Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ತಮ್ಮ ಸರ್ಕಾರ ಉರುಳಿಸಿದವರ ಜೊತೆ ಎಚ್‌ಡಿಕೆ ಕೈಜೋಡಿಸಿದ್ದಾರೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.15: ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಪದ್ಮನಾಭನಗರದ ವಿವಿಧ ಪಕ್ಷಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, “ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಆದರೂ ಮಾಡಿಕೊಳ್ಳಲಿ, ಏನನ್ನಾದರೂ ಜೋಡಿಸಿಕೊಳ್ಳಲಿ, ಅದು ನಮಗೆ ಸಂಬಂಧಪಟ್ಟಿದ್ದಲ್ಲ ಎಂದರು.

ನಾನು ಅನೇಕ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರನ್ನು ಮೈತ್ರಿ ಬಗ್ಗೆ ಕೇಳಿದೆ. ಅದಕ್ಕೆ ಅವರುಗಳು ನಮ್ಮ ಸರ್ಕಾರ ಬೀಳಿಸಿದವರ ಹತ್ತಿರವೇ ಕುಮಾರಸ್ವಾಮಿ ಅವರಿಗೆ ಮತ್ತೆ ಏಕೆ ನೆಂಟಸ್ತನ? ಹಾಗಾದರೆ ಪಕ್ಷದ ನೀತಿ ಏನು? ನಾವು ಕಾರ್ಯಕರ್ತರಿಗೆ ಏನು ಹೇಳುವುದು ಎಂದು ಕೇಳುತ್ತಿದ್ದಾರೆ, ನಮಗೆ ಉತ್ತರ ನೀಡಲು ಆಗುತ್ತಿಲ್ಲ. ವಿರೋಧ ಪಕ್ಷಗಳಿಗೆ ನಾವು ಉತ್ತರ ಕೊಡುವುದಿಲ್ಲ, ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉತ್ತರ ಕೊಡುತ್ತಾರೆ ಎಂದರು.

2028 ರಲ್ಲಿ ಪದ್ಮನಾಭನಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎನ್ನುವ ಭರವಸೆಗೆ ಶುಕ್ರವಾರದ ಶುಭದಿನ ಪೀಠಿಕೆಯಾಗಿದೆ. ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ವಿಶ್ವ ಪ್ರಜಾಪ್ರಭುತ್ವ ದಿನ ಸಾಕ್ಷಿಯಾಗಿದೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಕಾಂಗ್ರೆಸ್ ಪಕ್ಷ ನಿಮ್ಮನ್ನು ನಡೆಸಿಕೊಳ್ಳುತ್ತದೆ. ತಾಳ್ಮೆಯಿಂದ ಇದ್ದರೆ ನಿಮಗೂ ಒಂದಲ್ಲ ಒಂದು ದಿನ ಸೂಕ್ತ ಸ್ಥಾನಮಾನ ದೊರೆಯುತ್ತದೆ. ಸಾಕಷ್ಟು ಸಮಿತಿಗಳು, ನಿಗಮ ಮಂಡಳಿಗಳು ಇವೆ ಎಂದರು.

ಕಾಂಗ್ರೆಸ್ ಪಕ್ಷ ಸೇರುವವರನ್ನು ತಡೆದರು, ಅಡ್ಡಿಪಡಿಸಿದರು. ಈಗ ಬಿಜೆಪಿಗೆ ಕಾರ್ಯಕರ್ತರು ನೆನಪಾಗುತ್ತಿದ್ದಾರೆ. ಅಶೋಕಣ್ಣನಿಗೆ ಅನೇಕ ಕ್ಷೇತ್ರಗಳು ಇದ್ದವು ಅಲ್ಲೆ ಎಲ್ಲಾದರೂ ನಿಲ್ಲಬಹುದಿತ್ತು, ಯಾಕೋ ಇಲ್ಲೇ ಬಂದು ನಿಂತು ನಿಷ್ಟಾವಂತ ಕಾರ್ಯಕರ್ತರ ಬೆಳವಣಿಗೆಗೆ ಅಡ್ಡಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ. ಕನಕಪುರದಿಂದ ಬಂದು ನೆಲೆ ನಿಂತಿರುವ 35 ಸಾವಿರ ಮತದಾರರು ಕ್ಷೇತ್ರದಲ್ಲಿ ಇದ್ದಾರೆ. ನಾವೆಲ್ಲಾ ಒಟ್ಟಿಗೆ ಸೇರೋಣ, ಚರ್ಚೆ ಮಾಡೋಣ, ಕೆಲಸ ಮಾಡೋಣ ಎಂದು ಹೇಳಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ