Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅನ್ಯ ದೇಶಗಳಲ್ಲಿ ಶಿಕ್ಷಕರದ್ದು ವೃತ್ತಿ, ನಮ್ಮಲ್ಲಿ ಅತಿ ಎತ್ತರದ ಗೌರವ :ಡಾ. ಚಂದ್ರಶೇಖರ ಕಂಬಾರ

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ, 23; ಭಾರತೀಯ ಸಂಸ್ಕೃತಿಕ ಬೇರುಗಳು ಎಲ್ಲಿ ಹರಡಿಕೊಂಡಿವೆಯೋ ಅಲ್ಲಿ ಮಾತ್ರ ಶಿಕ್ಷಕರಿಗೆ ಮಹೋನ್ನತ ಗೌರವ ದೊರೆಯುತ್ತದೆ. ನಮ್ಮಲ್ಲಿ ಅಕ್ಷರ ಕಲಿಸುವವರಿಗೆ ಬಹು ಎತ್ತರದ ಸ್ಥಾನ ದೊರೆಯುತ್ತಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹೇಳಿದ್ದಾರೆ.

ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ದಕ್ಷಿಣ ವಲಯ – 1 ಮತ್ತು 2 ರ ಅನದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕ ಸ್ನೇಹಿತ, ಗುರು, ಮಾರ್ಗದರ್ಶಕ ಎಲ್ಲವೂ ಆಗಿದ್ದಾನೆ. ಬೇರೆ ದೇಶಗಳಲ್ಲಿ ಶಿಕ್ಷಕರದ್ದು ವೇತನ ಪಡೆಯುವ ಒಂದು ವೃತ್ತಿ ಮಾತ್ರ. ನಮ್ಮಲ್ಲಿ ಗುರುವಿನ ದರ್ಶನವಾದರೆ ಪಾವನ ಎಂಬ ಮನಸ್ಥಿತಿ ಇದೆ. ಇದು ನಮ್ಮ ದೇಶದ ಅತಿ ದೊಡ್ಡ ಸೌಭಾಗ್ಯ ಎಂದರು.

ನಮ್ಮ ಶಾಸನ ಸಭೆಗಳು ಸಹ ಶಿಕ್ಷಣ ಮತ್ತು ಶಿಕ್ಷಕರ ಸಮಸ್ಯೆಗಳ ಬಗ್ಗೆ ಅತ್ಯಂತ ಪ್ರಬುದ್ಧವಾಗಿ ಬೆಳಕು ಚೆಲ್ಲುತ್ತಿದ್ದು, ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಮೂಲತಃ ಬೋಧಕ ವೃತ್ತಿಯಿಂದ ಬಂದ ತಮಗೆ ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಅತ್ಯಂತ ಸಂತಸ ತರುತ್ತದೆ ಎಂದು ಹೇಳಿದರು.

ವಿಧಾನಪರಿಷತ್ತಿನ ಮಾಜಿ ಉಪಸಭಾಪತಿ ಪುಟ್ಟಣ್ಣ ಮಾತನಾಡಿ, ಹಿಂದಿನ ಶಿಕ್ಷಣ ವ್ಯವಸ್ಥೆ ಈಗಿಲ್ಲ, ಇಂದಿನ ಪದ್ಧತಿಯಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ಶಿಕ್ಷಕರ ವೃತ್ತಿ ಕವಲು ಹಾದಿಯಲ್ಲಿದೆ. ಈಗಿನ ಪರಿಸ್ಥಿತಿಯಲ್ಲಿ ಅತ್ಯಂತ ಒತ್ತಡದಲ್ಲಿ ಮತ್ತು ಸೂಕ್ಷ್ಮವಾಗಿ ಕೆಲಸ ಮಾಡಬೇಕಾದ ಸನ್ನಿವೇಶ ಎದುರಾಗಿದೆ. ಹೀಗಾಗಿ ವಕೀಲರು ಮತ್ತು ವೈದ್ಯಕೀಯ ವೃತ್ತಿಪರರಿಗೆ ಇರುವ ರಕ್ಷಣೆ ಶಿಕ್ಷಕರಿಗೂ ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ತಿದ್ದುಪಡಿಯಾಗದಿದ್ದರೆ ಶಿಕ್ಷಣದ ಗುಣಮಟ್ಟ ಸುಧಾರಿಸಲು ಸಾಧ್ಯವಿಲ್ಲ ಎಂದರು.

ಸರ್ಕಾರಿ ಶಿಕ್ಷಕರಿಗೆ ನೀಡುವ ಶಿಕ್ಷಕರ ಪ್ರಶಸ್ತಿ ಮುಂದಿನ ವರ್ಷದಿಂದ ಅನುದಾನಿತ ಮತ್ತು ಖಾಸಗಿ ಶಾಲೆಗಳ ಶಿಕ್ಷಕರಿಗೂ ದೊರೆಯಲಿದ್ದು, ಈ ಸಂಬಂಧ ಶೀಘ್ರದಲ್ಲೇ ಆದೇಶ ಜಾರಿಯಾಗಲಿದೆ. ಸರ್ಕಾರದ ದೃಷ್ಟಿಯಲ್ಲಿ ಶಿಕ್ಷಕರನ್ನು ಸಮಾನವಾಗಿ ನೋಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ರಾಜ್ಯ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಬಿ. ಕೆಂಚಪ್ಪ ಗೌಡ, ಕಾರ್ಯದರ್ಶಿ ವೆಂಕಟರಾಮೇಗೌಡ, ಕ್ರೆಡೋ ಅರ್ಲಿ ಚೈಲ್ಡ್ ವುಡ್ ಸಲೂಷನ್ಸ್ ನ ಸಹ ಸಂಸ್ಥಾಪಕರಾದ ಮೃದುಲ ಶ್ರೀಧರ್, ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆ.ಬಿ. ನಿಂಗರಾಜಪ್ಪ, ಶಿಕ್ಷಣಾಧಿಕಾರಿಗಳಾದ ಎನ್. ವೆಂಕಟೇಶ್, ಎಲ್.ಎಚ್. ಮುತ್ತಯ್ಯ, ಸಿ.ಡಿ. ಜಯಲಕ್ಷ್ಮಿ, ಎಚ್.ಎನ್. ಗಿರಿಜಮ್ಮ ಹಾಗೂ ನಗೆ ಯೋಗದಲ್ಲಿ ಗಿನ್ನೆಸ್ ದಾಖಲೆ ನಿರ್ಮಿಸಿರುವ ರಂಗಲಕ್ಷ್ಮಿ ಶ್ರೀನಿವಾಸ್ ಮತ್ತಿತರರು ಪಾಲ್ಗೊಂಡಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ