Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಡಿಸಿಪಿ-ಎಸ್‌ಪಿಗಳೇ ಹೊಣೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.15: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ ಐ ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಾದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನ ಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಅನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಸರ್ಕಾರ ಶೂನ್ಯ ಸಹಿಷ್ಣುತೆ ವಹಿಸಲಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಎಚ್ಚರಿಸಿದರು.

ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಕಡ್ಡಾಯವಾಗಿ ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು, ಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಿ ಎಂದು ಸಿಎಂ ಸೂಚನೆ ನೀಡಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಗೋಷ್ಠಿಯಲ್ಲಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ