Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಹಕಾರ ಸಂಘಗಳು ರೈತರ ಜೀವನಾಡಿ: ಶಾಸಕ ಶರತ್ ಬಚ್ಚೇಗೌಡ

ಸುದ್ದಿಮೂಲ ವಾರ್ತೆ

ಹೊಸಕೋಟೆ,26:ಸಹಕಾರ ಸಂಘಗಳು ರೈತರ ಜೀವನಾಡಿಗಳಾಗಿವೆ, ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು

ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಸದಸ್ಯರು ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಕಾರಹಳ್ಳಿ ಹಾಗೂ ಸಿದ್ದನಹಳ್ಳಿಯಲ್ಲಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಲಾಭಾಂಶದಲ್ಲಿ 8 ಲಕ್ಷ ರೂ. ವೆಚ್ಚದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರೈತರಿಗೆ ಸರಕಾರ ನೇರವಾಗಿ ಸವಲತ್ತುಗಳು ನೀಡಲು ಸಾಧ್ಯವಿಲ್ಲ ಎಂಬುದನ್ನು ಅರಿತು ಸಹಕಾರ ಸಂಘಗಳ ಮುಖೇನ ರೈತರ ಬೇಡಿಕೆಗಳಿಗೆ ತಕ್ಕಂತೆ, ಯೋಜನೆ ರೂಪಿಸಿ,ರೈತ ಕುಟುಂಬಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಪ್ರಯತ್ನ ಮಾಡುತ್ತಿವೆ.

ಸತತ ರೈತರ ಸೇವೆಯಲ್ಲಿ ತೊಡಗಿರುವ ನೆಲವಾಗಿಲು ಸಹಕಾರಿ ಸಂಘ ಲಾಭ ಗಳಿಸುವುದರಲ್ಲಿ ಮುಂದಿದೆ.

ನೆಲವಾಗಿಲು ಸಹಕಾರ ಸಂಘದ ವ್ಯಾಪ್ತಿಯಲ್ಲಿ 32 ಹಳ್ಳಿಗಳು ಒಳಗೊಂಡಿದ್ದು,ಅನ್ನಭಾಗ್ಯ ಯೋಜನೆಯ ಪಡಿತರವನ್ನು ಜನರು ಕಿಲೋ ಮೀಟರ್ ದೂರ ಕ್ರಮಿಸಿ

ಬೇರೊಂದು ಗ್ರಾಮದಲ್ಲಿ ಪಡೆಯಬೇಕಾಗಿತ್ತು. ಸಂಸದ ಬಚ್ಚೇಗೌಡರು ಹಾಗೂ ಶಾಸಕರ ಅನುದಾನದಲ್ಲಿ 8 ಗ್ರಾಮಗಳಲ್ಲಿ ಪಡಿತರ ಕೇಂದ್ರವನ್ನು ನಿರ್ಮಿಸಿದ್ದು, ಸಂಘದ ಲಾಭಾಂಶದಲ್ಲಿ ಕಾರಹಳ್ಳಿ ಹಾಗೂ ಸಿದ್ದನಹಳ್ಳಿ ಪಡಿತರ ವಿತರಣಾ ಘಟಕ ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೇ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಬಿ. ಗೋಪಾಲ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಾಜಶೇಖರಗೌಡ, ಟಿಎಪಿಸಿಎಂಎಸ್ ಉಪಾಧ್ಯಕ್ಷ ರವೀಂದ್ರ, ತಾಪಂನ ಮಾಜಿ ಸದಸ್ಯ ಬೀರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಧರ್ಮೇಶ್, ಉದ್ಯಮಿ ಎಂ. ಮಂದೀಪ್‌ಗೌಡ, ಸಂಘದ ಅಧ್ಯಕ್ಷ ಕೆ. ಮಂಜುನಾಥ್, ಉಪಾಧ್ಯಕ್ಷ ಎನ್. ಮಂಜುನಾಥ್, ಸಿಇಒ ಗುರುದೇವ್, ನಿರ್ದೇಶಕರಾದ ಎನ್.ಡಿ. ರಮೇಶ್, ಎಸ್. ಮಂಜುನಾಥ್, ಹೆಚ್.ಕೆ. ನಾರಾಯಣಗೌಡ, ಶ್ರೀನಿವಾಸ್, ರವಿಶಂಕರ್, ಟಿ. ಮುನಿರಾಜು, ಎ.ಆರ್. ಕೃಷ್ಣಪ್ಪ, ಗ್ರಾಪಂನ ಅಧ್ಯಕ್ಷೆ ವಸಂತ ಲೋಕೇಶ್, ಸದಸ್ಯರಾದ ರುಕ್ಮಣಿ ಮಂಜುನಾಥ್, ಸೊಣ್ಣೇಗೌಡ, ಶಿಲ್ಪಶ್ರೀ ಮುನಿರಾಜು, ಸುರೇಶ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ