Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಚುನಾವಣಾ ಹೋರಾಟಕ್ಕೆ ಸಿದ್ಧವಾದ ಜೆಡಿಎಸ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.6: ತೀವ್ರ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಪಕ್ಷದ ಶಾಸಕರು ಮತ್ತು ಮುಖಂಡರ ಸಭೆ ನಡೆಸಿದರು. ಮುಂದಿನ ಲೋಕಸಭೆ, ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸುವ ಸಂಬಂಧ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕುಮಾರಸ್ವಾಮಿ ಅವರ ಮನೆಯಲ್ಲಿಯೇ ಪಕ್ಷದ ಮುಖಂಡರ ಸಭೆ ನಡೆಯಿತು. ಈ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಸಹ ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ್ದರು. ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು. ಪಕ್ಷದ ಸುದೀರ್ಘ ಸಭೆಯಲ್ಲಿ ಪಾಲ್ಗೊಂಡ ಕುಮಾರಸ್ವಾಮಿ, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿ, ಮುಖಂಡರಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪೂರ, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ಹಾಲಿ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು ಹಾಗೂ ಜಿಲ್ಲಾ ಅಧ್ಯಕ್ಷರು ಹಾಜರಿದ್ದ ಈ ಸಭೆಯಲ್ಲಿ ಉಭಯ ನಾಯಕರು ಸಭೆಯಲ್ಲಿ ಕೆಲ ಗಂಭೀರ ವಿಷಯಗಳನ್ನು ಹಂಚಿಕೊಂಡರು.

ಅಲ್ಲದೆ, ಕಾವೇರಿ ಜಲ ಸಂಕಷ್ಟ, ಬರಗಾಲ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಬಗ್ಗೆಯೂ ಕೂಡ ಸುದೀರ್ಘ ಚರ್ಚೆ ನಡೆಯಿತಲ್ಲದೆ, ಜನಪರ ವಿಷಯಗಳನ್ನು ಇಟ್ಟುಕೊಂಡು ಸರಕಾರದ ವಿರುದ್ಧ ಹೋರಾಟ ರೂಪಿಸಬೇಕು ಎಂದು ಇಬ್ಬರೂ ನಾಯಕರು ಪಕ್ಷದ ಮುಖಂಡರಿಗೆ ಹೋರಾಟದ ದಿಕ್ಸೂಚಿ ನಿಗದಿ ಮಾಡಿದರು.

ಪಕ್ಷ ಬಲಿಷ್ಟವಾಗಿದೆ. ಅದನ್ನು ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ. ನಾನು ಬದುಕುವುದರ ಒಳಗಾಗಿ ಈ ಪಕ್ಷ ಅಧಿಕಾರಕ್ಕೆ ಬರುತ್ತದೆ. ಅದನ್ನು ನೋಡಿಯೇ ನೋಡುತ್ತೇನೆ. ಈ ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳಲು ಅವಿರತವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಮತ್ತೊಮ್ಮೆ ಶಪಥ ಮಾಡಿದರು.

ಸೆ.10ರಂದು ಬೃಹತ್ ಸಮಾವೇಶ:

ಮುಂಬರುವ ಲೋಕಸಭೆ, ಬಿಬಿಎಂಪಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಇದೇ ತಿಂಗಳು 10ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಂಘಟನಾ ಸಮಾವೇಶದ ಬಗ್ಗೆ ಚರ್ಚೆ ನಡೆಸಿದ ಮಾಜಿ ಪ್ರಧಾನಿ, ಸೋತೆವು ಎಂದು ಸುಮ್ಮನಿದ್ದರೆ ಆಗುವುದಿಲ್ಲ. ಛಲದಿಂದ ಕೆಲಸ ಮಾಡಿದರೆ ಜನರು ಮೆಚ್ಚಿಕೊಳ್ಳುತ್ತಾರೆ.ಎಲ್ಲರೂ ಸೇರಿ ಪಕ್ಷವನ್ನು ಕಟ್ಟೋಣ ಎಂದು ಮುಖಂಡರಿಗೆ ಹುರಿದುಂಬಿಸಿದರು.

ಈ ವಯಸ್ಸಿನಲ್ಲಿಯೂ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಲು ತಯಾರಿದ್ದೇನೆ. ಎಲ್ಲಿಗೆ ಬೇಕಾದರೂ ಬರಲು ಸಿದ್ಧನಿದ್ದೇನೆ. ಜನರ ಪರವಾಗಿ ಹೋರಾಟ ಮಾಡೋಣ ಎಂದರು ಅವರು.

ಕಾವೇರಿಗಾಗಿ ಹೋರಾಟ:

ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಜಿಟಿ ದೇವೇಗೌಡರು ಹಾಗೂ ಬಂಡೆಪ್ಪ ಕಾಷೆಂಪೂರ ಮತ್ತು ಟಿ.ಎ.ಶರವಣ ಅವರು, ಸಭೆಯಲ್ಲಿ ಕಾವೇರಿ ವಿಚಾರ ಕೂಡ ಚರ್ಚೆಯಾಯಿತು. ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಈಗಾಗಲೇ ಹೋರಾಟ ನಡೆಸಲಾಗಿದೆ. ಮಂಡ್ಯ ಜಿಲ್ಲೆಯ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಈ ಹೋರಾಟವನ್ನು ವಿಸ್ತರಣೆ ಮಾಡಲಾಗುವುದು. ಈ ಸರಕಾರದಿಂದ ರಾಜ್ಯದ ಕಾವೇರಿ ಹಿತ ಕಾಯಲು ಸಾಧ್ಯವಿಲ್ಲ ಎಂದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ