Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಚೊಕ್ಕಹಳ್ಳಿ ಗ್ರಾಮ ಪಂಚಾಯತಿಯನ್ನು 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಪ್ರಶಸ್ತಿಗೆ ಆಯ್ಕೆ

 

ಸುದ್ದಿಮೂಲ ವಾರ್ತೆ

ಹೊಸಕೋಟೆ,ಸ.29: ತಾಲೂಕಿನ 28 ಗ್ರಾಮ ಪಂಚಾಯತಿಗಳಲ್ಲಿ 5 ಗ್ರಾಮ ಪಂಚಾಯಿತಿಗಳನ್ನು ಅನುಮೋದನೆ ಕಳಿಸಿದ್ದು ಇದರಲ್ಲಿ  ತಾಲೂಕಿನ ಚೊಕ್ಕಹಳ್ಳಿ ಗ್ರಾಮ ಪಂಚಾಯತಿಯನ್ನು 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಪ್ರಶಸ್ತಿಗೆ ಆಯ್ಕೆಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಸಮಿತಿಯಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು  ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಕಾರ್ಯಗಳನ್ನು ಅವಲೋಕಿಸಿ ದೃಢಿಕರಿಸಿ  ಪಂಚಾಯತ್ ರಾಜ್ ಆಯುಕ್ತರಿಗೆ ಪಟ್ಟಿ ಕಳಿಸಿ ಕೊಡಲಾಗಿತ್ತು.

ಜಿಲ್ಲಾ ಪಂಚಾಯತ್ ವತಿಯಿಂದ ಬಂದ ಗ್ರಾ.ಪಂ ಗಳ ಪಟ್ಟಿಯನ್ನು ಸೆಪ್ಟೆಂಬರ್ 25 ರಂದು  ಅಪರ ಮುಖ್ಯ ಕಾರ್ಯದರ್ಶಿಗಳು(ಪಂ.ರಾಜ್) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಮಂಡಿಸಿ ಆಯ್ಕೆಯನ್ನು ಅಂತಿಮಗೊಳಿಸಿದ್ದಾರೆ.

“ಗಾಂಧಿ ಗ್ರಾಮ ಪುರಸ್ಕಾರಕ್ಕೆ” ಆಯ್ಕೆ ಆಗಿವೆ, ಇವುಗಳಲ್ಲಿ ತಾಲೂಕಿನ ಚೊಕ್ಕಹಳ್ಳಿ ಪಂಚಾಯತಿಯು ಆಯ್ಕೆಗೊಂಡಿದೆ. ಎಂದು ಹೊಸಕೋಟೆ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

ಪ್ರಶಸ್ತಿ  ಪ್ರಧಾನ

ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಅಕ್ಟೋಬರ್ -2 ರಂದು ಆಯೋಜಿರುವ ಕಾರ್ಯಕ್ರಮದಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಗ್ರಾಮಾಭಿವೃದ್ಧಿ ಅಧಿಕಾರಿಗಳು ಪ್ರಶಸ್ತಿ ಸ್ವೀಕರಿಸುವಂತೆ ಜಿಲ್ಲಾ ಪಂಚಾಯತಿಗೆ ಸೂಚನೆ ನೀಡಿದ್ದಾರೆ.

ಪ್ರಶಸ್ತಿ:

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿರುವ ಪ್ರತಿ ಗ್ರಾಪಂಗೆ ತಲಾ 5 ಲಕ್ಷ ರೂ, ಪ್ರಶಸ್ತಿ ಹಣ ನೀಡಿ ಗೌರವಿಸಲು ನಿರ್ಧರಿಸಲಾಗಿದೆ.

ಗ್ರಾಮ ಪಂಚಾತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಪಂಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಳೆದ 2013-14ನೇ ಸಾಲಿನಿಂದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಪಂಯನ್ನು ಗಾಂಧಿ ಪುರಸ್ಕಾರಕ್ಕೆ ಆಯ್ಕೆ ಮಾಡಿಕೊಂಡು ಬರಲಾಗುತ್ತಿದೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು 2022 -23ನೇ ಸಾಲಿನಲ್ಲಿ  ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.ಪ್ರಸ್ತುತ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷೆ ರು.ಮತ್ತು ಸದಸ್ಯರುಗಳು ಹಾಗೂ ಸಿಬ್ಬಂದಿಗ ಆಭಾರಿಯಾಗಿದ್ದೇನೆ.

ಮಹೇಶ್

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ   ಚೊಕ್ಕ ಹಳ್ಳಿ .1 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಅವರ ಭಾವಚಿತ್ರ

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ