Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಸತಿ ನಿಲಯ ಅವ್ಯವಸ್ಥೆ, ವಿದ್ಯಾರ್ಥಿಗಳು ಉಪವಾಸ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.4:ಊರಿಂದ ಊರಿಗೆ ಬಂದ ಪಾಠ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಇರಲು ಉತ್ತಮವಾದ ವಾತವರಣವಿರಬೇಕು. ಆದರೆ ಕೊಪ್ಪಳ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಪರಿಶಿಷ್ಟ ವರ್ಗ ವಸತಿ ನಿಲಯ ಅವ್ಯವಸ್ಥೆಯ ಆಗರವಾಗಿದೆ. ಇಲ್ಲಿಯ ಕುಡಿವ ನೀರಿನ ಟ್ಯಾಂಕಿನಲ್ಲಿ ಪಾಚಿ ಗಟ್ಟಿದೆ. ಸ್ವಚ್ಛತೆ ಇಲ್ಲ. ವಿದ್ಯಾರ್ಥಿಗಳಿಗೆ ಸರಿಯಾದ ಊಟ ನೀಡುವುದಿಲ್ಲ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಇಂದು ಟಿಫಿನ್ ಮಾಡದೆ ಪ್ರತಿಭಟಿಸಿದರು.

ಕೊಪ್ಪಳ ನಗರದ ಜಿಲ್ಲಾಡಳಿತ ಭವನದ ಹಿಂದೆ ಇರುವ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುವ ಪರಿಶಿಷ್ಠ ವರ್ಗಗಳ ಮೆಟ್ರಿಕ್ ನಂತರ ವಸತಿ ನಿಲಯವಿದೆ. ಈ ವಸತಿ ನಿಲಯದಲ್ಲಿ ಒಟ್ಟು 450 ವಿದ್ಯಾರ್ಥಿಗಳಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ದೊಡ್ಡ ಕಟ್ಟಡವನ್ನು ನಿರ್ಮಿಸಿದ್ದಾರೆ. ಆದರೆ ಇಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಊಟ. ವಸತಿಗೆ ಸರಿಯಾದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿಗಳಿಗೆ ಊಟ ಹಾಗು ಟಿಫಿನ್ ಸಹ ಎಲ್ಲರಿಗೂ ನೀಡುತ್ತಿಲ್ಲ. ಇಂದು ಮುಂಜಾನೆ ಕೇವಲ 150 ವಿದ್ಯಾರ್ಥಿಗಳಿಗೆ ಟಿಫಿನ್ ನೀಡಿ ಉಳಿದ 300 ಜನ ವಿದ್ಯಾರ್ಥಿಗಳಿಗೆ ಟಿಫಿನ್ ಇಲ್ಲ ಎಂದಿದ್ದಾರೆ. ಇದೇ ರೀತಿ ಆಗಾಗ ಅರ್ಧಕ್ಕಿಂತ ಹೆಚ್ಚು ಇವಿದ್ಯಾರ್ಥಿಗಳಿಗೆ ಉಪವಾಸವಿರುವಂತಾಗಿದೆ.

ಈ ಮಧ್ಯೆ ಹಾಸ್ಟೆಲ್ ನಲ್ಲಿ ನೀರಿನ ಟ್ಯಾಂಕುಗಳಿವೆ. ಈ ಟ್ಯಾಂಕುಗಳನ್ನು ಸ್ವಚ್ಛ ಮಾಡದ ಹಿನ್ನೆಲೆಯಲ್ಲಿ ಅದರಲ್ಲಿ ನೀರಿನ ಮೇಲೆ ಪಾಚಿಗಟ್ಟಿದೆ. ಇದೇ ನೀರನ್ನು ಬಳಕೆ ಹಾಗು ಕುಡಿವದಕ್ಕೆ ಉಪಯೋಗಿಸಬೇಕಾದ ಅನಿವಾರ್ಯತೆ ಇದೆ.

ಇಲ್ಲಿರುವ ವಿದ್ಯಾರ್ಥಿಗಳಿಗೆ ಶೌಚಾಲಯಗಳ ಸಂಖ್ಯೆ ಕಡಿಮೆ ಇದೆ. ಬಹುತೇಕ ಶೌಚಾಲಯಗಳು ಸ್ವಚ್ಛವಾಗಿಲ್ಲ. ಬಾತ್ ರೂಮ್ ಹಾಗು ಶೌಚಾಲಯಗಳು ಗಬ್ಬು ನಾರುತ್ತಿವೆ. ಇಡೀ ಹಾಸ್ಟೆಲ್ ನಲ್ಲಿ ಸ್ವಚ್ಛತೆ ಎಂಬುವುದು ಮಾಯವಾಗಿದೆ. ಪ್ರತಿ ತಿಂಗಳು ಸಾಬೂನು. ಕೊಬ್ಬರಿ ಎಣ್ಣೆ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಕಿಟ್ ನೀಡಬೇಕು. ಕಳೆದ ನಾಲ್ಕು ತಿಂಗಳಿನಿಂದ ನೀಡಿಲ್ಲ. ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಖರೀದಿಸುತ್ತಿದ್ದಾರೆ.

ಇದರಿಂದ ಬೇಸತ್ತ ವಿದ್ಯಾರ್ಥಿಗಳು ಇಂದು ಹಾಸ್ಟೆಲ್ ನಲ್ಲಿ ಪ್ರತಿಭಟನೆ ನಡೆಸಿದರು. ವಸತಿ ನಿಲಯಕ್ಕೆ ಸರಿಯಾದ ವ್ಯವಸ್ಥೆ ಕಲ್ಪಿಸಿ ಎಂದು ಮನವಿ ಮಾಡಿಕೊಂಡರು.

ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕೊಪ್ಪಳ ಸಮಾಜ ಇಲಾಖೆಯ ಸಹಾಯಕ ನಿರ್ದೇಶಕಿ ಶೇಖ್ ಅಹ್ಮದಿ ಹಾಸ್ಟೆಲ್ ಸಮಸ್ಯೆಯನ್ನು ಪಟ್ಟಿ ಮಾಡಿ ಎಲ್ಲವನ್ನು ಸರಿ ಪಡಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ