Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ: ಬಿ. ದಯಾನಂದ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.8: ಸಾರ್ವಜನಿಕ ಗಣೇಶೋತ್ಸವ ಆಚರಣೆಗೂ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸಮೀಪಿಸುತ್ತಿರುವ ಹಿನ್ನೆಲೆ ನಡೆದ ಶಾಂತಿ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಣೇಶೋತ್ಸವ ಸಮಿತಿಗಳು, ಸಂಘಟಕರು, ಸಂಘ, ಸಂಸ್ಥೆಗಳ ಮುಖಂಡರೊಂದಿಗೆ ಶಾಂತಿ ಸೌಹಾರ್ದ ಸಭೆಗಳನ್ನು ನಡೆಸಲಾಗಿದೆ. ಗಣೇಶೋತ್ಸವ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗಿದೆ ಎಂದು ಹೇಳಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಹಬ್ಬವನ್ನು ಸುಗಮವಾಗಿ ನಡೆಸಲು ನಗರಸಭೆಯ 63 ಉಪವಿಭಾಗಗಳು ಬಿಬಿಎಂಪಿ, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ಪ್ರತಿನಿಧಿಗಳೊಂದಿಗೆ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಕೇಂದ್ರಗಳು ಗಣೇಶ ಮೂರ್ತಿಗಳನ್ನು ಪೆಂಡಾಲ್‌ಗೆ ಪರವಾನಿಗೆ ನೀಡಲು ಅನುಕೂಲ ಮಾಡಿಕೊಡುತ್ತವೆ. ಈ ಕೇಂದ್ರಗಳಲ್ಲಿ ಸಂಘಟಕರು ಅನುಮತಿ ಪತ್ರ ಪಡೆಯಬಹುದು. ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಜನತೆ ಬಳಕೆ ಮಾಡಬೇಕೆಂದು ಮನವಿ ಮಾಡಿದರು.

ಗಣೇಶ ಮೂರ್ತಿ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ,ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ