Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

6 ತಿಂಗಳೊಳಗಾಗಿ ಜನನ-ಮರಣಗಳ ನೋಂದಣಿ ಡಿಜಿಟಲೀಕರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಸುದ್ದಿಮೂಲ ವಾರ್ತೆ

ತುಮಕೂರು, ಆ.21: ಜಿಲ್ಲೆಯಲ್ಲಿ 2015 ರ ಮೊದಲು ನಡೆದಿರುವ ಜನನ-ಮರಣಗಳ ನೋಂದಣಿಯನ್ನು ಮುಂದಿನ 6 ತಿಂಗಳೊಳಗೆ ಸ್ಕ್ಯಾನಿಂಗ್‌ ಮತ್ತು ಡಿಜಿಟೈಜೇಶನ್ ಕಾರ್ಯ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಅಧಿಕಾರಿಗಳೊಂದಿಗೆ ಜನನ-ಮರಣ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯನ್ನು ವಿಡಿಯೋ ಕಾನ್ಫರೆನ್ಸ್

ಮೂಲಕ ಮಾತನಾಡಿದರು.“ನಾಗರಿಕ ನೋಂದಣಿ ಪದ್ಧತಿಯನ್ನು ಉತ್ತಮಪಡಿಸುವ ಸಲುವಾಗಿ 2015ಕ್ಕಿಂತ ಮುಂಚಿನ ಜನನ- ಮರಣ ಘಟನೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಎಲ್ಲಾ ತಾಲ್ಲೂಕು ತಹಶೀಲ್ದಾರರು ಆಯಾ ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿರುವ ಜನನ-ಮರಣ ಘಟನೆಗಳ ಮಾಹಿತಿಯನ್ನು ಸರ್ಕಾರ ನಿಯೋಜಿಸಿರುವ ಕಿಯೋನಿಕ್ಸ್ ಸಂಸ್ಥೆಗೆ ಒದಗಿಸಬೇಕೆಂದು ಸೂಚಿಸಿದರು.

ಸರ್ಕಾರವು 2023-24ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಜಿಲ್ಲೆಯ ಕೊರಟಗೆರೆ ತಾಲೂಕು ಗ್ರಾಮಾಂತರದಲ್ಲಿ 1,24,192, ಮಧುಗಿರಿ-1.49,684 ಹಾಗೂ ತುಮಕೂರು ತಾಲೂಕಿನ ಗ್ರಾಮಾಂತರ ಪ್ರದೇಶದ 1,05,954 ಸೇರಿದಂತೆ ಒಟ್ಟು 3,79,830 ಜನನ-ಮರಣ ಘಟನೆಗಳ ದಾಖಲೆಗಳನ್ನು

ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣ ಮಾಡಲು ಗುರಿ ನಿಗಧಿಪಡಿಸಿದೆ. ಜನನ-ಮರಣ ನೋಂದಣಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ-ಮರಣ ಘಟನೆಗಳನ್ನು ತಪ್ಪದೇ ಶೇ.100ರಷ್ಟು ನೋಂದಾಯಿಸಬೇಕೆಂದು ಆದೇಶ ನೀಡಿದರು.

ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಜಿಲ್ಲೆಯಲ್ಲಿ 5,780 ಬೆಳೆ ಕಟಾವು ಪ್ರಯೋಗಗಳಿದ್ದು, ಎಲ್ಲ ಮೂಲ ಕಾರ್ಯಕರ್ತರು ನಿಯಮಾನುಸಾರ ಪ್ರಯೋಗ ಕೈಗೊಂಡು ನಿಖರವಾಗಿ ಇಳುವರಿ ಮಾಹಿತಿಯನ್ನು ಮೊಬೈಲ್ ಆಪ್ ತಂತ್ರಾಂಶದಲ್ಲಿ ದಾಖಲಿಸಬೇಕು. ಇಳುವರಿ ಮಾಹಿತಿ ದಾಖಲಿಸುವ ಬಗ್ಗೆ ಎಲ್ಲಾ ಮೂಲ ಕಾರ್ಯಕರ್ತರಿಗೆ ಸೂಚಿಸಬೇಕೆಂದು ಕಂದಾಯ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಲ್ಲದೇ, ಬಾಕಿ ಇರುವ ಪೈಕಿ ಪಹಣಿ ಪ್ರಕರಣಗಳನ್ನು ಶೂನ್ಯಕ್ಕೆ ತರಬೇಕು. ನಿಗಧಿಪಡಿಸಿರುವ ಗುರಿ

ಸಾಧಿಸದೆ ಇರುವ, ಯಾವುದೇ ಪ್ರಕರಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸದೆ ಸಭೆಗೆ ಸಮರ್ಪಕ ಮಾಹಿತಿ ನೀಡದ ಶಿರಸ್ತೇದಾರರು, ತಹಶೀಲ್ದಾರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನಿರ್ದೇಶಿಸಿದರು.

ಸ್ಮಶಾನ ಭೂಮಿ ಮಂಜೂರು ಮಾಡುವ ಸಂದರ್ಭದಲ್ಲಿ ಪ್ರತಿ 1000 ಜನಸಂಖ್ಯೆಗನುಗುಣವಾಗಿ 20 ಕುಂಟೆ ಮಾತ್ರ ಭೂಮಿಯನ್ನು ಮಂಜೂರು ಮಾಡಬೇಕು ಎಂದು ತಾಲ್ಲೂಕು ಅಧಿಕಾರಿಗಳಿಗೆ ನಿರ್ದೇಶಿಸಿದ ಅವರು, ಜಿಲ್ಲೆಯಲ್ಲಿರುವ ಕಾಡುಗೊಲ್ಲರ ಹಟ್ಟಿಗಳನ್ನು ಪತ್ತೆ ಮಾಡಿ ಹಟ್ಟಿಯಲ್ಲಿ ಶಾಲೆ ಹಾಗೂ ಅಂಗನವಾಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದಿದ್ದಲ್ಲಿ ಮಾಹಿತಿ ನೀಡಬೇಕು. ಮುಂದಿನ 15 ದಿನಗಳೊಳಗಾಗಿ ಬಾಕಿ ಇರುವಕಂದಾಯ ಇಲಾಖೆಗೆ ಸಂಬಂಧಿಸಿರುವ ಎಲ್ಲಾ ಪ್ರಕರಣಗಳಲ್ಲಿ ಶೇ.50ರಷ್ಟು ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ