Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಹಾಲಿ ಮುಖ್ಯಮಂತ್ರಿ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ

ಬೆಂಗಳೂರು: ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದವೇ ಎಂದು ತಮ್ಮ ಟೀಕಿಸಿದ್ದ ಸಿಎಂ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವಂತೆ ಆಗ್ರಹ ಮಾಡಿದಾರೆ.


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 'ಸಿದ್ದನೆಪ' ಹೇಳದೆ ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆದು ಬದ್ಧತೆ ತೋರಿ ಎಂದು ಹೇಳಿದ್ದಾರೆ ಹಾಗೂ 'ನೈಸಿಗೆ ನ್ಯಾಯ ಕೊಡಿ' ಎಂದು ಹ್ಯಾಷ್ ಟ್ಯಾಗ್ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ.


ಮಾನ್ಯ ಸಿದ್ದರಾಮಯ್ಯರವರೇ; ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. ತಾವು 'ಸತ್ಯರಾಮಯ್ಯ'ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ ಎಂದು ಕುಮಾರಸ್ವಾಮಿ ಅವರು ಸಲಹೆ ಮಾಡಿದ್ದಾರೆ.


ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.


ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ ಬಿಜೆಪಿ ಸರಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು. ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ ಸಿದ್ದರಾಮಯ್ಯನವರೇ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ 'ನಿತ್ಯ ಕಿರುಕುಳ'ವನ್ನು ಮರೆಯಲಾದೀತೆ? ಎಂದು ಅವರು ಚಾಟಿ ಬೀಸಿದ್ದಾರೆ.


ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ, ನಿಜ ಒಪ್ಪಿಕೊಳ್ಳುತ್ತೇನೆ. ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ 'ಅಪರ ಹರಿಶ್ಚಂದ್ರ'ನ ಸರಕಾರ! ಹೌದಲ್ಲವೇ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.


ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. 'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ? ಎಂದು ಕುಮಾರಸ್ವಾಮಿ ಅವರು ಕುಟುಕಿದ್ದಾರೆ.


ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಹಾಲಿ ಮುಖ್ಯಮಂತ್ರಿಗಳನ್ನು ಮಾಜಿ ಮುಖ್ಯಮಂತ್ರಿಗಳು ಕಾಲೆಳೆದಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ