Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನರೇಗಾ, ಜಲಜೀವನ್ ಮಿಷನ್ ಕಾಮಗಾರಿಗಳ ಪರಿಶೀಲನೆ

ಸುದ್ದಿಮೂಲ ವಾರ್ತೆ

ಕೊರಟಗೆರೆ, ಆ. 8 : ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಕೊರಟಗೆರೆ ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್, ಶುದ್ದ ಕುಡಿಯುವ ನೀರಿನ ಘಟಕ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು.

ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಸಿಇಓರವರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿಗಳೊಂದಿಗೆ ಗ್ರಾಮ ಪಂಚಾಯಿತಿಯಲ್ಲಿ ಆಗಿರುವಂತಹ ಪ್ರಗತಿಗಳ ಬಗ್ಗೆ ಚರ್ಚಿಸಿದರು. ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವಂತಹ ಪ್ರಗತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪ್ರತಿ ಗ್ರಾಮದ ರೈತರ ಮನವೊಲಿಸಿ ಕನಿಷ್ಟ

500 ವೈಯಕ್ತಿಕ ಕಾಮಗಾರಿಗಳ ಪಟ್ಟಿಯನ್ನು ನೀಡುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮನವಿ ಮಾಡಿದರು. ಗ್ರಾಮ ಪಂಚಾಯಿತಿಯನ್ನು ಹೆಚ್ಚು ಬಲಪಡಿಸಬೇಕಾದರೆ, ಹೆಚ್ಚು ಹೆಚ್ಚು ವೈಯಕ್ತಿಕ ಕಾಮಗಾರಿಗಳನ್ನು ಮೊದಲು ಮಾಡಬೇಕು. ಆನಂತರದಲ್ಲಿ ಶೇ.60 :40ರ ಅನುಪಾತದಂತೆ ಇತರೆ ಸಮುದಾಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. .

ಯಾವುದೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಹೊಂದಬೇಕಾದರೆ, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳು, ಅಂಗನವಾಡಿ ಕಟ್ಟಡಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಶೌಚಾಲಯಗಳು ಉತ್ತಮವಾಗಿರಬೇಕು ಎಂದು ತಿಳಿಸಿದರು.

ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ವಾಹನಗಳ ಮೂಲಕ ಕಸ ಸಂಗ್ರಹಣೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಗೂ ಗಾಜು ಸೇರಿದಂತೆ ಒಣ ಕಸವನ್ನು ಪ್ರತಿ ಮನೆ ಮನೆಗೆ ಹೋಗಿ ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಕಸ ಸಂಗ್ರಹ ವಾಹನವು ಯಾವ ದಿನ ಯಾವ ಗ್ರಾಮ ಪಂಚಾಯಿತಿಗೆ ಬರುತ್ತದೆ ಎಂಬ ಮಾಹಿತಿಯನ್ನು ವೇಳಾಪಟ್ಟಿಯಂತೆ ಸಂಗ್ರಹಿಸಬೇಕು ಎಂದು ಸೂಚನೆ ನೀಡಿದರು.

ಬಳಿಕ ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಂಬಾಡಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆಂಜನೇಯ ಸ್ವಾಮಿ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿದರು.

ಆನಂತರ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಜಲ ಜೀವನ್ ಮಿಷನ್ ಹಾಗೂ ನರೇಗಾ ಕಾಮಗಾರಿಗಳನ್ನು ವೀಕ್ಷಿಸಿದರು.

ತುಂಬಾಡಿ ಗ್ರಾಮ ಪಂಚಾಯಿತಿ ಬಳಿಕ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿದರು. ಕೂಲಿ ಆಧಾರಿತ 500 ಮಂದಿ ರೈತರ ವೈಯಕ್ತಿಕ ಕಾಮಗಾರಿಗಳ ಪಟ್ಟಿಯನ್ನು ಮೊದಲು ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.

ಆನಂತರ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಲಿಂಗಯ್ಯನಪಾಳ್ಯದಲ್ಲಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ ಕಾಮಗಾರಿಗಳನ್ನು ವೀಕ್ಷಿಸಿ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ರವೀಶ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೀರ್ತಿ ನಾಯಕ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರವಿಕುಮಾರ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇ‍ಶಕ ಎಂ.ಬಿ.ಗುರುಮೂರ್ತಿ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಮಧುಸೂದನ್, ತಾಂತ್ರಿಕ

ಸಂಯೋಜಕರಾದ ಕೆ.ಎಸ್.ಮಧು ಸೇರಿದಂತೆ ತಾಲ್ಲೂಕು ಮಟ್ಟದ ಸಿಬ್ಬಂದಿಗಳು ಹಾಜರಿದ್ದರು.

 

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ