Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪಾರಂಪರಿಕ ದೇವರಾಜ‌ ಮಾರುಕಟ್ಟೆ ತೆರವಿಗೆ ಹೈಕೋರ್ಟ್ ಆದೇಶ

ಸುದ್ದಿಮೂಲ ವಾರ್ತೆ

ಮೈಸೂರು, ಆ. 11: ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ವಜಾ ಮಾಡಿದೆ.

ಈ ಮೂಲಕ ಶಿಥಿಲಾ ವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಮಾಡಬೇಕೆಂಬ ರಾಜ್ಯ ಸರ್ಕಾರದ ನಿಲುವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ ವಾದ ಪ್ರತಿವಾದ ಆಲಿಸಿ ಪಾರಂಪರಿಕ ಪ್ರಿಯರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ವಜಾಗೊಳಿಸಿದೆ.

3.67 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಿರುವ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿತ್ತು. 2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿದೆ. ಬಳಿಕ ದೇವರಾಜ ಮಾರುಕಟ್ಟೆಯನ್ನು ಸಂರಕ್ಷಿಸಬಹುದೆ ಇಲ್ಲವೆ ಎಂದು ವರದಿ ನೀಡುವಂತೆ ಮೈಸೂರಿನ ಎಂಜಿನಿಯರ್ ಡಾ.ಸೈಯಿದ್ ಶಕೀಬ್ ರೆಹಮಾನ್ ನೇತೃತ್ವದಲ್ಲಿ ಸರಕಾರ ತಜ್ಞರ ಸಮಿತಿ ರಚಿಸಲಾಗಿತ್ತು.

'ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ'' ಎಂದು ಈ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿತ್ತು, ಅದರಂತೆ ಸರಕಾರ ದೇವರಾಜ ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ತೀರ್ಮಾನಿಸಿತ್ತು. ಮೈಸೂರಿನ ಪಾರಂಪರಿಕ ಪ್ರಿಯ ನಾಗರಿಕರಾದ ರಾಜಚಂದ್ರ, ಪ್ರೊ.ಸಿ.ಜಯದೇವರಾಜೇ ಅರಸ್, ಗೌರಿ ಸತ್ಯ, ಯಶಸ್ವಿನಿ ಶರ್ಮ ಹಾಗೂ ನಿರಂಜನ್ ನಿಕ್ಕಂ ಸೇರಿ ದೇವರಾಜ ಮಾರುಕಟ್ಟೆ ನೆಲಸಮ ಮಾಡದಂತೆ ಹೈಕೋರ್ಟ್‌ನಲ್ಲಿ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದರು.

''ರಾಜರ ಕಾಲದಲ್ಲಿ ವೈಜ್ಞಾನಿಕವಾಗಿ ಹೇಗೆ ಈ ಕಟ್ಟಡ ನಿರ್ಮಾಣ ಮಾಡಲಾಗಿದೆಯೊ ಅದೇ ವೈಜ್ಞಾನಿಕವಾಗಿ ನವೀಕರಣ ಮಾಡಬಹುದು. ಈ ಕಾರಣದಿಂದ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಬಾರದು,'' ಎಂದು ವಾದಿಸಿದ್ದರು.

ಹೀಗಾಗಿ ಸರಕಾರದ ತೀರ್ಮಾನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತು. ನಂತರ ನಡೆದ ವಿಚಾರಣೆಯಲ್ಲಿ ಮಾರುಕಟ್ಟೆ ನೆಲಸಮ ಮಾಡದೆ ಬೇರೆ ಮಾರ್ಗವಿಲ್ಲ ಎಂದು ಸರಕಾರ ಹೈಕೋರ್ಟ್‌ನಲ್ಲಿ ತಿಳಿಸಿತ್ತು. ಜತೆಗೆ ಡಾ.ಸೈಯಿದ್ ಶಕೀಬ್ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿತು.

ಪಾಲಿಕೆ ಪರವಾಗಿ ವಾದ ಮಂಡಿಸಿದ ವಕೀಲೆ ಗೀತಾ, ರಾಜರ ಕಾಲದಲ್ಲಿ ನಿರ್ಮಾಣವಾಗಿರುವ ದೇವರಾಜ ಮಾರುಕಟ್ಟೆಯನ್ನು ವೈಜ್ಞಾನಿಕ ರೀತಿಯಲ್ಲಿ ನವೀಕರಣ ಮಾಡಲು ಈಗ ತಜ್ಞ ಕೆಲಸಗಾರರು ಇಲ್ಲ. ಈ ಕಾರಣದಿಂದ ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಹೈಕೋರ್ಟ್‌ಗೆ ಸರಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿ ವಾದ ಮಂಡಿಸಿದ್ದರು. ಇದೇ ವೇಳೆ ಪಾರಂಪರಿಕ ಪ್ರಿಯರು ಕೂಡ ಹೈಕೋರ್ಟ್‌ಗೆ ಖಾಸಗಿ ತಜ್ಞರ ವರದಿ ಸಲ್ಲಿಸಿದ್ದರು.

ಮೈಸೂರಿನ ಕುಕ್ಕರಹಳ್ಳಿಕೆರೆ ಬಳಿ ಇರುವ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಸೆಂಟರ್ ಫಾರ್ ಫಿಲಾಸಫಿ ಪಾರಂಪರಿಕ ಕಟ್ಟಡ, ಕೂಡ ಶಿಥಿಲಾವಸ್ಥೆಯಲ್ಲಿತ್ತು. ಮೈಸೂರು ವಿಶ್ವ ವಿದ್ಯಾಲಯ ಆ ಕಟ್ಟಡ ನವೀಕರಿಸಿ ಸಂರಕ್ಷಿಸಿದೆ. ಅದೇ ರೀತಿ ದೇವರಾಜ ಮಾರುಕಟ್ಟೆಯನ್ನು ನವೀಕರಿಸಬಹುದು. ಆ ಮೂಲಕ ಮೈಸೂರಿನ ಪಾರಂಪರಿಕತೆ ಸಂರಕ್ಷಿಸಬೇಕು ಎಂದು ಬೆಂಗಳೂರಿನ ಬಿಎಂಎಸ್ ಕಾಲೇಜಿನ ತಜ್ಞ ಎಂಜಿನಿಯರ್‌ಗಳು ನೀಡಿದ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದರು.

ಈ ವರದಿ ಆಧರಿಸಿ, ಹಲವು ಅಂಶಗಳ ದಾಖಲೆ ಮುಂದಿಟ್ಟು ಪಾರಂಪರಿಕ ಪ್ರಿಯರ ವಕೀಲರಾದ ಡಾ.ಆದಿತ್ಯ ಸೊಂದಿ ಹಾಗೂ ನಿಧಿ ಶ್ರೀ ವೇಣುಗೋಪಾಲ್ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಸರಕಾರದ ವಾದ ಹಾಗೂ ಪಾರಂಪರಿಕ ಪ್ರಿಯರ ಪ್ರತಿವಾದ ಆಲಿಸಿದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ, ದೇವರಾಜ ಮಾರುಕಟ್ಟೆ ನೆಲಸಮ ಮಾಡದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಮಂಗಳವಾರ ವಜಾ ಮಾಡಿದೆ.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ