Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಾಡಿಗೆ ಬರುವ ಆನೆಗಳಿಗೆ ರೇಡಿಯೋ ಕಾಲರ್: ಈಶ್ವರ್ ಖಂಡ್ರೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.22: ಕಾಡಿನಿಂದ ತಪ್ಪಿಸಿಕೊಂಡು ನಾಡಿಗೆ ಬರುವಂತಹ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿಂದು ಸಭೆ ನಡೆಸಿದ ಸಚಿವರು ಬಳಿಕ ಮಾತನಾಡಿ, ಎಲ್ಲ ಆನೆಗಳೂ ನಾಡಿಗೆ ಬರುವುದಿಲ್ಲ. ಕೆಲವು ಆನೆಗಳು ಮಾತ್ರ ಪದೇ ಪದೇ ನಾಡಿಗೆ ದಾಳಿ ಇಟ್ಟು ಹಾನಿ ಮಾಡುತ್ತವೆ. ಇಂತಹ ಆನೆಗಳನ್ನು ಗುರುತಿಸಿ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.

ಪ್ರಸ್ತುತ ರಾಜ್ಯದಲ್ಲಿ ಇಂತಹ 14 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಇದರಿಂದ ಆನೆಗಳ ಚಲನವಲನದ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸುತ್ತದೆ. ಅರಣ್ಯ ಇಲಾಖೆಯಲ್ಲಿ ಪ್ರಸ್ತುತ ಇನ್ನೂ 30 ರೇಡಿಯೋ ಕಾಲರ್ ಲಭ್ಯವಿದ್ದು, ಪುಂಡಾನೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡುವ ಮೊದಲು ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಹಿಂದೆ ವಿಶ್ವ ವನ್ಯಜೀವಿ ನಿಧಿಗಾಗಿ ಕಾಯಲಾಗುತ್ತಿತ್ತು, ಈಗ ಇಲಾಖೆಯೇ ರೇಡಿಯೋ ಕಾಲರ್ ಖರೀದಿ ಮಾಡುತ್ತಿದೆ. ಪ್ರತಿ ರೇಡಿಯೋ ಕಾಲರ್ ಗೆ ಸುಮಾರು 7 ಲಕ್ಷ ವೆಚ್ಚವಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಆನೆಗಳ ಹಾವಳಿ ಹೆಚ್ಚಾಗಿರುವ ಚಾಮರಾಜನಗರ, ಮತ್ತು ಕೊಡಗು ಭಾಗದಲ್ಲಿ ಕಾಡಾನೆಗಳನ್ನು ತಕ್ಷಣವೇ ಕಾಡಿಗೆ ಓಡಿಸಲು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಆನೆ ಕ್ಷಿಪ್ರ ಕಾರ್ಯಪಡೆಗಳಲ್ಲಿನ ಗುಂಪುಗಳನ್ನು ಹೆಚ್ಚಿಸುವಂತೆ ಇದೇ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.

ಜನವಸತಿಗಳ ಬಳಿ, ರೈತರ ತೋಟ, ಗದ್ದೆಗಳ ಬಳಿ ಆನೆಗಳು ಕಾಣಿಸಿಕೊಂಡಾಗ ತ್ವರಿತವಾಗಿ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಸುತ್ತಮುತ್ತಲ ಜನರಿಗೆ ವಾಟ್ಸ್ ಅಪ್, ಎಸ್.ಎಂ.ಎಸ್. ಮತ್ತು ಸಾರ್ವಜನಿಕ ಪ್ರಚಾರ ವಿಧಾನಗಳ ಮೂಲಕ ಮಾಹಿತಿ ನೀಡಿ, ಜೀವಹಾನಿ ತಗ್ಗಿಸುವಂತೆ ಸಚಿವರು ನಿರ್ದೇಶಿಸಿದರು.

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿಂದು ಸಭೆ ನಡೆಸಿದ ಸಚಿವರು, ಮಾನವ – ವನ್ಯಮೃಗಗಳ ಸಂಘರ್ಷ ಹೆಚ್ಚಳದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಅಮೂಲ್ಯವಾದ ಮಾನವ ಪ್ರಾಣ ಹಾನಿಯೂ ಆಗಬಾರದು, ಅದೇ ವೇಳೆ ವನ್ಯ ಮೃಗಗಳ ಕೂಡ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶದಿಂದ ಹಾಗೂ ಬೇಲಿಯಲ್ಲಿ ಹಾಕುವ ಉರುಳಿಗೆ ಸಿಲುಕಿ ಸಾವಿಗೀಡಾಗಬಾರದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಿತ ಅರಣ್ಯ ಅಧಿಕಾರಿಗಳಿಗೆ ನಿರ್ದೇಶಿಸಲು, ಸೂಚಿಸಿದರು.

ರೈಲ್ವೆ ಬ್ಯಾರಿಕೇಡ್:

ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ವಿಧಾನವಾಗಿದೆ. ಆನೆಗಳು ಹೆಚ್ಚಾಗಿ ನಾಡಿನತ್ತ ಬರುವ ಪ್ರದೇಶಗಳನ್ನು ಗುರುತಿಸಿ ಬ್ಯಾರಿಕೇಡ್ ಹಾಕುವ ಕಾರ್ಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ