Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಾವೇರಿ: ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಡಾ.ಎಲ್.ಹನುಮಂತಯ್ಯ ಆಗ್ರಹ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಸೆ.27: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಭುಗಲೆದ್ದಿರುವ ಕಾವೇರಿ ಜಲ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕೆಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಒತ್ತಾಯಿಸಿದರು.

ತಾಲೂಕಿನ ತಲದುಮ್ಮನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಗಾಯಗೊಂಡಿರುವ ಪತ್ರಕರ್ತ ಸಿವಿ ಲಕ್ಷ್ಮಣರಾಜು ಅವರ ಆರೋಗ್ಯವನ್ನು ವಿಚಾರಿಸಿದ ನಂತರ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲ ವಿವಾದ ಹೊಸದಲ್ಲ ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯದ ವಕೀಲರು ತಮ್ಮ ಪ್ರಾಮಾಣಿಕ ಪ್ರಯತ್ನ ಮಾಡಿದರೂ ಸಹ ತೀರ್ಪುಗಳು ಆ ರೀತಿ ಬರುತ್ತಿವೆ ಎಂದು ಹೇಳಿದರು.

ಸುಪ್ರೀಂಕೋರ್ಟ್‍ನಲ್ಲಿ ಹೋಗಿ ತೀರ್ಪು ಮರು ಪರಿಶೀಲನೆಗೆ ಅರ್ಜಿ ಹಾಕಬೇಕಿದೆ. ಕರ್ನಾಟಕದ ಪರಿಸ್ಥಿತಿಯನ್ನು ಮೇಲ್ಮನವಿ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಹೊರತು ಬೇರೆ ಮಾರ್ಗವಿಲ್ಲವೆಂದರು.

ನಮ್ಮ ಹೋರಾಟಗಾರರು ಮತ್ತು ರಾಜಕೀಯ ಪಕ್ಷಗಳು ಸುಪ್ರೀಂ ಕೋರ್ಟ್ ನ್ಯಾಯಾಲಯದ ವಿರುದ್ಧವಾಗಿ ಹೋಗಲು ಹೇಳುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಯಾರು ನ್ಯಾಯಾಂಗದ ವಿರುದ್ಧ ಹೋಗಿಲ್ಲ ಎಂಬುದು ನಮಗೆ ಗೊತ್ತಿದೆ. ಎಲ್ಲರು ಹೇಳುವುದು ಮಾಜಿ ಸಿಎಂ ಬಂಗಾರಪ್ಪ ಹೀಗೆ ಮಾಡಿದ್ದರಲ್ಲ ಸಿಎಂ ಸಿದ್ದರಾಮಯ್ಯ ಯಾಕೆ ಮಾಡಬಾರದು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಆದರೇ ಮಾಜಿ ಸಿಎಂ ಬಂಗಾರಪ್ಪ ಕಾಲಾವಧಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇರಲಿಲ್ಲ. ಸುಪ್ರೀಂಕೋರ್ಟ್ ಅಂತಿಮ ತೀರ್ಪು ಬಂದಿರಲಿಲ್ಲ. ಆಗ ಅಂತಹ ನಿರ್ಧಾರವನ್ನು ತೆಗೆದುಕೊಂಡಿದ್ದು ಸರಿಯೇ ಇತ್ತು ಎಂದರು.

ಬಿಎಸ್ ಯಡಿಯೂರಪ್ಪ, ಹೆಚ್‍ಡಿ ಕುಮಾರಸ್ವಾಮಿ ಹಾಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಇರಲಿ ದೇಶದ, ನೆಲದ ಕಾನೂನಿಗೆ ವಿರುಧ್ಧವಾಗಿ ನಡೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಆದರೇ ನಾವು ನೀರು ಕೊಡಲು ಆಗುವುದಿಲ್ಲ ಎನ್ನುವುದು ದಾಖಲು ಮಾಡಬೇಕು. ನ್ಯಾಯಾಲಯಕ್ಕೆ ಮನವರಿಕೆ ಆಗುವಂತಹ ರೀತಿಯಲ್ಲಿ ಹೇಳಬೇಕು. ಆ ಮೂಲಕ ನ್ಯಾಯ ಪಡೆಯಬೇಕೇ ಹೊರತು ನೀರನ್ನು ಸಂಪೂರ್ಣವಾಗಿ ನಿಲ್ಲಿಸಿ ನ್ಯಾಯ ಪಡೆಯುತ್ತೇವೆ ಎಂಬುದು ಕಷ್ಟ ಸಂದರ್ಭ ಜಲ ವಿವಾದವನ್ನು ಇತ್ಯರ್ಥ ಮಾಡಲು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ ಎಂದು ವಿವರಿಸಿದರು.

ಉಪ ಮುಖ್ಯಮಂತ್ರಿ ಚರ್ಚೆ ಬೇಡ:

ರಾಜ್ಯದಲ್ಲಿ ಆಡಳಿತದ ದೃಷ್ಠಿಯಿಂದ ಇನ್ನೂ ಮೂರು ಉಪ ಮುಖ್ಯಮಂತ್ರಿ ಸ್ಥಾನವನ್ನು ಹೆಚ್ಚಿಸಲು ಸಚಿವ ಕೆ.ಎನ್.ರಾಜಣ್ಣ ಅವರು ಪ್ರಸ್ತಾವನೆ ಮಂಡಿಸಲು ಯಾರು ಪ್ರೇರಣೆ ಎಂದು ಗೊತ್ತಿಲ್ಲ. ಆದರೇ ಉಪಮುಖ್ಯಮಂತ್ರಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಯಾವುದೇ ಮಂತ್ರಿ ಅಥವಾ ನಾಯಕರು ತೀರ್ಮಾನ ಮಾಡುವ ವಿಚಾರವಲ್ಲ. ಅದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಪತ್ರಕರ್ತ ಸಿವಿ ಲಕ್ಷ್ಮಣರಾಜು ಅವರ ತಾಯಿ ಗಂಗಮ್ಮ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ವೆಂಕಟಸ್ವಾಮಿ ಗಂಗನಬೀಡು, ಚಿಂತಾಮಣಿಕೃಷ್ಣ, ಪಿಡಿಓ ಎಂ.ವೆಂಕಟಚಲಪತಿ, ಎಸ್.ಬಿ.ಐ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಶಿವಪ್ಪ, ಪತ್ರಕರ್ತ ಸಿವಿ ಲಕ್ಷ್ಮಣರಾಜು, ಕಾಂಗ್ರೆಸ್ ಮುಖಂಡ ನರಸಿಂಹ (ಎನ್.ಟಿ.ಆರ್.), ಸಮಾಜಸೇವಕ ನಾಗರಾಜ್, ಕುಂದಲಗುರ್ಕಿ ಮುನೀಂದ್ರ, ದಸಂಸ ತಾಲೂಕು ಸಂಚಾಲಕ ಚಲಪತಿ ಮತ್ತಿತರರು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ