Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರ: ಈಶ್ವರ ಖಂಡ್ರೆ

ಸುದ್ದಿಮೂಲ ವಾರ್ತೆ

ಮೈಸೂರು, ಜು.16: ಕಂದಾಯ ಮತ್ತು ಅರಣ್ಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಎಚ್‌.ಡಿ.ಕೋಟೆಯಲ್ಲಿ ಭಾನುವಾರ ಶಾಸಕರು ಮತ್ತು ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಜನರ ಅಹವಾಲಿಗೆ ಸ್ಪಂದಿಸಿದರು.

ಇಲ್ಲಿನ ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ ಇರುವ ಗೊಂದಲದ ಕುರಿತಂತೆ ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಒದಗಿಸಲು ಶೀಘ್ರವೇ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಿ, ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲಾ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ ಕುರಿತಂತೆ ಪರ್ಯಲೋಚಿಸುವುದಾಗಿ ಸಚಿವರು ತಿಳಿಸಿದರು.

ಇದೇ ವೇಳೆ ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು ಅವರು ತಮ್ಮ ಕ್ಷೇತ್ರದಲ್ಲಿ ಆನೆಗಳ ಹಾವಳಿ ಇದ್ದು ಕನಿಷ್ಠ 72 ಕಿಲೋಮೀಟರ್ ರೈಲ್ವೆ ಬ್ಯಾರಿಕೆಡ್ ನಿರ್ಮಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು ಒಂದೇ ವರ್ಷದಲ್ಲಿ 72 ಕಿಲೋಮೀಟರ್ ಒಂದೇ ಭಾಗದಲ್ಲಿ ನಿರ್ಮಿಸಲು ಸಾಧ್ಯವಿಲ್ಲ, ಆದರೆ ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ನಂತರ ಸಚಿವರು, ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಹವಾಲುಗಳನ್ನು ಸಚಿವರು ಪರಿಶೀಲಿಸಿ 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲು ಉಳಿಮೆ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುಔರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಎಂದು ಸೂಚಿಸಿದರು.

ಹಿರಿಯ ಐಎಫ್ಎಸ್ ಅಧಿಕಾರಿಗಳಾದ ರಂಗರಾವ್, ಕುಮಾರ್ ಪುಷ್ಕರ್, ರಮೇಶ್ ಕುಮಾರ್, ಹರ್ಷಕುಮಾರ್ ಮತ್ತು ಎಚ್ ಡಿ ಕೋಟೆಯ ತಹಶೀಲ್ದಾರ್ ಸಭೆಯಲ್ಲಿ ಭಾಗವಹಿಸಿದ್ದರು.ಮಾಜಿ ಶಾಸಕ ಸಂದೇಶ್ ನಾಗರಾಜ್ ಅವರು ಈ ಸಭೆಯಲ್ಲಿ ಪಾಲ್ಗೊಂಡು ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ