Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್‌ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿ ಮುಖ್ಯಾಂಶಗಳು

ಜು,3:ಗೃಹ ಸಚಿವ, ಎಂಪಿಎಂ ಅಧ್ಯಕ್ಷರಾಗಿ ಮತ್ತು ಅನೇಕ ಜವಾಬ್ದಾರಿಯುತ ಸ್ಥಾನಗಳನ್ನು ಅರಗ ಜ್ಞಾನೇಂದ್ರ ಅವರು ನಿಭಾಯಿಸಿದ್ದಾರೆ. ಇಂತಹ ವ್ಯಕ್ತಿ ಬಾಯಿ ತಪ್ಪಿನಿಂದ ಹೇಳಿದೆ, ಕಣ್ತಪ್ಪಿನಿಂದ ಹೇಳಿದೆ ಎನ್ನುವ ವಯಸ್ಸು ಅಲ್ಲ ಜ್ಞಾನವೂ ಅಲ್ಲ.

ಬಿಜೆಪಿಯ ಯಾವುದೇ ನಾಯಕರು ಅರಗ ಜ್ಞಾನೇಂದ್ರ ಅವರ ಈ ಹೇಳಿಕೆಯನ್ನು ಏಕೆ ಖಂಡಿಸುತ್ತಿಲ್ಲ, ಅವರ ಮನಸ್ಸಿನಲ್ಲಿಯೂ ಅದೇ ಆಲೋಚನೆ ಇದೆಯೇ? ಮೋದಿಯವರು ಸಹ ಇದೇ ಮನಸ್ಥಿತಿ ಹೊಂದಿರುವವರೆ, ಏಕೆಂದರೆ ಅವರ ಸಂಪುಟದ ಅನೇಕ ಸದಸ್ಯರು ಈ ತರಹದ ಹೇಳಿಕೆ ನೀಡಿದಾಗಲೂ ಸುಮ್ಮನಿದ್ದರು. ಅನಂರತಕುಮಾರ್‌ ಹೆಗಡೆ "ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಹೇಳಿಕೆಯಿಂದ ಹಿಡಿದು ಯತ್ನಾಳರ ತನಕ ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಅರಗ ಜ್ಞಾನೇಂದ್ರ ಅವರು ಕ್ಷಮೆ ಕೇಳಿ ಉಪಯೋಗವಿಲ್ಲ, ಅವರಿಂದ ರಾಜಿನಾಮೆ ಪಡೆಯಬೇಕು. ಖರ್ಗೆಯವರ ಹಾಗೂ ಈಶ್ವರ ಖಂಡ್ರೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವದರ ಜೊತೆಗೆ ಬಣ್ಣವೂ ಸೇರಿಕೊಂಡಿದೆ, ಇದಕ್ಕಿಂತ ದೊಡ್ಡ ಅಪರಾಧ ಇನ್ನಿಲ್ಲ. ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ.

ಅರಗ ಅವರು "ನಾನು ಖರ್ಗೆಯವರ ಹೆಸರು ತೆಗೆದುಕೊಂಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಸ್ಪೀಕರ್‌ಗೆ ದೂರು ಸಲ್ಲಿಸಲಾಗುವುದು, ಕೋರ್ಟಿಗೂ ಹೋಗಲಾಗುವುದು, ನಂದಿತಾ ಅವರ ಕೇಸಿನಲ್ಲೂ ಅತ್ಯಾಚಾರ ಎಂದು ಸುಳ್ಳು ಬಿಂಬಿಸಿದವರು ಅರಗ, ಪೊಲೀಸರನ್ನು ನಾಯಿಗಳು ಎಂದವರು, ಹೆಣ್ಣು ಮಕ್ಕಳು 7 ಗಂಟೆ ನಂತರ ಏಕೆ ಓಡಾಡಬೇಕು ಎಂದಂತಹ ವ್ಯಕ್ತಿ ಇವರು. ಖರ್ಗೆಯವರ ವಿಚಾರದಲ್ಲಿ ಕೇವಲ ವಿಷಾದ ವ್ಯಕ್ತಪಡಿಸುವುದು ಬೇಕಿಲ್ಲ, ನೇರವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬೃಹತ್‌ ಪತ್ರಿಭಟನೆ ಹಾಗೂ ಮಾನನಷ್ಟ ಮೊಕದ್ದಮೆ ಹೂಡಲಾಗುವುದು.

ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಕಳಂಕ, ಕುವೆಂಪು ಅವರು, ಅನಂತಮೂರ್ತಿ, ಗೋಪಾಲಗೌಡರು, ಬದ್ರಿನಾರಾಯಣ್‌ ಅವರಂತಹ ಸಂಸದೀಯ ಪಟುಗಳು ಗೆದ್ದುಬಂದಂತಹ ಕ್ಷೇತ್ರ ಇಂತಹ ಕ್ಷೇತ್ರಕ್ಕೆ ಅವಮಾನ ಮಾಡುತ್ತಿದ್ದಾರೆ.

ಕಸ್ತೂರಿ ರಂಗನ್‌ ವಿಚಾರಕ್ಕೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರೇ ಒಪ್ಪಿಗೆ ನೀಡಿದ್ದಾರೆ. ನಮ್ಮ ಕಾಂಗ್ರೆಸ್‌ ಸರ್ಕಾರ ಇದಕ್ಕೆ ವಿರೋಧ ಮಾಡಿತ್ತು. ತೀರ್ಥಹಳ್ಳಿಯ ಜನರನ್ನು ಮಂಗ ಮಾಡಲು ಇಲ್ಲಿ ವಿರೋಧ ಮಾಡುವುದು, ಕೇಂದ್ರದಲ್ಲಿ ಒಪ್ಪಿಗೆ ನೀಡುವ ಕಣ್ಣಾಮುಚ್ಚಲೆ ಆಡುತ್ತಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ