Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕುಮಾರಸ್ವಾಮಿ ರಾಜಕೀಯ ಖಳನಾಯಕ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಮೈಸೂರು, ಅ.25: ಮಾಜಿ ಮತ್ತು ಹಾಲಿ ಸಿಎಂಗಳ ವಾಕ್ಸಮರ ತೀವ್ರತರನಾಗಿಯೇ ಮುಂದುವರಿದಿದೆ. ಇಬ್ಬರ ನಡುವೆ ಪರಸ್ಪರ ಆರೋಪ- ಪ್ರತ್ಯಾರೋಪಗಳು ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ಖಳನಾಯಕ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು. ಬಿಜೆಪಿವಿರುದ್ದವೂ ಹರಿಹಾಯ್ದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳನ್ನು ಮಹಾಭಾರತದ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ರಾಜ್ಯ ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಕುಮಾರಸ್ವಾಮಿ ಅವರೇ. ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್‌ ಹೋಟೆಲ್‌ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೆ? ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅವರ ಸರ್ಕಾರವನ್ನು ಸಿದ್ದರಾಮಯ್ಯ ಅವರೇ ಬೀಳಿಸಿದ್ದು, ಅದನ್ನು ಅವರು ಒಪ್ಪಿಕೊಳ್ಳಲಿ ಎಂದು ಹೇಳಿರುವುದ ಸರಿಯಲ್ಲ. ಅವರು ವಿಧಾನಮಂಡಲದ ವಿಶ್ವಾಸ ಮತಯಾಚನೆಯಾದ ಸಂದರ್ಭದಲ್ಲಿ ಉತ್ತರ ನೀಡಿದಾಗ ಈ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ರೆಕಾರ್ಡ್‌ನಲ್ಲಿ ಇದೆ. ಅದನ್ನು ಬಿಡುಗಡೆ ಮಾಡಲಾಗುವುದು. ಈಗ ಬೇರೆ ತರ ಹೇಳುತ್ತಿದ್ದಾರೆ. ಹೀಗೆ ಹೇಳಿ ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಶಾಸಕರು, ಸಚಿವರನ್ನು ಭೇಟಿ ಮಾಡದೆ ಹೋಟೆಲಿನಲ್ಲಿ ಕುಳಿತಿದ್ದರು ಎಂದು ಟೀಕಿಸಿದರು.

ಬಿಜೆಪಿಗಿಂತ ಕುಮಾರಸ್ವಾಮಿ ಹೆಚ್ಚು ಹತಾಶರು

ಬಿಜೆಪಿಗಿಂತಲೂ ಕುಮಾರಸ್ವಾಮಿ ರಾರಾಜಕೀಯವಾಗಿ ಹೆಚ್ಚು ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬಿಜೆಪಿ ಜೊತೆ ಸೇರದೇ ಹೋಗಿದ್ದರೆ ಒಂದು ಸ್ಥಾನವನ್ನೂ ಗೆಲ್ಲಲು ಆಗುತ್ತಿರಲಿಲ್ಲ. ಕುರುಡರು, ಹೆಳವರ ರೀತಿ ಒಬ್ಬರಿಗೊಬ್ಬರು ಅವಲಂಬಿತರಾಗಿದ್ದಾರೆ. ಅವರಿಬ್ಬರದ್ದು ಕುರುಡನ ಕಥೆ ಎಂದು ಜರಿದರು.

ಪಂಚ ರಾಜ್ಯಗಳ ಚುನಾವಣೆ ಬಂದಿರುವುದರಿಂದ ನೆಪಮಾಡಿಕೊಂಡು ಸುಳ್ಳು ಹೇಳುತ್ತಾರೆ. ಇಂದಿನವರೆಗೆ ನಾವು ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ. ಅದಕ್ಕಾಗಿ ಯಾರ ಬಳಿಯೂ ಹಣ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ವಿದ್ಯುತ್ ಕ್ಷಾಮ: ಕೃತಕ ಅಭಾವವಲ್ಲ

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುವುದು, ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ಆಗುತ್ತದೆ. ಅದರಿಂದ ಖರೀದಿಸಲಾಗುವುದು. ಕುಮಾರಸ್ವಾಮಿ ಅವರು ಹೇಳುವಂತೆ ಇದು ಕೃತಕವಾಗಿ ಆಗಿರುವ ಅಭಾವವಲ್ಲ. 2 ಬಾರಿ ಮುಖ್ಯಮಂತ್ರಿಯಾದವರು ಸತ್ಯ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ನನಗೆ ಗೊತ್ತಿಲ್ಲ

ಬೆಂಗಳೂರಿಗೆ ರಾಮನಗರ ಸೇರ್ಪಡೆ ರಾಮನಗರದಿಂದ ಕನಕಪುರವನ್ನು ಬೆಂಗಳೂರಿಗೆ ಸೇ ರ್ಪಡೆ ಮಾಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮುಖ್ಯಮಂತ್ರಿಗಳು ಈ ಪ್ರಶ್ನೆಯನ್ನು ಅವರನ್ನೇ ಕೇಳಿ ಎಂದರು. ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ಬಿಜೆಪಿಗೆ ಮಾನ , ಮರ್ಯಾದೆ ಇದೆಯೇ

ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25ಕೋಟಿ ಚುನಾವಣೆ ಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ , ಮರ್ಯಾದೆ ಇದೆಯೇ? ಎಂದು ಪ್ರಶ್ನಿಸಿದ ಸಿಎಂ, ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ಬರದ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿ ಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.

30 ಸಾವಿರ ಕೋಟಿ ಬಾಕಿ ಬಿಲ್ಲುಗಳು

ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30 ಸಾವಿರ ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನ ಮಂಡಲದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.

ಸಂಪುಟ ವಿಸ್ತರಣೆ

ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಚಿವರಾಗಬೇಕೆಂದು ಬಯಸುವುದರಲ್ಲಿ ತಪ್ಪಿಲ್ಲ. ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

ಮಹದೇವಪ್ಪ ಚೆನ್ನಾಗಿ ಕೆಲಸ ಮಾಡಿದ್ದಾರೆ

ನಾಡಹಬ್ಬ ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಎಲ್ಲ ಪಕ್ಷದ ಶಾಸಕರು, ಜನಪ್ರತಿನಿಧಿಗಳು ಬೆಂಬಲ ನೀಡಿದ್ದಾರೆ. ಎಲ್ಲ ಕಾರ್ಯಗಳು ಚೆನ್ನಾಗಿ ನಡೆದಿವೆ ಎಂದರು.ಉಸ್ತುವಾರಿ ಸಚಿವ ಮಹಾದೇವಪ್ಪ ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ ಸಿದ್ದರಾಮಯ್ಯ, ನಾಡಹಬ್ಬ ದಸರಾ ಆಚರಣೆಯ ಸ್ವರೂಪ ಬದಲಾವಣೆ ಬಗ್ಗೆ ಸಾರ್ವಜನರ ಅಭಿಪ್ರಾಯ ಕೇಳಬೇಕೆಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ