Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಾವೇರಿ ನೀರನೆಲ್ಲಾ ಬಿಟ್ಟು ಸರ್ಪಪಕ್ಷ ಸಭೆ ನಡೆಸಿದರೇನು ಫಲ : ಎಚ್‌.ಡಿ.ರೇವಣ್ಣ

ಸುದ್ದಿಮೂಲ ವಾರ್ತೆ

ಮೈಸೂರು, ಸೆ.13:ಕಾವೇರಿ ಕೊಳ್ಳದ ಜಲಾಶಯಗಳೆಲ್ಲವೂ ಖಾಲಿ ಆಗುತ್ತಿರುವುದನ್ನು ಪರಿಗಣಿಸದೇ ಮತ್ತೆ ಹದಿನೈದು ದಿನಗಳವರೆಗೆ 5 ಸಾವಿರ ಕ್ಯುಸೆಕ್‌ ಬಿಡಬೇಕೆಂದು ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸೂಚಿಸಿರುವುದು ರೈತರು ರೊಚ್ಚಿಗೇಳುವಂತೆ ಮಾಡಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಸಂಘಟನೆಗಳು ರಸ್ತೆತಡೆ, ಅರೆಬೆತ್ತಲೆ ಮೆರವಣಿಗೆ, ಧರಣಿ ಸೇರಿದದಂತೆ ನಾನಾ ರೀತಿಯಲ್ಲಿ ಪ್ರತಿಭಟನೆಗಳನ್ನು ಬುಧವಾರ ಮಾಡಲಾಯಿತು. ಈ ವೇಳೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಯಿತು.



ಇಧೇ ವೇಳೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ, ಜಲಾಶಯಗಳಲ್ಲಿ ನೀರೆಲ್ಲಾ ಹೋದ ಮೇಲೆ ಸರ್ವಪಕ್ಷಗಳ ಸಭೆ ಕರೆದರೆ ಏನು ಪ್ರಯೋಜನ ಎಂದು ಕಿಡಿಕಾರಿದರು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ನಿಯಂತ್ರಣ ಸಮಿತಿ ಸೂಚನೆ ಅವೈಜ್ಞಾನಿಕವಾದುದು ಎಂದು ಟೀಕಿಸಿದರು.

ಭಿಕ್ಷಾಪಾತ್ರೆ ಹಿಡಿದು ಪ್ರತಿಭಟನೆ

ಮಂಡ್ಯದ ಸಂಜಯ್ ವೃತ್ತದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ಭಿಕ್ಷಾಪಾತ್ರೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೇ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನು ಬೀದಿಗೆ ನಿಲ್ಲಿಸಿದೆ ಎಂದು ಕಿಡಿಕಾರಿರುವ ಪ್ರತಿಭಟನಾಕಾರರು, ‘ಕಾವೇರಿ ನಮ್ಮದು ಕಾವೇರಿ ನಮ್ಮದು’. ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಧಿಕ್ಕಾರ’ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆತಡೆ

ಮಂಡ್ಯ ಮತ್ತು ಮದ್ದೂರಿನಲ್ಲಿ ರಸ್ತೆತಡೆ ನಡೆಸಲಾಯಿತು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರೈತಸಂಘ ಸೇರಿದಂತೆ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ನೀರು ಹರಿಸಲು ಮುಂದಾದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ರೈತಸಂಘದ ಮುಖಂಡರಾದ ಜಗದೀಶ್, ಇಂಡವಾಳು ಸಿದ್ದೇಗೌಡ, ಸುರೇಶ್, ನಾಗರಾಜ್ ಗಾಣದಾಳು, ಇಂಡುವಾಳು ಬಸವರಾಜು, ಜಯಕರ್ನಾಟಕ ಜಿಲ್ಲಾಧ್ಯಕ್ಷ ಜಯಣ್ಣ, ಕರುನಾಡ ಸೇವಕರು ಸಂಘಟನೆಯ ಚಂದ್ರು ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮದ್ದೂರಿನಲ್ಲಿ ರಸ್ತೆತಡೆ: ತಮಿಳುನಾಡಿಗೆ ನೀರು ಹರಿಸುವ ಶಿಫಾರಸು ಖಂಡಿಸಿ ಮದ್ದೂರಿನ ಪ್ರವಾಸಿಮಂದಿರದ ವೃತ್ತದ ಹೆದ್ದಾರಿಯಲ್ಲಿ ರೈತಸಂಘದ ಕಾರ್ಯಕರ್ತರು ರಸ್ತೆತಡೆ ನಡೆಸಿದರು. ಕೀಳಘಟ್ಟ ನಂಜುಂಡಯ್ಯ, ಸೊ.ಸಿ.ಪ್ರಕಾಶ್, ರಾಮಣ್ಣ, ರಾಜಣ್ಣ, ಹನುಮಂತು, ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಣ್, ಇತರರು ಭಾಗವಹಿಸಿದ್ದರು.

ಧರಣಿ ಆರಂಭ

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಮತ್ತೆ ಧರಣಿ ಆರಂಭಿಸಿದ್ದು, ಹಲವು ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.‌ ಕೇಂದ್ರ ಸರಕಾರ ಮಧ್ಯಪ್ರವೇಶಿಸಿ ಸಮಸ್ಯೆಗೆ ಪರಿಹಾರ ರೂಪಿಸಬೇಕು. ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯದ ಜನರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು. ಕಾವೇರಿ ಹೋರಾಟವನ್ನು ರೈತ ಹಿತರಕ್ಷಣಾ ಸಮಿತಿಯ ವೇದಿಕೆಯ ನೇತೃತ್ವದಲ್ಲಿ ನಡೆಸುವಂತೆ ಹೋರಾಟಗಾರರಲ್ಲಿ ಸಮಿತಿ ಮುಖಂಡರು ಮನವಿ ಮಾಡಿದರು. ಸರಕಾರದ ನಡೆ ನೋಡಿಕೊಂಡು ಹೋರಾಟದ ರೂಪುರೇಷೆ ರೂಪಿಸಲು ಸಮಿತಿ ಸಭೆ ನಿರ್ಣಯ ಕೈಗೊಂಡಿತು.

ಮಾಜಿ ಶಾಸಕರಾದ ಎಂ.ಎಸ್.ಆತ್ಮಾನಂದ, ಜಿ.ಬಿ.ಶಿವಕುಮಾರ್, ಕೆ.ಟಿ.ಶ್ರೀಕಂಠೇಗೌಡ, ರೈತ ಮುಖಂಡರಾದ ಸುನಂದಾ ಜಯರಾಂ, ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ನಗರಸಭೆ ಮಾಜಿ ಅಧ್ಯಕ್ಷೆ ಅಂಬುಜಮ್ಮ, ಕೀಲಾರ ಕೃಷ್ಣ, ದಸಂಸ ಮುಖಂಡ ಎಂ.ವಿ. ಕೃಷ್ಣ, ಕಾರಸವಾಡಿ ಮಹದೇವ್, ಎಂ.ಎಲ್ ತುಳಸೀಧರ್ ಇತರರು ಧರಣಿಯಲ್ಲಿ ಭಾಗವಹಿಸಿದ್ದರು.

ಸರ್ವಪಕ್ಷ ಸಭೆ ಕರೆದರೇನು ಫಲ ?

ಈಗಾಗಲೇ ಹೇಮಾವತಿ, ಕೆಆರ್‌ಎಸ್‌, ಕಬಿನಿ, ಹಾರಂಗಿ ಜಲಾಶಯಗಳಲ್ಲಿ ನೀರು ಖಾಲಿಯಾಗಿ, ಕೃಷಿಗೆ ಇರಲಿ, ಕುಡಿಯುವ ನೀರಿಗೂ ತೊಂದರೆ ಆಗುತ್ತಿದೆ. ಇಂತಹ ವೇಳೆ ಸರ್ವಪಕ್ಷ ಸಭೆ ಕರೆದರೆ ಏನು ಪ್ರಯೋಜನ ಎಂದು ಪ್ರಶ್ನಿಸಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು, ರಾಜ್ಯ ಸರ್ಕಾರ ಕಾವೇರಿ ನೀರಿನ ವಿಚಾರದಲ್ಲಿ ಕಾನೂನಿನ ಹೋರಾಟವನ್ನು ನಿರೀಕ್ಷಿತ ರೀತಿಯಲ್ಲಿ ಮಾಡಲಿಲ್ಲ. ಇದು ಇಂದಿನ ಸಮಸ್ಯೆ ಉದ್ಬವವಾಗುವುದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಅವೈಜ್ಞಾನಿಕ

ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಬಿಡುವಂತೆ ಸೂಚನೆ ನೀಡಿರುವ ಹಿನ್ನಲೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಒಪ್ಪಬಾರದು. ಈ ನಿರ್ಧಾರ ಅವಾಸ್ತವ ಅವೈಜ್ಞಾನಿಕವಾಗಿದೆ.ಈ ನಿರ್ಧಾರದ ವಿರುದ್ಧ ಸುಪ್ರೀಕೋರ್ಟ್ ನಲ್ಲಿ ಅಪೀಲ್ ಮಾಡಬೇಕು.. ಸರ್ಕಾರ ರೈತರ ಹಿತ ಕಾಪಾಡದೆ ಇದ್ದರೆ ರೈತರು ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ