Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಪಿಎಲ್ ಕಾರ್ಡ್ ಹೊಂದಿರುವವರಿಗೂ ಉಚಿತ ಡಯಾಲಿಸಿಸ್ ಗೆ ಚಿಂತನೆ : ವಿ.ಸೋಮಣ್ಣ

ಸುದ್ದಿಮೂಲ ವಾರ್ತೆ

ಬೆಂಗಳೂರು.ಮಾ.21: ಬಿಪಿಎಲ್‌ ಕಾರ್ಡ್‌ ದಾರರಂತೆ ಎಪಿಎಲ್‌ ಕಾರ್ಡು ಹೊಂದಿರುವವರಿಗೂ ಉಚಿತ ಡಯಾಲಿಸಿಸ್‌ಗೆ ಅವಕಾಶ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.


            ಅವರು ಇಂದು ನಗರದ  ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರುತಿ ಮಂದಿರ ವಾರ್ಡ್ ನಲ್ಲಿ ವಸತಿ  ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಬೃಹತ್ ಬೆಂಗಳೂರು ಮಹಾನಗರ  ಪಾಲಿಕೆ ಮತ್ತು ಇನ್ಸ್ಟಿಟ್ಯೂಟ್ ಆಫ್ ನೆಪ್ರೂ  ಯುರಾಲಾಜಿ ಇವರ  ಸಂಯುಕ್ತಶ್ರಾಯದಲ್ಲಿ  ಏರ್ಪಡಿಸಲಾಗಿದ್ದ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ"ದ ಪ್ರಥಮ  ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು

ಎಪಿಎಲ್‌ ಕಾರ್ಡು ಹೊಂದಿರುವವರಿಗೂ ಉಚಿತ ಡಯಾಲಿಸಿಸ್‌ ಗೆ ಅವಕಾಶವನ್ನು ಕಲ್ಪಿಸಿಕೊಡುವ ಬಗ್ಗೆ ಈಗಾಗಲೇ ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಿದ್ದು ಶೀಘ್ರದಲ್ಲಿಯೇ ಈ ಯೋಜನೆಯನ್ನು ಕಾರ್ಯಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟು 68 ಡಯಾಲಿಸಿಸ್ ಉಪಕರಣಗಳ ವ್ಯವಸ್ಥೆಯನ್ನು ಮಾಡಲು ಸ್ಥಳಾವಕಾಶವಿದ್ದು, ಪ್ರಾರಂಭದಲ್ಲಿ 2 ಉಪಕರಣಗಳಿಂದ ಪ್ರಾರಂಭವಾಗಿ ಇದೀಗ 42 ಉಪಕರಣಗಳು ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಯ ಮೂಲಕ ಅತ್ಯುತ್ತಮ ಸೇವೆಯನ್ನು ನೀಡಲಾಗುತ್ತಿದೆ ಎಂದರು.

 

ಮಾನವೀಯತೆ ನಿಟ್ಟಿನಲ್ಲಿ ಕೆಲಸ ಮಾಡಬೇಕು  ಇಡೀ ನಗರದಲ್ಲಿ ಐತಿಹಾಸಿಕ ಕಟ್ಟಡಗಳಲ್ಲಿ 90 ಭಾಗ ಕಟ್ಟಡವನ್ನು ಗೋವಿಂದರಾಜ್ ನಗರ ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ  ಮುಂದಿನ ದಿನಗಳಲ್ಲಿ ಬಿಬಿಎಂಪಿ ರವರ ನೇತೃತ್ವದಲ್ಲಿ ಪಂತರಪಾಳ್ಯದಲ್ಲಿ  ಡಾ. ಪುನೀತ್ ರಾಜ್ ಕುಮಾರ್ ಹೆಸರಲ್ಲಿ 210 ಬೆಡ್ ಗಳ  ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದ್ದೇವೆ, ವಾಯುವಿಹಾರಕ್ಕಾಗಿ  16 ಎಕರೆ ಜಾಗವನ್ನು ಕೆರೆ ಹಣದಲ್ಲಿ ಲೋಕಾರ್ಪಣೆ ಮಾಡಲಿದ್ದೇವೆ.

ಇದೆ ಸಂದರ್ಭದಲ್ಲಿ  ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರೀನಾಥ,   ಇನ್ಸ್ಟಿಟ್ಯೂಟ್ ಆಫ್ ನೆಪ್ರೂ  ಯುರಾಲಾಜಿ ನಿರ್ದೇಶಕರಾದ   ಡಾ. ಕೇಶವಮೂರ್ತಿ ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ