Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಚರಿತ್ರೆ ರಕ್ಷಿಸಿದರೆ ಮಾನವ ಸಂಸ್ಕೃತಿ ಉಳಿಯುತ್ತದೆ: ಪ್ರೊ. ಅಲ್ಲಮಪ್ರಭು ಬೆಟ್ಟದೂರು

ಸುದ್ದಿಮೂಲವಾರ್ತೆ

ಕೊಪ್ಪಳ ಸೆ.18:ಚರಿತ್ರೆ ರಕ್ಷಿಸಿದರೆ ಮಾನವ ಸಂಸ್ಕೃತಿ ಉಳಿಯುತ್ತದೆ, ಚರಿತ್ರೆಯನ್ನು ಉಳಿಸುವ ಮನಸ್ಸುಗಳು ಎಚ್ಚರಗೊಳ್ಳಬೇಕಿದೆ ಎಂದು ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ ಹೇಳಿದರು.

ಅವರು ಮೇಘನಾ ಪ್ರಕಾಶನ, ಮತ್ತು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಅವರ *ಕೊಪ್ಪಳ ಚರಿತ್ರೆ ಮತ್ತು ಸಂಸ್ಕೃತಿಯ ಹುಡುಕಾಟ* ಎಂಬ ಸಂಶೋಧನಾ ಕೃತಿಯ ಕುರಿತು ಮಾತನಾಡಿದರು.

ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಶರಣಬಸಪ್ಪ ಬಿಳಿಎಲಿ ಅವರು ‘ಭವಿಷ್ಯದ ಬದುಕಿಗೆ ಪರಿವರ್ತನೆ ಹಾದಿ’ ಎಂಬ ವಿಷಯದ ಕುರಿತು ಕಾರಾಗೃಹದ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಮನುಷ್ಯನ ಮೇಲೆ ಅನೇಕ ಒತ್ತಡಗಳಿವೆ. ಅವುಗಳನ್ನು ನಿಯಂತ್ರಣ ಮಾಡಿಕೊಳ್ಳುವ ಶಕ್ತಿ ಅವನಲ್ಲಿಯೇ ಇರುತ್ತದೆ. ತಮ್ಮ ತಪ್ಪುಗಳನ್ನು ಬೇರೆಯವರ ಮೇಲೆ ಹಾಕುವ ಬದಲು ತಮ್ಮನ್ನು ತಾವು ಅರಿತುಕೊಂಡಾಗ ಯಾವುದೇ ಅನಾಹುತಗಳು ಸಂಭವಿಸುವುದಿಲ್ಲ ಅಲ್ಲದೇ ಮನುಷ್ಯನ ಎಲ್ಲಾ ಚಟುವಟಿಕೆಗಳಿಗೆ ಮನಸ್ಸೇ ಕಾರಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕರಾದ ವಿಜಯಕುಮಾರ ಚೌವ್ಹಾಣ ಅವರು ಮಾತನಾಡುತ್ತಾ, ನಿವಾಸಿಗಳಿಗೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಬಂಧಿ ಎನ್ನುವ ಭಾವನೆಗಳು ತರದೇ ನಿರಂತರವಾಗಿ ಅವರನ್ನು ಮಾನಸಿಕವಾಗಿ ಸದೃಢವಾಗಿಸಲು ನಮ್ಮ ಸಿಬ್ಬಂದಿ ನಿರಂತರವಾಗಿ ಪ್ರಯತ್ನ ಮಾಡುತ್ತಿರುವರು ಎಂದರು. ಅಲ್ಲದೇ ನಿವಾಸಿ ಬಂಧಿಗಳ ಸಂಖ್ಯೆ ಸಮಾಜದಲ್ಲಿ ಕಡಿಮೆಯಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಕಾರಾಗೃಹದ ಸಿಬ್ಬಂದಿಗಳಾದ ರಾಮುಲು, ಪಿ.ಕೆ. ಕೋಮ್ಸಿಕರ ಮುಂತಾದವರ ಜೊತೆಗೆ ಖ್ಯಾತ ಲಲಿತ ಪ್ರಬಂಧಕಾರರಾದ ಈರಪ್ಪ ಕಂಬಳಿ, ಹಿರಿಯ ಸಾಹಿತಿಗಳಾದ ಮಹಾಂತೇಶ ಮಲ್ಲನಗೌಡರ, ಡಾ. ಬಸವರಾಜ ಪೂಜಾರ, ನಗರಸಭೆ ಮಾಜಿ ಸದಸ್ಯರಾದ ಪ್ರಾಣೇಶ ಮಾದಿನೂರ, ಆದೇಶ ಎ.ಜಿ., ಗುರುರಾಜ, ಪ್ರತಾಪ, ಸುಂದರ ಮೇಟಿ, ಪ್ರದೀಪ ಬಳ್ಳೊಳ್ಳಿ, ಮಂಜುನಾಥ, ರವಿ ಸುಣಗಾರ ಮುಂತಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಬಸಮ್ಮ ಹಾಗೂ ನೇತ್ರಾವತಿ ನೆರವೇರಿಸಿದರು. ಡಾ. ಮಂಜುನಾಥ ಬಡಿಗೇರ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಕೃತಿ ಲೇಖಕರಾದ ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಅಶೋಕ ಓಜಿನಹಳ್ಳಿ ನಿರೂಪಿಸಿದರು.ಶ್ರೀಧರ ವಾಣಿ ಅವರು ವಂದಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ