Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ ಕಾರಣ: ಈಶ್ವರ ಖಂಡ್ರೆ

ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.08:
ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವಿಗೆ ಬ್ಯಾಾಕ್ಟಿಿರೀಯಾ ಸೋಂಕು ಗಳಲೆ ರೋಗ (ಹೆಮರೇಜಿಕ್ ಸೆಪ್ಟಿಿ ಸೀಮಿಯಾ) ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆೆ ಹೇಳಿದರು.
ವಿಧಾನಪರಿಷತ್ತಿಿನಲ್ಲಿ ತಳವಾರ ಸಾಬಣ್ಣ ಅವರ ಪ್ರಶ್ನೆೆಗೆ ಉತ್ತರಿಸಿದ ಅವರು, ಚಿಗುರು ತಿನ್ನುವ ಪ್ರಾಾಣಿಗಳಲ್ಲಿ ಸಾಮಾನ್ಯವಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಹೊರ ನೋಟಕ್ಕೆೆ ಸೋಂಕಿನ ಲಕ್ಷಣವೂ ಕಾಣುವುದಿಲ್ಲ. ಈ ಸೋಂಕು ಬಂದ 6 ರಿಂದ 24 ಗಂಟೆಗಳಲ್ಲಿ ಅಥವಾ 8ರಿಂದ 24 ಗಂಟೆಗಳಲ್ಲಿ ಸಾವು ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾಾರೆ. ಸೋಂಕು ತಗುಲಿದ ಕೆಲವೇ ಗಂಟೆಗಳಲ್ಲಿ ಸಾವು ಸಂಭವಿಸುವ ಕಾರಣ ಹೆಚ್ಚಿಿನ ಸಂಖ್ಯೆೆ ಕೃಷ್ಣಮೃಗ ಮೃತಪಟ್ಟಿಿದೆ ಎಂಬುದು ತಜ್ಞ ವೈದ್ಯರ ಅಭಿಪ್ರಾಾಯವಾಗಿದೆ ಎಂದು ತಿಳಿಸಿದರು.
ಕಿರು ಮೃಗಾಲಯದಲ್ಲಿ ನವೆಂಬರ್ 13ರಿಂದ 17ರವರೆಗೆ ಒಟ್ಟು 31 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃಗಾಲಯದ ವೈದ್ಯರು, ಪಶು ಸಂಗೋಪನಾ ಇಲಾಖೆಯ ಸ್ಥಳೀಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ, ಪಶುವೈದ್ಯಕೀಯ ಜೈವಿಕ ಸಂಸ್ಥೆೆಗೆ ಮಾದರಿ ಕಳಿಸಿದ್ದರು. ಎಲ್ಲ ಕೃಷ್ಣಮೃಗಗಳೂ ಗಳಲೆ ರೋಗದಿಂದಲೇ ಮೃತಪಟ್ಟಿಿರುವುದು ದೃಢಪಟ್ಟಿಿದೆ ಎಂದರು.
ತಮಗೆ ಕೃಷ್ಣಮೃಗಗಳ ಸಾವಿನ ವಿಷಯ ತಿಳಿದ ಕೂಡಲೇ ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕಳುಹಿಸಿದ್ದು, 7 ಬದುಕುಳಿದಿವೆ ಎಂದ ಅವರು, ಈ ಸೋಂಕು ಮೃಗಾಲಯದ ಬೇರೆ ಯಾವುದೇ ಪ್ರಾಾಣಿಗಳಿಗೆ ಪಸರಿಸದಂತೆ ಕ್ವಾಾರಂಟೈನ್ ಮಾಡಲಾಗಿತ್ತು. ಎಲ್ಲ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿತ್ತು. ಕಟ್ಟುನಿಟ್ಟಾಾಗಿ ನೈರ್ಮಲ್ಯ ಕ್ರಮ ಕೈಗೊಳ್ಳಲಾಯಿತು. ಇದು ಕೈಮೀರಿ ಸಂಭವಿಸಿರುವ ಸಾವು, ಮೇಲ್ನೋೋಟಕ್ಕೆೆ ಕರ್ತವ್ಯಲೋಪ, ನಿರ್ಲಕ್ಷ್ಯ ಕಂಡು ಬಂದಿಲ್ಲ ಎಂದು ವಿವರಿಸಿದರು.
ನೀರು, ಆಹಾರ ಕೆಲವೊಮ್ಮೆೆ ಗಾಳಿಯಿಂದಲೂ ಹರಡುವ ಈ ಕಾಯಿಲೆ ಬರುತ್ತದೆ. ಗಳಲೆ ರೋಗಕ್ಕೆೆ ಜಾನುವಾರುಗಳೂ ಸಾವಿಗೀಡಾಗುತ್ತವೆ. ನನಗೆ ನೆನಪಿರುವಂತೆ ಕೊಪ್ಪಳ ತಾಲೂಕಿನಲ್ಲಿ ಗಳಲೆ ರೋಗಕ್ಕೆೆ ಒಂದೇ ದಿನ 5-6 ಹಸುಗಳು ಮೃತಪಟ್ಟಿಿದ್ದವು. 4 ದಿನಗಳಲ್ಲಿ 11 ದನ, ಕರು ಸಾವಿಗೀಡಾಗಿದ್ದವು. ಪತ್ರಿಿಕೆಯಲ್ಲಿ ಬಂದಿರುವ ವರದಿಯಂತೆ ಇತ್ತೀಚೆಗೆ ಜಾರ್ಖಂಡ್ ನ ಜೆಮ್ಷೆೆಡ್ಪುರದ ಟಾಟಾ ಜೈವಿಕ ಉದ್ಯಾಾನವನದಲ್ಲಿ ಹೆಮೊರೆಜಿಕ್ ಸೆಪ್ಪಿಿಸೀಮಿಯಾ ಕಾಯಿಲೆಯಿಂದ 10 ಕೃಷ್ಣಮೃಗ ಮೃತಪಟ್ಟಿಿದೆ ಎಂದರು.
ರಾಜ್ಯದ ಎಲ್ಲ ಮೃಗಾಲಯಗಳಲ್ಲಿ 2021-22ರಿಂದ ಇಲ್ಲಿಯವರೆಗಿನ ಅಂಕಿ ಅಂಶ ನೋಡುವುದಾದರೆ, 2021-22 ರಲ್ಲಿ ಶೇ.6.2ರಷ್ಟು ವನ್ಯಜೀವಿಗಳು ಮೃಗಾಲಯದಲ್ಲಿ ಮೃತಪಟ್ಟಿಿದ್ದವು. 2022-23ರಲ್ಲಿ ಮರಣ ಪ್ರಮಾಣ ಶೇ.4.5 ಆಗಿತ್ತು. 2023-24ರಲ್ಲಿ ಶೇ.4.76 2024-25ರಲ್ಲಿ ಶೇ.3.25 ಹಾಗೂ 2025-26ರಲ್ಲಿ ಶೇ.2.42ರಷ್ಟು ವನ್ಯಜೀವಿಗಳು ಮೃಗಾಲಯದಲ್ಲಿ ಮೃತಪಟ್ಟಿಿವೆ ಎಂದು ವಿವರ ನೀಡಿದರು.
ಕರ್ನಾಟಕದ ಮೃಗಾಲಯಗಳಲ್ಲಿ ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸ್ಪಷ್ಟನೆ ನೀಡಿದ ಅವರು, ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಲಾಗಿದೆ, ಉತ್ತಮ ಕಾರ್ಯ ಮಾಡುತ್ತಿಿರುವವರ ಧ್ರುತಿಗೆಡಿಸುವುದು ಸರಿಯಲ್ಲ. ಆದಾಗ್ಯೂ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದೂ ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ