Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾರ್ವಜನಿಕರ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿಗೆ ಒತ್ತು ನೀಡಿ : ಕೃಷ್ಣಬೈರೇಗೌಡ

ಸುದ್ದಿಮೂಲ ವಾರ್ತೆ

ಮೈಸೂರು, ಆ.8 : ಸಾರ್ವಜನಿಕರು ಹಲವಾರು ಕೆಲಸಗಳು, ಸೌಲಭ್ಯಗಳಿಗೆ ಕಂದಾಯ ಇಲಾಖೆಗಳಿಗೆ ಅರ್ಜಿ ಸಲ್ಲಿಸುತ್ತಾರೆ. ಇವರ ಅರ್ಜಿಗಳನ್ನು ಸಕಾಲದಲ್ಲಿ ವಿಲೆವಾರಿ ಮಾಡಬೇಕು. ಅನಗತ್ಯವಾಗಿ ವಿಳಂಬ ಮಾಡಬಾರದು. ಆಡಳಿತ ವರ್ಗ ಚುರುಕಾಗಿ ಕಾರ್ಯ ನಿರ್ವಹಿಸಿ, ಜನಸ್ನೇಹಿ ಆಡಳಿತ ನೀಡಿ ಸರ್ಕಾರಕ್ಕೆ ಉತ್ತಮ ಹೆಸರು ತಂದು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು

ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಂದಾಯ ಇಲಾಖೆಯು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದಿರುವ ಇಲಾಖೆ. ಜನಪರ ಆಡಳಿತ ನೀಡುವುದು ಮಾತೃ ಇಲಾಖೆಯಾದ ಕಂದಾಯ ಇಲಾಖೆಯಿಂದ ಆರಂಭವಾಗಬೇಕು. ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.30% ರಷ್ಟು ಮಳೆ ಕೊರತೆ ಆಗಿದೆ. ಮುಂದೆಯೂ ಮಳೆ ಕಡಿಮೆ ಆಗುವ ಸಾಧ್ಯತೆ ಇರುವುದರಿಂದ ರೈತರು ಹೆಚ್ಚಿನ ನೀರನ್ನು ಬಳಸುವ ಬೆಳೆಗಳನ್ನು ಬೆಳೆಯಬಾರದು ಎಂದರು.

ಮಳೆಯಿoದ ಮಾನವ ಜೀವ ಹಾನಿ ಆಗಿದ್ದು, ಮುಂದೆ ಈ ರೀತಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಪಾಯದ ಸ್ಥಳದಲ್ಲಿ ಇರುವವರನ್ನು ಬೇರೆಡೆಗೆ ಶಿಪ್ಟ್ ಮಾಡಿ ಪ್ರಾಣ ಹಾನಿ ಆಗದಂತೆ ತಡೆಗಟ್ಟಬೇಕು. ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಕಾಲು ಸಂಕಗಳು ಹಾಗೂ ವೆಂಟೆಡ್ ಡ್ಯಾಮ್‌ಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಪತ್ತು ನಿರ್ವಹಣೆ ಪರಿಹಾರದಲ್ಲಿಯೂ ಅಕ್ರಮ ಆಗುತ್ತಿದ್ದು, ಅನರ್ಹರು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬರ, ಪ್ರವಾಹ ಹಾಗೂ ಕೋವಿಡ್‌ಗೆ ಸಂಬoಧಿಸಿದoತೆ ಕ್ಯಾಲಾಮಿಟಿ ಫಂಡ್‌ನಲ್ಲಿ ಕೈಗೊಂಡಿರುವ ಕಾಮಗಾರಿಗಳು 4 ವರ್ಷಗಳಿಂದ ಬಾಕಿ ಉಳಿದಿದ್ದು, ಇದರಲ್ಲಿಯೂ ಬಾಕಿ ಇರುವುದಕ್ಕೆ ಅಸಮದಾನ ವ್ಯಕ್ತಪಡಿಸಿದ ಅವರು ಅದೇ ವರ್ಷಗಳಲ್ಲಿ ಕಾಮಗಾರಿಗಳು ಮುಗಿಯಬೇಕು ಎಂದು ತಾಕೀತು ಮಾಡಿದರು.

ಭೂಮಿ ತಂತ್ರಾoಶದಲ್ಲಿ ಬರುವ ಕಡತಗಳನ್ನು 15 ದಿನಗಳಲ್ಲಿ ವಿಲೆವಾರಿ ಮಾಡಬೇಕು. ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿಯೂ ಸಕಾಲದಲ್ಲಿ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ವಿಳಂಬಕ್ಕೆ ಕಾರಣವಾದ ತಹಶೀಲ್ದಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ತಹಶೀಲ್ದಾರ್‌ಗಳು, ಉಪ ವಿಭಾಗಾಧಿಕಾರಿಗಳು, ಹಾಗೂ ಜಿಲ್ಲಾಧಿಕಾರಿಗಳು ತಮ್ಮ ಹಂತದಲ್ಲಿ ಇರುವ ಕೋರ್ಟ್ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳಬಾರದು. ವಾರದಲ್ಲಿ 2 ದಿನ ಕೋರ್ಟ್ ತೆಗೆದುಕೊಂಡು ಆದ್ಯತೆಯ ಮೇಲೆ ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಮಾತನಾಡಿ, ಪದೇ ಪದೇ ಪ್ರವಾಹ ಬಂದು ಅಪಾಯ ಉಂಟಾಗುವ ಊರುಗಳನ್ನು ಶಾಶ್ವತವಾಗಿ ಶಿಫ್ಟ್ ಮಾಡಿ ಶಾಶ್ವತ ಪುನರ್ವಸತಿ ಕಲ್ಪಿಸುವ ಕ್ರಮವನ್ನು ಜಿಲ್ಲಾಧಿಕಾರಿಗಳು ಕೈಗೊಳ್ಳಬೇಕು. ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸಕಾಲದಲ್ಲಿ ಆಗಬೇಕು ಎಂದರು.

ಕಂದಾಯ ಮತ್ತು ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ.ವಿ.ಮಹೇಶ್ ಅವರು ಮಾತನಾಡಿ, ಇಲ್ಲಿಯವರೆಗೆ ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆ ಆಗುವ ಮಾಹಿತಿ ಇದೆ. ಮಳೆ ಅನಾಹುತಗಳಿಗೆ ಎಸ್.ಡಿ.ಆರ್.ಎಫ್ ಅನುದಾನದಲ್ಲಿ ಪರಿಹಾರಗಳನ್ನು ವಿತರಣೆ ಮಾಡಬೇಕು. ಪಿಡಿ ಅಕೌಂಟ್‌ನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, ಕೆ.ಆರ್.ಎಸ್, ಕಬಿನಿ ಹಾಗೂ ಚಿಕ್ಕ ಡ್ಯಾಮ್‌ಗಳಾದ ನುಗು ಮತ್ತು ತಾರಕ ಜಲಾಶಯಗಳಿಂದ ಕುಡಿಯುವ ನೀರನ್ನು ಬಳಕೆ ಮಾಡಲಾಗುತ್ತಿದೆ. ರೈತರ ಬೆಳೆಗಳಿಗೆ ನೀರನ್ನು ಈಗಿನ ಪರಿಸ್ಥಿತಿಯಲ್ಲಿ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತರು ಡ್ರೈ ಬೆಳೆಗಳಾದ ರಾಗಿ ಜೋಳ ರೀತಿಯ ಬೆಳೆಗಳನ್ನು ಬೆಳೆಯುವಂತೆ ಅರಿವು ಮೂಡಿಸಲಾಗತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಾದೇಶಿಕ ಆಯುಕ್ತರಾದ ಪ್ರಕಾಶ್, ಕಂದಾಯ ಇಲಾಖೆಯ ಆಯುಕ್ತರಾದ ಸುನೀಲ್ ಕುಮಾರ್, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತರಾದ ಜೆ. ಮಂಜುನಾಥ್, ಹಾಸನ ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ, ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜ, ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ್, ಉಡುಪಿ ಜಿಲ್ಲಾಧಿಕಾರಿಗಳಾದ ವಿಧ್ಯಾಕುಮಾರಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಹಿಲನ್, ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ