಸಿಂಗ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಮಾ.27: ಕಾಂಗ್ರೆಸ್ ಪಕ್ಷ ಬಡವರು, ಶೋಷಿತರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಟೀಕಿಸಿದರು.


ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿ, ಒಬಿಸಿ ಸೇರಿದಂತೆ ವಿವಿಧ ಸಮುದಾಯಕ್ಕೆ ನ್ಯಾಯ ಕೊಡುವ ಮಾತನಾಡುವ ಬಿಜೆಪಿ ಅದನ್ನೇ ಅನುಷ್ಠಾನಕ್ಕೆ ತಂದಿದೆ. ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಈಡೇರಿಸಿದೆ. ಎಸ್‍ಸಿ, ಎಸ್‍ಟಿ ಸಮುದಾಯಗಳ ಮೀಸಲಾತಿಯನ್ನು ಅದು ಹೆಚ್ಚಿಸಿದೆ. ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ಪಕ್ಷ ಅದನ್ನು ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.


ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷವನ್ನೂ ಕ್ಷಮಿಸುವುದಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷದವರಿಗೆ ಚುನಾವಣೆಗೆ ಸಂಬಂಧಿಸಿ ಯಾವುದೇ ವಿಚಾರಗಳಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ಏನು ಕೊಟ್ಟಿದ್ದಾರೆ ಎಂದು ಸವಾಲು ಹಾಕಿದರು.


ಅವರು ಏನೂ ಮಾಡಲೇ ಇಲ್ಲ. ಅದಕ್ಕಾಗಿಯೇ ಅವರು ಮೌನವಾಗಿದ್ದಾರೆ. ಸಿದ್ದರಾಮಯ್ಯ ಸರಕಾರ ಇದ್ದಾಗ ಕೇವಲ ತುಷ್ಟೀಕರಣ ನಡೆಯುತ್ತಿತ್ತು. ಆಗ ಭ್ರಷ್ಟಾಚಾರ ಗರಿಷ್ಠ ಪ್ರಮಾಣದಲ್ಲಿತ್ತು ಎಂದು ಆರೋಪಿಸಿದರು.


ಸಿದ್ದರಾಮಯ್ಯ ತಮ್ಮ ಸಾಧನೆಗಳನ್ನು ಜನರ ಮುಂದಿಡಬೇಕು. ಆಗ ನಾವು ಕೂಡ ನಮ್ಮ ಸಾಧನೆಗಳನ್ನು ಜನರ ಮುಂದಿಡಲು ಸಿದ್ಧರಿದ್ದೇವೆ ಎಂದು ಅವರು ಸವಾಲು ಹಾಕಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣ ಮತ್ತಿತರರು ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ