Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮರಾಠ ಬೃಹತ್ ಸಮಾವೇಶ ಮರಾಠ ಸಮಾಜದ ಬಂಧುಗಳು ಒಂದಾಗಿ : ಸಚಿವ ಲಾಡ್

ಸುದ್ದಿಮೂಲ ವಾರ್ತೆ ಬೀದರ್, ನ.30:
ಮರಾಠ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಹೇಳಿದ್ದಾರೆ.
ಬೀದರ್ ನಗರದ ಗಣೇಶ ಮೈದಾನದಲ್ಲಿ ಹಮ್ಮಿಿಕೊಂಡಿದ್ದ ಜಿಲ್ಲಾ ಮಟ್ಟದ ಸ್ವಾಾಭಿಮಾನಿ ಮರಾಠ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ಕಾರ್ಯಕ್ರಮ ವಿಶೇಷವಾಗಿದೆ. ಬೀದರ್‌ಗೆ ಹಲವಾರು ಬಾರಿ ಬಂದಿದ್ದೆ. ಆಗ ನಮ್ಮ ಸಮಾಜದ ಮುಖಂಡರು ಸಂಘಟನೆ ಮಾಡಬೇಕು, ಸಮಾಜವನ್ನು ಒಂದು ಗೂಡಿಸಬೇಕು ಎಂದು ಮಾತನಾಡಿದ್ದೇವೆ. ಈಗ ಕಾಲ ಕೂಡಿ ಬಂದಿದೆ. ಸಮಾಜದ ಎಲ್ಲಾ ಮುಖಂಡರು ಶ್ರದ್ಧೆೆಯಿಂದ ಕಷ್ಟ ಬಿದ್ದು ಸಮಾಜದ ಬಂಧುಗಳನ್ನು ಸೇರಿಸಿದ್ದೀರಾ. ಇದಕ್ಕಾಾಗಿ ನಿಮಗೆ ಧನ್ಯವಾದಗಳು ಎಂದರು. .
ಛತ್ರಪತಿ ಶಿವಾಜಿ ಮಹಾರಾಜರು ಇಡೀ ವಿಶ್ವದಲ್ಲೇ ಜಾತ್ಯತೀತ ನಾಯಕರಾಗಿದ್ದರು. ಅವರು ಮೊಘಲರ ವಿರುದ್ಧವಿದ್ದರು. ಮುಸ್ಲಿಿಮರ ವಿರುದ್ಧ ಅಲ್ಲ. ಇದನ್ನು ನಾವು ತಿಳಿಯಬೇಕು ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಹಾಯ ಮಾಡಿ ಲಂಡನ್‌ಗೆ ಹೋಗಿ ಉನ್ನತ ಅಧ್ಯಯನ ಮಾಡಲು ಸಹಾಯ ಮಾಡಿದವರು ನಮ್ಮ ಸಮಾಜದ ರಾಜರಾದ ಗಾಯಕ್ವಾಾಡ್ ಹಾಗೂ ಶಾಹು ಮಹಾರಾಜರು. ಅಂಬೇಡ್ಕರ್ ತಮಗೆ ದೊರೆತ ಸಹಾಯದಿಂದ ಹೊರ ದೇಶದಲ್ಲಿ ಓದಿ ಬಂದರು. ಪ್ರಪಂಚ ಕಂಡ ಬಹುದೊಡ್ಡ ಸುಧಾರಕ ಅಂಬೇಡ್ಕರ್ ಅವರು ಎಂದರು.
ನಾನು ರಾಜ್ಯದಲ್ಲಿ ಎಲ್ಲೆಲ್ಲಿ ಹೋಗುತ್ತೀನೋ ಅಲ್ಲೆಲ್ಲ ಮರಾಠ ಸಮಾಜದ ಬಂಧುಗಳು ಕಷ್ಟದಲ್ಲಿ ಇದ್ದಾರೆ. ನಾನು ಪುಣ್ಯ ಮಾಡಿದ್ದೇನೆ. ಮರಾಠ ಸಮಾಜದಲ್ಲಿ ಹುಟ್ಟಿಿದ್ದೇನೆ ಎಂದು ಹೇಳಿಕೊಳ್ಳಲು ಹೆಮ್ಮೆೆ ಇದೆ ಎಂದರು.
ಪ್ರತಿ ತಿಂಗಳು ನಾನು ಬರಲು ಸಿದ್ಧನಿದ್ದೇನೆ. ನಿಮಗೆ ಬೆಂಬಲ ನೀಡುತ್ತೇನೆ. ಆದರೆ ನಾವೆಲ್ಲ ಒಂದಾಗಬೇಕು. ಒಗ್ಗಟ್ಟಾಾಗಬೇಕು. ಇಲ್ಲಿ ರಾಜಕೀಯ ಬೇಕಿಲ್ಲ. ಜೀಜಾಬಾಯಿ ಟ್ರಸ್ಟ್ ಆರಂಭಿಸಿ ನಡೆಸಿ. ಎಲ್ಲ ಸಹಾಯ ಮಾಡುತ್ತೇನೆ ಎಂದರು.
ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಿಯುತವಾದಾಗ ರಾಜಕೀಯ ತನ್ನಿಿಂತಾನೆ ಬರುತ್ತೆೆ. ಅದಕ್ಕೆೆ ನಾವು ಇಂದು ನಿರ್ಧಾರ ಮಾಡೋಣ. ಇಂದು ಪ್ರಮಾಣ ಮಾಡೋಣ. ಸಮಾಜಕ್ಕಾಾಗಿ ಕೆಲಸ ಮಾಡುತ್ತೇನೆ ಎಂದು. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧೀ ಆಗಲಿದೆ ಎಂದು ಹೇಳಿದರು.
ಇಡೀ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ಸಂಖ್ಯೆೆಯಲ್ಲಿ ಮರಾಠ ಸಮಾಜದವರು ಇದ್ದಾರೆ. ನಾವು ಎಲ್ಲಾ ಸಮಾಜದ ಬಂಧುಗಳ ಜೊತೆಗೆ ಸಾಮರಸ್ಯದಿಂದ, ಅಣ್ಣ ತಮ್ಮಂದಿರಂತೆ ಬಾಳೋಣ. ಛತ್ರಪತಿ ಶಿವಾಜಿ ಮಹಾರಾಜರು, ಶಾಹು ಹಾಗೂ ಗಾಯಕ್ವಾಾಡ್ ಮಹಾರಾಜರು ಹೇಳಿದ ಮಾರ್ಗ ಅನುಸರಿಸೋಣ. ಮುಂದಿನ ದಿನಗಳಲ್ಲಿ ಟ್ರಸ್ಟ್ ಮೂಲಕ ಅಂಬೇಡ್ಕರ್ ಹಾಗೂ ಬಸವಣ್ಣವರ ವಿಚಾರ ತಿಳಿಸೋಣ ಎಂದು ವಿವರಿಸಿದರು.
ಈ ಸಮಾವೇಶದ ಮೂಲಕ ಮೊದಲ ಬಾರಿಗೆ ಒಂದು ಪ್ರಯತ್ನ ಮಾಡಿದ್ದೇವೆ. ಇಷ್ಟು ಯಶಸ್ಸು ಸಾಧಿಸುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಈ ಕಾರ್ಯಕ್ರಮ ನನಗೆ ಸಾಕಷ್ಟು ಶಕ್ತಿಿ ನೀಡಿದೆ. ನಿಮ್ಮ ಆಶೀರ್ವಾದ ಇರಲಿ. ಮುಂದಿನ ದಿನಗಳಲ್ಲಿ ಜೀಜಾಬಾಯಿ ಟ್ರಸ್ಟ್ ಉತ್ತರ ಕರ್ನಾಟಕದಲ್ಲಿ ನಂರ್ಬ ಒನ್ ಟ್ರಸ್ಟ್ ಆಗಲು ಸಹಾಯ ಮಾಡುತ್ತೇನೆ. ಹಂತ ಹಂತವಾಗಿ ಕಾರ್ಯಕ್ರಮ ಮಾಡೋಣ ಎಂದು ಕರೆ ನೀಡಿದರು.
ಸಮಾವೇಶಕ್ಕೂ ಮುನ್ನ ಬೀದರ್‌ನ ಶಿವಾಜಿ ವೃತ್ತದ ಬಳಿ ಅಪಾರ ಸಂಖ್ಯೆೆಯಲ್ಲಿ ಸೇರಿದ್ದ ಸಮಾಜ ಬಾಂಧವರು ಸಚಿವ ಲಾಡ್ ಅವರನ್ನು ಅದ್ದೂರಿಯಾಗಿ ಸ್ವಾಾಗತ ಕೋರಿದರು. ಛತ್ರಪತಿ ಶಿವಾಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಲಾಡ್ ಅವರು ನಂತರ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮರಾಠ ಸಮಾಜದ ಪ್ರಮುಖರು ಉಪಸ್ಥಿಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ