Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾಹಿತಿ, ಪರ್ತಕರ್ತ ರಾಮು ಇನ್ನಿಲ್ಲ

 

ಸುದ್ದಿಮೂಲ ವಾರ್ತೆ

ಮೈಸೂರು, ಜೂ.13 : ಎಲೆಮರೆ ಕಾಯಿಯಂತೆ ಸಾಹಿತ್ಯ ಮತ್ತು ಪತ್ರಿಕಾ ಕ್ಷೇತ್ರದಲ್ಲಿ ಬದ್ದತೆಯಿಂದ ತೊಡಗಿಸಿಕೊಂಡಿದ್ದ ಟಿ.ಎಸ್‌. ರಾಮಸ್ವಾಮಿ (69) ಅವರು ಮಂಗಳವಾರ ಮಂಜಾನೆ ನಗರದ ಸರಸ್ವತಿಪುರಂನಲ್ಲಿ ಇರುವ ನಿವಾಸದಲ್ಲಿ ನಿಧನರಾದರು.

ಸ್ಥಳೀಯ ಆಂದೋಲನ ಪತ್ರಿಕೆ ಪುರವಾಣಿ ಸಂಚಿಕೆ ಹಾಡುಪಾಡುವಿನ ಮೂಲಕ ಸಾಹಿತ್ಯ ಮತ್ತು ಸಾಮಾಜಿಕ ಆಗುಹೋಗುಗಳ ಬಗ್ಗೆ ಸಾಹಿತ್ಯದ ನೆಲೆಯಲ್ಲಿಯೇ ಬಿಂಬಿಸುವ ಮೂಲಕ ಮೆರಗು ನೀಡಿದ್ದರು.

ರಾಮು ಅವರ ಗರಡಿಯಲ್ಲಿ ಬೆಳೆದ ಪರ್ತಕರ್ತರು ರಾಜ್ಯಾದ್ಯಂತ ಇದ್ದಾರೆ. ಕವಿಯೂ ಆಗಿದ್ದ ಅವರು ʻಅಗ್ನಿಸೂಕ್ತʼ ಕವನ ಸಂಕಲವನ್ನು ಬರೆದಿದ್ದಾರೆ. ಜ್ಞಾನ ಪ್ರದರ್ಶನಕ್ಕೆ ಇಳಿಯದೆ ನಾಡಿನ ಲೇಖಕರು, ಚಿಂತಕರ ಸಾಕ್ಷಿಪ್ರಜ್ಷೆಯಂತೆ ಇದ್ದರು. ,ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ಅತ್ಯಾಪ್ತರಾಗಿದ್ದ ಅವರು, ಪುಣೆ ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞಾನ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು.

ಗಣ್ಯರ ಕಂಬನಿ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಖ್ಯಾತ ಸಾಹಿತಿ ದೇವನೂರ ಮಹದೇವ, ಜಿ.ಪಿ.ಬಸವರಾಜು, ವನ್ಯಜೀವಿ ತಜ್ಷರಾದ ಕೃಪಾಕರ, ಸೇನಾನಿ, ಕಾಡಾ ಮಾಜಿ ಅಧ್ಯಕ್ಷ ದೇವನೂರು ಶಿವಮಲ್ಲು, ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್‌, ಆಂದೋಲನ ಪತ್ರಿಕೆ ಸಂಪಾದಕ ರವಿಕೋಟಿ, ಕಾಳಚನ್ನೇಗೌಡ, ಮೈಸೂರು ವಿವಿ ಮಾಜಿ ಸೆನೆಟ್‌ ಸದಸ್ಯ ಗೋಪಿನಾಥ್‌, ರಂಗಭೂಮಿ ಕಲಾವಿದರಾದ ಪ್ರಸಾದ್‌ ಕುಂದೂರು, ಸುಗುಣ, ದೀಪಕ್‌, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಂ, ಲೋಕೇಸ್‌ ಮೊಸಳೆ, ಪತ್ರಕರ್ತರಾದ ಹರೀಶ್‌ ಮಹೇಂದ್ರ, ಚಿನ್ನಸ್ವಾಮಿ ವಡ್ಡಗೆರೆ, ಶ್ರೀಧರ್‌ ಭಟ್‌,ಓಂಕಾರ್‌ , ಕೆ.ಪಿ. ಮಹದೇವ, ಬೇಲೂರು ವಿಜಯಕುಮಾರ್‌ ಸೇರಿದಂತೆ ಹಲವಾರ ಮಂದಿ ಅಂತಿಮ ನಮನ ಸಲ್ಲಿಸಿದರು.

 

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ