Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯ ನಾಗರಿಕ ಮಾಸಾಶನ ಹೆಚ್ಚಳ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.1: ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್‌ನಲ್ಲಿ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ಹಿರಿಯ ನಾಗರಿಕ ಮಾಸಾಶನವನ್ನು 2000 ರೂ.ಗಳಿಗೆ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಡಿದ ಮನವಿಗೆ ಸಿಎಂ ಈ ರೀತಿ ವೇದಿಕೆಯಲ್ಲಿಯೇ ಭರವಸೆ ನೀಡಿದರು.

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಒಂದೇ ಸೂರಿನಡಿ ಸೌಲಭ್ಯ:

ಇದಕ್ಕೂ ಮುನ್ನ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಶೀಘ್ರದಲ್ಲೇ ಈ ಕುರಿತ ಯೋಜನೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ತಂದೆ- ತಾಯಿ, ಹಿರಿಯರು ನಮಗೆ ಕಣ್ಣಿಗೆ ಕಾಣುವ ದೇವರು. ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರದಲ್ಲಿ ಅನೇಕ ನೂನ್ಯತೆಗಳಿವೆ. ಅವುಗಳಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ನಮ್ಮ ಸಂಸ್ಕೃತಿಯನ್ನು ಮರೆಯದೇ ಮುನ್ನಡೆಯಬೇಕು. ಅಲ್ಲದೆ, ತಂದೆ ತಾಯಿಗೆ ಯಾರು ಗೌರವ ಕೊಡುತ್ತಾರೊ ಅಂತಹವರು ಜೀವನದಲ್ಲಿ ಮುಂದೆ ಬರುತ್ತಾರೆ ಎಂದರು.

ಮಾಸಾಶನ 2000ರೂಪಾಯಿಗೆ ಏರಿಸಲು ಮನವಿ

ಸದ್ಯ ಹಿರಿಯ ನಾಗರಿಕರಿಗೆ 1200 ರೂಪಾಯಿ ಮಾಸಾಶನ ಬರುತ್ತಿದ್ದು,ಈ ಮೊತ್ತವನ್ನು 2000 ರೂಪಾಯಿಗೆ ಏರಿಸಬೇಕು ಎಂದು ಇದೇ ವೇಳೆ ಮುಖ್ಯಮಂತ್ರಿಗಳಿಗೆ ಸಚಿವರು ಮನವಿ ಮಾಡಿದರು. ರಾಜ್ಯದಲ್ಲಿ ಸುಮಾರು 48 ಲಕ್ಷ ವೃದ್ಧರಿಗೆ ವೃದಾಪ್ಯವೇತನ ನೀಡುತ್ತಿದ್ದು, ಸುಮಾರು 58 ಲಕ್ಷ ಮಂದಿ ಹಿರಿಯ ನಾಗರಿಕರಿದ್ದಾರೆ. ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಏರಿಸಬೇಕು ಎಂದರು.

ರಾಜ್ಯದಲ್ಲಿರುವ ಕೆಲ ವೃದ್ಧಾಶ್ರಮಗಳಿಗೆ ಹಲವು ನೂನ್ಯತೆಗಳನ್ನು ಗಮನಿಸಿದ್ದೇನೆ. ಈ ಕೇಂದ್ರಗಳಲ್ಲಿ ಹಿರಿಯರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಶೀಘ್ರವೇ ಸರಿಪಡಿಸಲಾಗುವುದು ಎಂದರು ಸಚಿವರು ಇದೇ ವೇಳೆ ಭರವಸೆ ನೀಡಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ