Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆರ್ ಎಸ್ ಎಸ್ ನಿಂದ ಮಹಾ ಸಾಂಘಿಕ, ಸಹ ಭೋಜನ

ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.25:
ಕುಟುಂಬ ಪ್ರಭೋಧನ, ಪರಿಸರ ಸಂರಕ್ಷಣೆ, ನಾಗರೀಕ ಶಿಷ್ಟಾಾಚಾರ, ಸಾಮಾಜಿಕ ಸಾಮರಸ್ಯ ಹಾಗೂ ಸ್ವದೇಶಿ ಬಳಕೆ, ಈ ಪಂಚ ಪರಿವರ್ತನೆ ಸಮಾಜದಲ್ಲಿ ಅಳವಡಿಸಿದಾಗ ಭಾರತ ಜಗತ್‌ಜನನಿಯಾಗುವುದಲ್ಲಿ ಯಾವ ಸಂದೇಹವೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಾಂತದ ಸಹ ಪ್ರಾಾಂತ ಬೌದ್ಧಿಿಕ ಪ್ರಮುಖ ರಾಮಚಂದ್ರ ಎಡಕೆ ಅಭಿಮತ ವ್ಯಕ್ತಪಡಿಸಿದರು.
ನಗರದ ನೂತನ ವಿದ್ಯಾಾಲಯ ಮೈದಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಕಲಬುರಗಿ ನಗರದ ವತಿಯಿಂದ ಹಮ್ಮಿಿಕೊಂಡಿದ್ದ ಮಹಾ ಸಾಂಘಿಕ, ಸಹ ಭೋಜನ ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾಾರರಾಗಿ ಆಗಮಿಸಿ ಮಾತನಾಡಿ,ಸಂಘದ ಶತಮಾನೋತ್ಸವ ಹಿನ್ನೆೆಲೆ ಪಂಚ ಪರಿವರ್ತನೆ ಸಮಾಜದಲ್ಲಿ ತರುವ ಪ್ರಯತ್ನ ಸಮಾಜದ ಪ್ರತಿಯೊಬ್ಬನ ಕರ್ತವ್ಯವಾಗಬೇಕು ಎಂದರು.
ರಾಷ್ಟ್ರದ ಆಧಾರ ಸಮಾಜ. ಸಮಾಜದ ಅಡಿಗಲ್ಲು ಕುಟುಂಬ. ಕೌಟುಂಬಿಕ ಮೌಲ್ಯಗಳ ಪೋಷಣೆಯ ಆಶಯದೊಂದಿಗೆ ಕುಟುಂಬದ ಸದಸ್ಯರಲ್ಲಿ ರಾಷ್ಟ್ರೀಯ ಹಾಗೂ ಸಾಮಾಜಿಕ ವಿಚಾರಗಳ ಕುರಿತು ವೈಚಾರಿಕ,ಸಾಂಸ್ಕೃತಿಕ ಜಾಗೃತಿ. ರಾಷ್ಟ್ರ ನಿರ್ಮಾಣದಲ್ಲಿ ಕುಟುಂಬವೊಂದರ ಪಾತ್ರ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದರು.
ಪರಿಸರ ಸಂರಕ್ಷಣೆ ಮಾಡಿದಾಗ ಮಾತ್ರ ಭವಿಷ್ಯದ ಪೀಳಿಗೆಗೆ ಉಳಿಗಾಲವಿದೆ. ಹೆಚ್ಚೆೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರಕ್ಕೆೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕಿದೆ. ಸಮಾಜದಲ್ಲಿ ಜಾತಿ ಬೇಧವಿಲ್ಲದೆ ಎಲ್ಲರೂ ನಮ್ಮವರು ಎಂಬ ಭಾವ ಮೂಡಿಸಿ,ಸಮಾಜದಲ್ಲಿ ಸಾಮಾಜಿಕ ಸಾಮರಸ್ಯದ ನಿರ್ಮಾಣ ಮಾಡಬಹುದಾಗಿದೆ. ಅದೇ ರೀತಿ ಭಾರತದ ನಾಗರೀಕರಾದ ನಾವುಗಳು ನಮ್ಮ ನಾಗರೀಕತೆ ಏನೆಂಬುದು ಅರಿಯಬೇಕು. ಹಿರಿಯರಿಗೆ ಗೌರವ ನೀಡುವುದು ಇವೆಲ್ಲವೂ ನಮ್ಮ ಕರ್ತವ್ಯವಾಗಿದೆ. ಸ್ವದೇಶಿ ಉತ್ಪನ್ನಗಳ ಬಳಕೆಯಿಂದ ನಾವು ನಮ್ಮತನವನ್ನು ಎತ್ತಿಿ ಹಿಡಿಯಬೇಕಾಗಿದೆ ಎಂದರು.
ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಸಂಘಚಾಲಕ ಅಶೋಕ್ ಪಾಟೀಲ್, ಪ್ರಾಾಂತ ಕಾರ್ಯಕಾರಿಣಿ ಸದಸ್ಯ ಗಿರೀಶ್ ಹೆಬ್ಬಾಾರ್, ಆರೆಸ್ಸೆೆಸ್ ವಿಭಾಗ ಪ್ರಚಾರಕ ವಿಜಯ್ ಮಹಾಂತೇಶ,ನಗರ ಕಾರ್ಯವಾಹ ಸಂಜೀವ ಹುಲಿಮನಿ ಇದ್ದರು. ಸುಮಾರು 3 ಸಾವಿರಕ್ಕೂ ಅಧಿಕ ಜನ ಸಹ ಭೋಜನದಲ್ಲಿ ಭಾಗಿಯಾಗಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ