Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ತಲಕಾಯಬೆಟ್ಟದ ಸಾಗುವಳಿ ಜಮೀನಿಗೆ ಬೇಲಿ : ರೈತರ ಆಕ್ರೋಶ

 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಸೆ. 11 : ತಲಕಾಯಲಬೆಟ್ಟದ ಆಸುಪಾಸಿನ ರೈತರು ಸಚಿವ ಈಶ್ವರ್ ಖಂಡ್ರೆ ಅವರನ್ನು ಬೆಂಗಳೂರಿನ ಅರಣ್ಯ ಭವನದಲ್ಲಿ ಭೇಟಿ ಮಾಡಿ, ಸಾಗುವಳಿ ಜಮೀನುಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಲಿ ಹಾಕುವುದಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದರು.

ಈ ವೇಳೆ ರಾಜೀವ್‍ಗೌಡ ಅವರು ರೈತರು ಎದುರಿಸುತ್ತಿರುವ ಸಮಸ್ಯೆಯನ್ನು ಸಚಿವರಿಗೆ ವಿವರಿಸಿ, ತಲಕಾಯಲಬೆಟ್ಟದ ಆಸುಪಾಸು ಗ್ರಾಮಗಳ ರೈತರು ಹತ್ತಾರು ವರ್ಷಗಳಿಂದಲೂ ಸಾಗುವಳಿ ನಡೆಸುತ್ತಾ ಬದುಕನ್ನು ಕಟ್ಟಿಕೊಂಡಿದ್ದಾರೆ ಅನೇಕರಿಗೆ ಸಾಗುವಳಿ ಚೀಟಿ ವಿತರಣೆ ಆಗಿದ್ದು ಕೊಳವೆ ಬಾವಿ ಕೊರೆಸಿ ನಾನಾ ಹೂವು ಹಣ್ಣು ತರಕಾರಿಗಳನ್ನು ಬೆಳೆದು ಬದುಕನ್ನು ಸಾಗಿಸುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಏಕಾ ಏಕಿ ಬಂದು ರೈತರ ಜಮೀನುಗಳಲ್ಲಿ ಜೆಸಿಬಿಗಳಿಂದ ಟ್ರಂಚ್ ನಿರ್ಮಿಸಿ ಬೇಲಿ ಹಾಕುತ್ತಿದ್ದಾರೆ.

ಮುಂಚಿತವಾಗಿ ಯಾವುದೇ ನೊಟೀಸ್ ನೀಡುತ್ತಿಲ್ಲ, ಜಮೀನಿನಲ್ಲಿ ಇರುವ ಬೆಳೆಯನ್ನು ಕಟಾವು ಮಾಡಿಕೊಳ್ಳಲು ಕೂಡ ಅವಕಾಶ ಕೊಡುತ್ತಿಲ್ಲ. ಕೇಳಿದರೆ ಇದು ಮೀಸಲು ಅರಣ್ಯದ ಜಾಗ ಆಗಿದೆ 1935ರಲ್ಲೇ ಮೀಸಲು ಅರಣ್ಯ ವ್ಯಾಪ್ತಿಗೆ ಈ ಜಮೀನುಗಳನ್ನು ಸೇರಿಸಲಾಗಿದೆ ಎನ್ನುತ್ತಿದ್ದಾರೆ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರದ ಆದೇಶದಂತೆ ಮೀಸಲು ಅರಣ್ಯದಲ್ಲಿನ ಎಲ್ಲ ಜಮೀನುಗಳನ್ನು ವಶಕ್ಕೆ ತೆಗೆದುಕೊಂಡು ಬೇಲಿ ಹಾಕಲಾಗುತ್ತಿದೆ ಎನ್ನುತ್ತಿರುವ ಅರಣ್ಯ ಅಧಿಕಾರಿಗಳನ್ನು ಪ್ರಶ್ನಿಸುವ ರೈತರನ್ನು ಪೊಲೀಸ್ ಬಲ ಉಪಯೋಗಿಸಿ ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಅಧಿಕಾರಿಗಳು ಮಾಡುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಕೋರಿದರು.

ಸಚಿವ ಈಶ್ವರ್ ಖಂಡ್ರೆ ಅವರು, ರೈತರನ್ನು ಮಾತನಾಡಿಸಿ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ಲಿಖಿತ ಮನವಿಯನ್ನು ನನಗೆ ನೀಡಿ ಈ ಕೂಡಲೇ ವಾಸ್ತವ ಸ್ಥಿತಿಗತಿಗಳ ವರದಿ ಪಡೆದು ಬಲವಂತವಾಗಿ ಒಕ್ಕಲೆಬ್ಬಿಸುವುದಕ್ಕೆ ಕಡಿವಾಣ ಹಾಕುತ್ತೇನೆ. ಈ ಕುರಿತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುತ್ತೇನೆ. ಜಮೀನಿನಲ್ಲಿ ಬೆಳೆದ ಬೆಳೆಗಳ ಕಟಾವಿಗೆ ನಿರ್ಬಂಧ ಹಾಕದಂತೆ ಆದೇಶಿಸುತ್ತೇನೆ. ಯಾವುದೆ ಕಾರಣಕ್ಕೆ ರೈತರು ಆತಂಕ ಪಡಬೇಡಿ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಡಿ.ಪಿ.ನಾಗರಾಜ್, ತಲಕಾಯಲಬೆಟ್ಟ ನಾರಾಯಣಸ್ವಾಮಿ, ಪಾಂಡುರಂಗ, ಸೈಯದ್ ಬಾಬಾ, ತಲಕಾಯಲಬೆಟ್ಟ ಆಸುಪಾಸಿನ ಗ್ರಾಮಗಳ ರೈತರು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ