Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮೆಟ್ರೋ ಸುರಂಗ ಮಾರ್ಗ ಕೊರೆಯುವ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ 

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು 14 : ನಮ್ಮ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಲಕ್ಕಸಂದ್ರ ಸುರಂಗ ಮಾರ್ಗ ಹಾಗೂ ಮಹಾತ್ಮ ಗಾಂಧಿ ರಸ್ತೆಯ ಸುರಂಗ ಸ್ಟೇಷನ್ ಬಳಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ತೆರಳಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮೆಟ್ರೋ ಸುರಂಗ ಕಾಮಗಾರಿ ಬಹಳ ಉತ್ತಮವಾಗಿ ಸಾಗುತ್ತಿದೆ. ಅಧಿಕಾರಿಗಳು ಎಷ್ಟೇ ಹೇಳಿದರೂ ಕಾಮಗಾರಿಯ ಪ್ರಗತಿಯನ್ನು ನಾನು ಕಣ್ಣಾರೆ ನೋಡಬೇಕು ಎಂದು ಇಲ್ಲಿಗೆ ಭೇಟಿ ನೀಡಿದ್ದೇನೆ. ಅಧಿಕಾರಿಗಳ ಮಾಹಿತಿ ಪ್ರಕಾರ 20.9 ಕಿಮೀ ಸುರಂಗ ಮಾರ್ಗ ಆಗಿದೆ. ಒಟ್ಟು 18 ನಿಲ್ದಾಣಗಳನ್ನು ಮಾಡಲಾಗುತ್ತಿದೆ. ನಾಲ್ಕು ಪ್ಯಾಕೇಜ್‌ ನಲ್ಲಿ ಈ ಯೋಜನೆ ತೆಗೆದುಕೊಳ್ಳಲಾಗಿದೆ.

ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೆ, ಮತ್ತೆ ಕೆಲವು ಕಡೆಗಳಲ್ಲಿ ಶೇ.70-80 ರಷ್ಟು ಪೂರ್ಣವಾಗಿದೆ. 2025ರ ಮಾರ್ಚ್ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು, ಗುತ್ತಿಗೆದಾರರು, ಸರಕಾರ ಎಲ್ಲರ ಸಹಕಾರ ಬೇಕು. ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ ಕಾಮಗಾರಿ ತೀವ್ರಗತಿಯಲ್ಲಿ ಸಾಗುತ್ತಿದೆ ಎಂದರು.

ಸುರಂಗ ರಸ್ತೆ ನಿರ್ಮಾಣದ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿ ಹೇಗೆ ಮಾಡಲಾಗುತ್ತಿದೆ ಎಂಬುದನ್ನು ನೋಡುತ್ತಿದ್ದೇವೆ. ಈ ವಿಚಾರವಾಗಿ ಸದ್ಯದಲ್ಲೇ ಮಾಹಿತಿ ನೀಡುತ್ತೇನೆ. ಈ ಕಾಮಗಾರಿಗಳು ತಾಂತ್ರಿಕವಾಗಿ ನಡೆಯುತ್ತವೆ. ಇವು ಬಹಳ ಸುರಕ್ಷಿತವಾಗಿ ಮಾಡಬೇಕಾದ ಕೆಲಸ. ಹೀಗಾಗಿ ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ಯಾರು ಟೀಕೆ ಮಾಡುತ್ತಾರೆ ಎಂಬುದು ಮುಖ್ಯ ಅಲ್ಲ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ