Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಜೆಪಿಯವರು ಕೇಂದ್ರಕ್ಕೆ ಹೋಗಿ ಪರಿಹಾರ ತರಲಿ

ಸುದ್ದಿಮೂಲ ವಾರ್ತೆ

ಮೈಸೂರು, ನ.5: ರಾಜ್ಯದ 216 ತಾಲೂಕುಗಳಲ್ಲಿ ಕಾಣಿಸಿಕೊಂಡಿರುವ ಬರ ಪರಿಹಾರಕ್ಕೆ ಹಣ ನೀಡದಿರುವುದು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್‌. ಈಶ್ವರಪ್ಪ ಸವಕಲು ನಾಣ್ಯ, ಅವರೊಬ್ಬ ಗಂಜಿ ಗಿರಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ವ್ಯಂಗ್ಯ ಮಿಶ್ರಿತ ಶೈಲಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಂತರಾಜ್ ವರದಿಯ ಬಗ್ಗೆ ಈಶ್ವರಪ್ಪ ವಿರೋಧ ಮಾಡುತ್ತಿರುವುದು ದ್ವಿಮುಖ ನೀತಿಯಾಗಿದೆ. ಈಶ್ವರಪ್ಪ ಒಂದು ಸವಕಲು ನಾಣ್ಯ. ಆದ್ದರಿಂದಲೇ ಅವರಿಗೆ ಟಿಕೆಟ್ ನೀಡಿಲ್ಲ. ಈಶ್ವರಪ್ಪ ಮಾತಿಗೆ ಬೆಲೆ ಇಲ್ಲ. ಕಾಂತರಾಜ್ ವರದಿ ಪರ ವಿಧಾನಸಭೆಯಲ್ಲಿ ಈಶ್ವರಪ್ಪ ಮಾತನಾಡಿದ್ದಾರೆ. ಈಗ ಅದನ್ನು ಸುಟ್ಟು ಹಾಕುತ್ತೇನೆ ಎಂದರೆ ಏನು ಅರ್ಥ. ಅವರ ಪಕ್ಷಕ್ಕೇನೇ ಬೇಡವಾದ ಗಿರಾಕಿ ಮಾತಿಗೆ ಜಾಸ್ತಿ ಬೆಲೆ ಕೊಡಬಾರದು ಎಂದು ಕಿಡಿಕಾರಿದರು.

ಸಿಎಂ ಬದಲಾವಣೆ ಮಾತಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ, ಜೆಡಿಎಸ್‌ನವರು ಸೋತು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಸರ್ಕಾರ ಸುಭದ್ರವಾಗಿದೆ. ನಮ್ಮ ಮಂತ್ರಿಗಳು ಏನೇನೋ ಹೇಳಿಕೆಗಳನ್ನು ನೀಡುತ್ತಿದ್ದರಿಂದ ಸಭೆ ಮಾಡಲಾಗಿದೆ. ಸುಮ್ಮನೆ ಹೇಳಿಕೆ ಕೊಡಬೇಡಿ. ನಿಮ್ಮ ಇಲಾಖೆಯ ಕಡೆ ಗಮನಹರಿಸಿ ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ನವೆಂಬರ್‌ನಲ್ಲಿ ಕಾಂತರಾಜು ವರದಿ:

ನವೆಂಬರ್‌ನಲ್ಲಿ ಕಾಂತರಾಜು ವರದಿ ಸಲ್ಲಿಕೆ ಆಗಬಹುದು. ವರದಿ ಕೈ ಸೇರುವ ಮುನ್ನವೇ ಅದಕ್ಕೆ ವಿರೋಧ ಎಂದರೆ ಏನು ಮಾಡಬೇಕು. ವರದಿಯಲ್ಲಿ ಏನಿದೆ ಅನ್ನೋದು ಗೊತ್ತಿಲ್ಲ, ಅಂಕಿ ಅಂಶ ಗೊತ್ತಿಲ್ಲದೆ ಆ ಬಗ್ಗೆ ಮಾತನಾಡಬಾರದು. ನವೆಂಬರ್ ಒಳಗೆ ವರದಿ ಕೊಡಬಹುದು. ಆನಂತರ ವರದಿಯಲ್ಲಿ ಏನಿದೆ? ಎಂಬುದನ್ನು ನೋಡೋಣ ಎಂದು ಹೇಳಿದರು.

ರಾಜ್ಯದ ಬರಪರಿಸ್ಥಿತಿಯ ಬಗ್ಗೆ ತಿಳಿಸಲು ನಮ್ಮ ರಾಜ್ಯದ ಸಚಿವರಿಗೆ ಕೇಂದ್ರ ಸಚಿವರು ಹಾಗೂ ಪ್ರಧಾನಿ ಮೋದಿ ಸಮಯ ನೀಡುತ್ತಿಲ್ಲ. 3 ದಿನ ದೆಹಲಿಯಲ್ಲಿ ನಮ್ಮ ಸಚಿವರು ಕಾದು, ಕೊನೆಗೆ ಸಚಿವರ ಕಾರ್ಯದರ್ಶಿಗಳನ್ನ ಭೇಟಿ ಮಾಡಿ ಬರುವ ಸ್ಥಿತಿ ಉಂಟಾಗಿದೆ. ಇದು ಕೇಂದ್ರ ಸರ್ಕಾರ ನಮ್ಮ ರಾಜ್ಯದ ಮೇಲೆ ತೋರುತ್ತಿರುವ ಮಲತಾಯಿ ಧೋರಣೆಗೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ಸಹಿಸಿಕೊಳ್ಳುತ್ತಿಲ್ಲ. ಹೀಗಾಗಿ ಬರ ಪರಿಹಾರದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನಾನು ಈ ವಿಚಾರದಲ್ಲಿ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರಕ್ಕೆ ಹೋಗಿ ಪರಿಹಾರ ತರಲಿ

ರಾಜ್ಯದ ಬಿಜೆಪಿ ನಾಯಕರು ಇಲ್ಲಿ ಓಡಾಡುವುದನ್ನು ಬಿಟ್ಟು ಕೇಂದ್ರಕ್ಕೆ ಹೋಗಿ ಪರಿಹಾರ ತರಲಿ ಎಂದು ಹೇಳಿದ ಸಿದ್ದರಾಮಯ್ಯ, ಕೇಂದ್ರದ ಪರಿಹಾರಕ್ಕೆ ನಾವು ಕಾದು ಕುಳಿತಿಲ್ಲ. ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದರು.

ಕೆ.ಇ. ಎ ಪರೀಕ್ಷೆ ತನಿಖೆ

ಕಲಬುರಗಿಯಲ್ಲಿ ಕೆ.ಇ. ಎ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ಬಿಚ್ಚಿಸಿದ್ದು, ಬ್ಲೂಟೂತ್ ಬಳಕೆಯಾಗುವ ಬಗ್ಗೆ ಮಾತನಾಡಿ ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಕೊಲೆ ಬಗ್ಗೆ ತನಿಖೆ

ಗಣಿಗಾರಿಕೆ ಅಧಿಕಾರಿ ಪ್ರತಿಮಾ ಅವರು ಕೊಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಬ್ಬಂಟಿಗಳಾಗಿದ್ದ ಅವರ ಕೊಲೆಯಾಗಿರುವ ಬಗ್ಗೆ ಈಗಷ್ಟೇ ಗಮನಕ್ಕೆ ಬಂದಿದೆ. ಕಾರಣ ಏನೆಂದು ತಿಳಿದುಬಂದಿಲ್ಲ ಈ ಬಗ್ಗೆ ವಿಚಾರ ಮಾಡಲಾಗುವುದು ಎಂದು ಹೇಳಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ