Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕರ್ನಾಟಕ ಸಂಸ್ಕೃತಿಗೆ ವಚನಕಾರರ ಕೊಡುಗೆ ಅಪಾರ : ಡಾ.ಚಿತ್ತಯ್ಯ ಪೂಜಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.21: ಪುಸ್ತಕಗಳನ್ನು ಓದುವ ಹವ್ಯಾಸ ಇತ್ತೀಚೆಗೆ ಕಡಿಮೆಯಾಗುತ್ತಿರುವುದು ದುರಾದೃಷ್ಟಕರ. ಸಾಹಿತ್ಯ ಲೋಕಕ್ಕೆ ವಚನಕಾರರು ನೀಡಿದ ಕೊಡುಗೆ ಅಪಾರ ಎಂದು ಬೆಂ.ವಿವಿ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ. ಚಿತ್ತಯ್ಯ ಪೂಜಾರ್ ತಿಳಿಸಿದರು.

ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ - ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ ಆಯೋಜಿಸಿತ್ತು.

ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಬೆಂ.ವಿವಿ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ. ಚಿತ್ತಯ್ಯ ಪೂಜಾರ್ ‘ಕರ್ನಾಟಕ ಸಂಸ್ಕೃತಿಗೆ ವಚನಕಾರರ ಕೊಡುಗೆ’ ಕುರಿತು ಉಪನ್ಯಾಸ ನೀಡಿದರು.

12ನೇ ಶತಮಾನದ ವಚನಕಾರರು ಕನ್ನಡ ಭಾಷೆಯನ್ನು ಅತ್ಯಂತ ಸರಳೀಕರಿಸುವ ಮೂಲಕ ಜನ ಸಾಮಾನ್ಯರಲ್ಲಿ ಸಾಹಿತ್ಯಾಭಿರುಚಿ ಮೂಡಿಸುವ ಕಾರ್ಯ ಮಾಡಿದರು. ಪುಸ್ತಕಗಳನ್ನು ಓದುವ ಹವ್ಯಾಸ ಇತ್ತೀಚೆಗೆ ಕಡಿಮೆಯಾಗುತ್ತಿರುವುದು ದುರಾದೃಷ್ಟಕರ. ಸಾಹಿತ್ಯ ಲೋಕಕ್ಕೆ ವಚನಕಾರರು ನೀಡಿದ ಕೊಡುಗೆ ಅಪಾರ. ವಚನ ಸಾಹಿತ್ಯ ಬದುಕಿಗೆ ಅಗತ್ಯವಿರುವ ಎಲ್ಲಾ ಮೌಲ್ಯಗಳನ್ನು ಕಟ್ಟಿಕೊಟ್ಟಿದ್ದಾರೆ ಎಂದರು.

ಸಾಮಾಜಿಕ, ಆರ್ಥಿಕ ಮತ್ತು ಬೌದ್ಧಿಕ ಚಳುವಳಿಗಳು ನಡೆದಿದ್ದು 12ನೇ ಶತಮಾನದಲ್ಲಿ. ಆಕಾಲಕ್ಕೆ ಅನುಭವ ಮಂಟಪ ನಿರ್ಮಾಣವಾಗಿದ್ದು, ವಚನಗಳ ಚರ್ಚೆ ನಡೆಸಲಾಗುತ್ತಿತ್ತು. ಶರಣರು ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದರಲ್ಲದೆ ಅಂದೇ ಆಯ್ದಕ್ಕಿ ಲಕ್ಕಮ್ಮನಂತವರು ದಾಸೋಹದ ಕಲ್ಪನೆ ಜಾರಿಗೊಳಿಸಿದರು ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ಹನ್ನೆರಡನೆ ಶತಮಾನ ಧಾರ್ಮಿಕ ಸಿದ್ಧಾಂತಗಳ ತಿಕ್ಕಾಟ, ಆಚಾರ-ವಿಚಾರಗಳ ಆತಂಕ, ಜಾತಿ-ಮತ-ಪಂಥಗಳ ಹೊಡೆದಾಟ. ಇಂತಹ ಸಮಾಜದಲ್ಲಿ ವಚನಕಾರರು ತ್ರಿವಿಧ ದಾಸೋಹಗಳಿಗೆ ಬದ್ಧನಾಗಿ ಇಹಲೋಕದಲ್ಲಿಯೇ, ಆತ್ಮ ಸಾಕ್ಷಾತ್ಕಾರದ ಬಗ್ಗೆ ಅರಿವು ಮೂಡಿಸುತ್ತಾರೆ ಎಂದು ತಿಳಿಸಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ಮತ್ತು ವಿಶ್ರಾಂತ ಪ್ರಾಂಶುಪಾಲರು ಹಾಗೂ ದತ್ತಿಯ ದಾನಿಗಳಾದ ಪ್ರೊ. ಚಂದ್ರಿಕಾ ಪುರಾಣಿಕ , ದೀಪ್ತಿ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಸತ್ಯಮಂಗಲ ಮಹಾದೇವ ಉಪಸ್ಥಿತರಿದ್ದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ