Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ 506 ದಿನ: ಭೂ ಸ್ವಾಧೀನ ರದ್ಧತಿಗೆ ಆಗ್ರಹ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ. 23 : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ 100 ದಿನಗಳು ಪೂರೈಸಿದ್ದರೂ, ಇಂದಿಗೂ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಗೆ ನೀಡಿದ್ದ ವಚನವನ್ನು ನೇರವೇರಿಸಲು ಸಕಾಲ ಕೂಡಿಬಂದಿಲ್ಲ. ಈಗಾಗಲೇ ಹೋರಾಟ ಪ್ರಾರಂಭವಾಗಿ 506 ದಿನಗಳು ಕಳೆದರು ಸರ್ಕಾರಗಳು ರೈತರನ್ನು ಸತಾಯಿಸುತ್ತಿದೆ' ಎಂದು ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಸದಸ್ಯ ಮಾರೇಗೌಡ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಚನ್ನರಾಯಪಟ್ಟಣ ನಾಡಕಚೇರಿಯ ಮುಂದೆ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಧರಣಿಯೂ 506ನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಬುಧವಾರ ಮಾತನಾಡಿದ ಅವರು, 'ಸಾಲು ಸಾಲು ಹಬ್ಬ ಹರಿದಿನಗಳ ಈ ಸಮಯದಲ್ಲಿ ಲಕ್ಷಾಂತರ ಟನ್‌ ಹೂವು, ತರಕಾರಿ ಹಣ್ಣುಗಳನ್ನು ಸರಬರಾಜು ಮಾಡಿತ್ತಿರುವ ಫಲವತ್ತಾದ ಭೂಮಿಯನ್ನು ಕೆಐಎಡಿಬಿಯ ಕಪ್ಪಿ ಮುಷ್ಟಿಯಿಂದ ಬಿಡುಗಡೆಗೊಳ್ಳಿಸಲು ಸರ್ಕಾರ ಮುಂದೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್ ಮಾತನಾಡಿ, 'ಈ ಹಿಂದಿನ ಬಿಜೆಪಿ ಸರ್ಕಾರವೂ ರೈತರ ಹೋರಾಟಗಳನ್ನು ಹತ್ತಿಕ್ಕಲು ಪ್ರಕರಣಗಳನ್ನು ದಾಖಲಿಸಿ, ಪೊಲೀಸರ ಲಾಠಿ, ಬೂಟುಗಳನ್ನು ಹೊಡೆಸಿದರು, ಆದರೆ, ಕಾಂಗ್ರೆಸ್ ಸರ್ಕಾರವೂ ನಿರ್ಲಿಪ್ತ ಧೋರಣೆಗಳು, ಜಾಣ ಕುರುಡಿನ ವರ್ತನೆಯೂ ರೈತರ ಬಾಳಿಗೆ ಕಂಟಕವಾಗಿ ಪರಿಣಮಿಸಿದೆ' ಎಂದು ಆಕ್ರೋಶ ಹೊರಹಾಕಿದರು.

ಹಿರಿಯ ರೈತ ಹೋರಾಟಗಾರ ನಂಜಪ್ಪ ಮಾತನಾಡಿ, 'ಕಾಂಗ್ರೆಸ್‌ ಸರ್ಕಾರ 100 ದಿನದ ಸಂಭ್ರಮಾಚರಣೆಯಲ್ಲಿದ್ದರೇ, ರೈತರು ಮಾತ್ರ ಧರಣಿಯ ನೆಲದಲ್ಲಿ ಆಶಾಭಾವದಿಂದ ಸರ್ಕಾರದತ್ತ ನೋಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂದು ಸಿದ್ದರಾಮಯ್ಯರವರು ಸರ್ಕಾರ ಬಂದರೇ ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಮಾತು ನೀಡಿದ್ದರು, ಇದೀಗ ಅವರೇ ಮುಖ್ಯಮಂತ್ರಿಗಳಾಗಿದ್ದು ಅದಷ್ಟು ಬೇಗ ನುಡಿದಂತೆ ನಡೆದು ರೈತರ ಬಾಳಲ್ಲಿ ಹೊಸ ಚೈತನ್ಯ ಮೂಡಿಸಲಿ' ಎಂದು ಒತ್ತಾಯಿಸಿದರು.

ಇದೇ ವೇಳೆ ರೈತ ಮುಖಂಡರಾದ ಮುಕುಂದ, ಪ್ರಮೋದ್‌, ನಂದನ್, ರವಿ, ರಾಮಾಂಜಿನಪ್ಪ, ವೆಂಕಟರಮಣಪ್ಪ, ಲೋಕೇಶ್, ನಂಜೇಗೌಡ, ಗಣೇಶ್, ಮುನಿರಾಜು ಸೇರಿದಂತೆ ಇತರರು ಇದ್ದರು.

ಸೆಪ್ಟೆಂಬರ್ 10ರ ಒಳಗೆ ಮುಖ್ಯಮಂತ್ರಿಯೊಂದಿಗೆ ಸಭೆ

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಫಲವತ್ತಾದ ಭೂಮಿಯನ್ನು ಕೈಗಾರಿಕೆ ಉದ್ದೇಶದಿಂದ ಭೂ ಸ್ವಾಧೀನಕ್ಕೆ ಮುಂದಾಗಿರುವ ಕೆಐಎಡಿಬಿ ಕ್ರಮವನ್ನು ವಿರೋಧಿಸಿ ಕಳೆದ 506 ದಿನಗಳಿಂದ ಹೋರಾಟ ಮಾಡುತ್ತಿರುವ ಧರಣಿ ನಿರತ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಪ್ಟೆಂಬರ್ 10ರ ಒಳಗೆ ಸಭೆ ನಡೆಸಲಿದ್ದಾರೆ ಎಂದು ಪ್ರಾಂತ್ಯ ರೈತ ಸಂಘದ ರಾಜ್ಯ ಮುಖಂಡರು ತಿಳಿಸಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ಕೆಐಎಡಿಬಿಯ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು ಎಂದು ರೈತರು ಮನವಿ ಮಾಡಿದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ