Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅಲ್ಪಸಂಖ್ಯಾತರು ಜೆಡಿಎಸ್‌ನಿಂದ ದೂರವಾಗುತ್ತಿದ್ದಾರೆ ಎಂಬುದು ಸರಿಯಲ್ಲ: ಎಚ್‌ಡಿಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.27: ಜೆಡಿಎಸ್‌ನಿಂದ ಅಲ್ಪಸಂಖ್ಯಾತ ನಾಯಕರು ದೂರ ಆಗುತ್ತಿದ್ದಾರೆ ಎಂಬುದು ಸರಿಯಲ್ಲ. ಇಂತಹ ಬೆಳವಣಿಗೆ ರಾಜಕೀಯದಲ್ಲಿ ನಡೆಯುತ್ತಿರುತ್ತದೆ. ಪಕ್ಷದ ರಾಜ್ಯಾಧ್ಯಕ ಸಿ.ಎಂ. ಇಬ್ರಾಹಿಂ ಅವರಿಗೂ ಈ ಎಲ್ಲ ವಿಚಾರಗಳನ್ನು ಆಯಾ ಕಾಲಕ್ಕೆ ಮಾಹಿತಿ ಕೊಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಗುಂಪು ಮಾಡಿಕೊಂಡು ಸಭೆ ಮಾಡಲು‌ ಉದ್ದೇಶಿಸಿದ್ದಾರೆ. ಅವರಿಗೆ ನಾನು ಹೇಳುವುದು ಇಷ್ಟೇ, ನಾವೆಂದೂ ನಿಮಗೆ ಅಗೌರವ ತೋರಿಸಿಲ್ಲ. ಇದನ್ನು ಅರಿತುಕೊಳ್ಳಿ ಎಂದು ಮನವಿ ಮಾಡಿದರು.

ಮುಸ್ಲಿಮರ ಹಿತ ರಕ್ಷಣೆ ಎಂದಲ್ಲ. ಇಡೀ ನಾಡಿನ ಜನರ ರಕ್ಷಣೆ ಮಾಡುತ್ತೇವೆ. ಅದಕ್ಕಾಗಿಯೇ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪ್ರಬಲವಾಗಿದ್ದಿದ್ದರೆ ಅಲ್ಲಿಯೂ ನನಗೆ ಅಲ್ಪಸಂಖ್ಯಾತರ ಓಟ್ ಬರುತ್ತಿರಲಿಲ್ಲ. ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುತ್ತಿದ್ದರು. ಜೆಡಿಎಸ್ - ಬಿಜೆಪಿ ಫೈಟ್ ಇದ್ದ ಕಾರಣ ನನಗೆ ಓಟ್ ಬಂದಿದೆ ಎಂದು ಹೇಳಿದರು.

ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಎನ್ನುವ ಕಾಂಗ್ರೆಸ್‌ನವರು ಯಾವ ಟೀಂ. ಅವರು ತಮಿಳುನಾಡಿನ ಟೀಮಾ ಅಥವಾ ಡಿಎಂಕೆಯ ಬಿ ಟೀಮಾ? ಎಂದು ಲೇವಡಿ ಮಾಡಿದ ಅವರು, ಬಿಜೆಪಿ ಜತೆ ಅಧಿಕಾರ ಅನುಭವಿಸಿದ ಪಕ್ಷಗಳ ಜತೆ ಸಖ್ಯ ಬೆಳೆಸಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಬಿ ಟೀಂ, ಎ ಟೀಂ ಎಂದು ಮಾತನಾಡುವ ನೈತಿಕತೆ ಇದೆಯೇ ಎಂದು ಹರಿಹಾಯ್ದರು.

ಅಂದು ಗುಲಾಂ ನಭಿ ಅಜಾದ್, ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಸಿದ್ದರಾಮಯ್ಯ ಕೂಡ ಇದ್ದರು. ಕುಮಾರಸ್ವಾಮಿಗೆ ಸಿಎಂ ಸ್ಥಾನ ಬೇಡ, ನಿಮ್ಮಲ್ಲೇ ಒಬ್ಬರು ಸಿಎಂ ಆಗಿ ಎಂದರು ದೇವೇಗೌಡರು. ಆದರೆ ಕೇಂದ್ರದ ನಾಯಕರು ಕುಮಾರಸ್ವಾಮಿ ಅವರೇ ಸಿಎಂ ಆಗಬೇಕು. ಆ ದಿನಗಳು ಕಾಂಗ್ರೆಸ್ ಪಕ್ಷಕ್ಕೆ ನೆನಪಿಲ್ಲವೇ? ಆಗ ಬಿಜೆಪಿ ಬಿ ಟೀಂ ಎಂಬುದು ಅರಿವಿಗೆ ಬರಲಿಲ್ಲವೇ ಎಂದರು.

ಆ ದಿನವೇ ಅಮಿತ್ ಶಾ ಅವರಿಂದ ನನಗೆ ಕರೆ ಬಂತು. ಅವತ್ತು ಬಿಜೆಪಿ ಜೊತೆ ಹೋಗಿದ್ದಿದ್ದರೆ ಐದು ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತಿದ್ದೆ. ಆದರೆ, ನಾನು ಹಾಗೆ ಮಾಡಲಿಲ್ಲ. ಈಗ ಸುಳ್ಳು ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದೆಲ್ಲಾ ಗೊತ್ತಿಲ್ಲವೇ? ಎಂದು ಅವರು ಚಾಟಿ ಬೀಸಿದರು.

ಅಂದು ಸರಕಾರ ಬೀಳಿಸುವಾಗ ಬಿಜೆಪಿಯ 5 ಜನ ಶಾಸಕರು ಬೆಂಬಲ ಕೊಡಲು ಮುಂದಾಗಿದ್ದರು. ಆದರೆ 5 ಜನ ಬಿಜೆಪಿ ಶಾಸಕರು ಬಂದರೆ ಕಾಂಗ್ರೆಸ್ ನ ಇನ್ನೂ 5 ಜನರನ್ನು ಕಳುಹಿಸುತ್ತೇವೆ ಎಂದಿದ್ದರು ಒಬ್ಬರು. ಅವರು ಯಾರೂ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಇವರು ಜಾತ್ಯತೀತತೆ ಬಗ್ಗೆ ಮಾತನಾಡುತ್ತಾರೆ. ನಾಚಿಕೆ ಆಗಬೇಕು ಇವರಿಗೆ ಎಂದು ಅವರು ಕಿಡಿಕಾರಿದರು.

2004ರಲ್ಲಿಯೇ ಜೆಡಿಎಸ್ ಮುಗಿಸಲು ಕಾಂಗ್ರೆಸ್ ಪ್ರಯತ್ನ ಮಾಡಿತ್ತು. ಸಿದ್ದರಾಮಯ್ಯ ಆ ಪ್ರಯತ್ನ ಮಾಡಿದ್ದರು. ನಾಲ್ಕುಜನ ಸೇರಿ ಎಲ್ಲಿಗೆ ಹೋಗಿದ್ದರು ಎಂದು ಫ್ಲೈಟ್ ಟಿಕೆಟ್ ತೋರಿಸಬೇಕಾ? ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ