Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ರಕ್ತದಾನದ ಮೂಲಕ ಅರ್ಥಪೂರ್ಣವಾಗಿ ಜನ್ಮದಿ‌ನ ಆಚರಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್

ಸುದ್ದಿಮೂಲ ವಾರ್ತೆ

ಅ.9: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಇಂದು 54 ನೇ ಹುಟ್ಟುಹಬ್ಬದ ಸಂಭ್ರಮ. ಬೆಳಗ್ಗೆಯಿಂದಲೇ ಸಹಸ್ರಾರು ಅಭಿಮಾನಿಗಳು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ತಮ್ಮ ಹುಟ್ಟುಹಬ್ವವನ್ನ ಯಾರು ಅದ್ದೂರಿಯಾಗಿ ಆಚರಿಸದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದ ಸಚಿವರು, ಹಾರ ತುರಾಯಿ, ಗಿಫ್ಟ್ ಗಳ ಬದಲು, ಅಂಗಾಂಗ ದಾನ ಹಾಗೂ ರಕ್ತ ದಾನ ಮಾಡಿ. ಅದೇ ನೀವು ನನಗೆ ಹುಟ್ಟುಹಬ್ಬಕ್ಕೆ ನೀಡುವ ನಿಜವಾದ ಗಿಫ್ಟ್ ಎಂಬ ಸಂದೇಶವನ್ನ ಅಭಿಮಾನಿಗಳಿಗೆ ನೀಡಿದ್ದರು.

ಕಾರ್ಯಕರ್ತರು ಹಾಗೂ ಅಭಿಮಾನಿಗಳ ಹಾರೈಕೆ ಸ್ವೀಕರಿಸಿದ ಸಚಿವರು, ನೇರವಾಗಿ ಆರೋಗ್ಯ ಸೌಧಕ್ಕೆ ಭೇಟಿ ನೀಡಿ ರಾಜ್ಯ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ರಕ್ತದಾನ ಮಾಡುವುದರೊಂದಿಗೆ ಸಚಿವ ದಿನೇಶ್ ಗುಂಡೂರಾವ್, ತಮ್ಮ 54 ನೇ ಹುಟ್ಟುಹಬ್ಬವನ್ನ ಸರಳ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಸ್ವತಃ ಸಚಿವರು ರಕ್ತದಾನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ರಕ್ತದಾನ ಮಾಡಿದರು.

ಇನ್ನು ಸಚಿವರ ಜೊತೆ ಕೈಜೊಡಿಸಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಎನ್.ಎಚ್.ಎಮ್ ಎಂ.ಡಿ ನವೀನ್ ಭಟ್ ಅವರು ಸಹ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯಲ್ಲಿ ಸುಮಾರು 60 ಕ್ಕೂ ಹೆಚ್ಚು ಬ್ಲಡ್ ಯೂನಿಟ್ ಗಳನ್ನ ಸಂಗ್ರಹಿಸಲಾಯಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ