Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಜೆಪಿಗೆ ಸಂಪೂರ್ಣ ಬಹುಮತ: ಸಿಎಂ ಬೊಮ್ಮಾಯಿ ವಿಶ್ವಾಸ

ಸುದ್ದಿ ಮಾಲ ವಾರ್ತೆ


ಬೆಂಗಳೂರು,ಏ.೦4: ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ. ಕಾರ್ಯಕರ್ತರು ಮತ್ತು ನಾಯಕರಿಗೆ ಆತ್ಮವಿಶ್ವಾಸವಿದೆ ಎಂದರು.

ಏ .8 ರಂದು ಪಟ್ಟಿ ಬಿಡುಗಡೆ ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆದಿದ್ದು, ಎರಡು ದಿನಗಳ ಕಾಲ ನಡೆಯಲಿದೆ. ಸಭೆ ಬಳಿಕ ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು. 8 ನೇ ತಾರೀಖು ಕೇಂದ್ರದಲ್ಲಿ ಚರ್ಚೆಯಾಗಿ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಫಲಿತಾಂಶದ ನಂತರ ಜನರ ಅಭಿಮತ ತಿಳಿಯಲಿದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ ಮತ್ತೆ ಸಿಎಂ ಆಗುವ ಇಚ್ಛೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರೇನೋ ಬಯಸಿದ್ದಾರೆ ಆದರೆ ಜನರ ನಾಡಿ ಮಿಡಿತ ಏನಿದೆಯೋ ಯಾರಿಗೆ ಗೊತ್ತು..? ಫಲಿತಾಂಶ ಬಂದ ಮೇಲೆ ಜನರ ಅಭಿಮತ ತಿಳಿಯಲಿದೆ ಎಂದ ಅವರು ಜನರ ಬೆಂಬಲ ಇದ್ದಾರೆ ಮಾತ್ರ ಶಾಸಕನಾಗಲು ಸಾಧ್ಯ ಎಂದರಲ್ಲದೇ ಸಿದ್ದರಾಮಯ್ಯ ಅವರು ಹೊಸದೇನು ಹೇಳಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲದಿರುವ ಸೀಟಿಗಾಗಿ ಗುದ್ದಾಡುತ್ತಿದ್ದಾರೆ ಎಂದ ಮುಖ್ಯ ಮಂತ್ರಿಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ,ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೊರಾಡುತ್ತಿದೆ. ಜನರಿಗ, ಕರ್ನಾಟಕಕ್ಕೆ ಒಳ್ಳೆಯದು ಮಾಡಬೇಕು ಎಂಬ ಯೋಚನೆ ಮಾಡಿಲ್ಲ ಎಂದರು.

ಆಂತರಿಕ ವಿದ್ಯಾಮಾನಗಳ ಪ್ರತಿಬಿಂಬ ಸಿದ್ದರಾಯಮಯ್ಯ ಹೇಳಿರೋದು ಅಲ್ಲಿ ಆಂತರಿಕವಾಗಿ ನಡೆಯುತ್ತಿರುವ ವಿದ್ಯಮಾನಗಳ ಪ್ರತಿಬಿಂಬ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಮುಖ್ಯಮಂತ್ರಿ ಮಾಡೋದು ಜನ.ಆದರೆ ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಆ ಕನಸು ನನಸಾಗೋದಿಲ್ಲ ಎಂದರು. ಪಕ್ಷಾಂತರ ಬಿಜೆಪಿ ಮೇಲೆ ಪರಿಣಾಮ ಬೀರೋಲ್ಲ

ಆಯನೂರು ಮಂಜುನಾಥ್ ಬಂಡಾಯ, ಶಾಸಕರು ಪಕ್ಷಾಂತರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ 125 ಶಾಸಕರು ಈಗ ಇದ್ದಾರೆ. ಅದರಲ್ಲಿ ಕೆಲವು ಕಡೆ ಇಬ್ಬರು ಆಕಾಂಕ್ಷಿಗಳು ಇದ್ದಾರೆ. ಅಲ್ಲಿ ಸ್ಥಾನ ದೊರೆಯೋಲ್ಲ ಎಂದು ಕೆಲವರು ಬಿಟ್ಟು ಹೋಗಿದ್ದಾರೆ ಅಷ್ಟೆ. ಇದರಿಂದ ಬಿಜೆಪಿ ಹಾಗೂ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಬಿಜೆಪಿಯಿಂದ ಮತ್ತೆ ಯಾರು ಹೋಗೊಲ್ಲ. ಡಿ.ಕೆ.ಶಿವಕುಮಾರ್ ಸುಮ್ಮನೆ ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆ ಅಷ್ಟೆ ಎಂದರು.

 

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ