Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಲು ಡಿಸಿ ಸೂಚನೆ

ಸುದ್ದಿಮೂಲ ವಾರ್ತೆ

ತುಮಕೂರು, ಅ.07: ಜಿಲ್ಲೆಯಲ್ಲಿ ಅ. 9 ರಿಂದ 14 ರವರೆಗೆ ಹಮ್ಮಿಕೊಂಡಿರುವ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಲು ಸೂಕ್ತ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ಲಸಿಕಾಕರಣದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹೆಯಲ್ಲಿ ಮೊದಲ ಹಾಗೂ 2ನೇ ಸುತ್ತಿನ ಲಸಿಕಾಕರಣದಲ್ಲಿ ಶೇ.100ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿರುವಂತೆ 3ನೇ ಸುತ್ತಿನಲ್ಲೂ ಗುರಿ ಮೀರಿ ಸಾಧಿಸಬೇಕೆಂದು ನಿರ್ದೇಶನ ನೀಡಿದರು.

ಈ ಲಸಿಕಾಕರಣದಲ್ಲಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳು ಹಾಗೂ ಗರ್ಭಿಣಿ ಸ್ತೀಯರು ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು. ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರ, ಉಪಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಉಚಿತವಾಗಿ ಲಸಿಕೆ ನೀಡುವ ಬಗ್ಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಟಾಂಟಾಂ ಮಾಡಲು ಕ್ರಮವಹಿಸಬೇಕು. ಕಟ್ಟಡ ನಿರ್ಮಾಣ ಸ್ಥಳ, ತೋಟದ ಮನೆ, ವಲಸಿಗರ ಮನೆ ಸೇರಿ ಅಪಾಯದಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕೆ ನೀಡಬೇಕು ಎಂದು ಸೂಚಿಸಿದರು.

ಹೊಸದಾಗಿ ಮಕ್ಕಳು ಶಾಲೆಗೆ ನೋಂದಣಿಯಾಗುವ ಸಮಯದಲ್ಲಿ ಈ ಹಿಂದೆ ಪಡೆದಿರುವ ಲಸಿಕೆಗಳ ಬಗ್ಗೆ ಪರಿಶೀಲಿಸಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರನ್ನು ಪ್ರೇರೇಪಿಸಬೇಕು. ರೈಲ್ವೆ ಹಳಿಗಳ ಪಕ್ಕದಲ್ಲಿ ವಾಸವಿರುವ ವಲಸೆ ಗರ್ಭಿಣಿ ಮತ್ತು 5 ವರ್ಷದೊಳಗಿನ ಮಕ್ಕಳಿಗೂತಪ್ಪದೆ ಲಸಿಕೆ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಸಿ.ಆರ್.ಮೋಹನ್ ಮಾತನಾಡಿ, ಅಕ್ಟೋಬರ್ 9ರಿಂದ 14ರವರೆಗೆ ಜಿಲ್ಲಾದ್ಯಂತ ಹಮ್ಮಿಕೊಂಡಿರುವ 3ನೇ ಸುತ್ತಿನ ಇಂದ್ರಧನುಷ್ ಲಸಿಕಾಕರಣದಲ್ಲಿ 0-2 ವರ್ಷದೊಳಗಿನ 3309, 2-5 ವರ್ಷದೊಳಗಿನ 56 ಹಾಗೂ 719 ಗರ್ಭಿಣಿಯರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 642 ಲಸಿಕಾ ಸತ್ರಗಳನ್ನು ತೆರೆಯಲು ಕ್ರಮ ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಇಂದ್ರಧನುಷ್ ಅಭಿಯಾನ ಕುರಿತು ಆರೋಗ್ಯ ಇಲಾಖೆ ಹೊರತಂದಿರುವ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ