Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಲ್ಯಾಣ ಕರ್ನಾಟಕ ಉತ್ಸವ ದಿನ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ

ಕಲ್ಯಾಣ ಕರ್ನಾಟಕ ಉತ್ಸವ ದಿನ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ

ಸುದ್ದಿಮೂಲವಾರ್ತೆ

ಕೊಪ್ಪಳ ಸೆ 02 : ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಹಾಗೂ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯಿಂದ ಅಗತ್ಯ ಕ್ರಮ ವಹಿಸಬೇಕು. ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಸ್ವಾತಂತ್ರ್ಯ ಯೋಧರಿಗೆ ಕಾರ್ಯಕ್ರಮದಲ್ಲಿ ಸನ್ಮಾನಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದರು.

ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಉತ್ಸವವನ್ನು ವ್ಯವಸ್ಥಿತ ಆಚರಣೆಗೆ ರಚಿಸಿದ ಸಮಿತಿಗಳು ತಮಗೆ ನೀಡಿದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ.ಕೆ.ಎಸ್.ಆರ್.ಟಿ.ಸಿ ಬಸ್ ಸೌಕರ್ಯ ಒದಗಿಸಬೇಕು. ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಶಾಲಾ ಮ್ಕಕಳಿಂದ ಸಾಮೂಹಿಕ ನೃತ್ಯ, ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಇದ್ದಲ್ಲಿ ಅಂತಹ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಸಮಿತಿಗೆ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ, ಕೊಪ್ಪಳ ನಗರ ಠಾಣೆ ವೃತ್ತ ನಿರೀಕ್ಷಕರಾದ ಸಂತೋಷ ಹಳ್ಳೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ