ಕರ್ನಾಟಕ ರಾಜ್ಯದಲ್ಲಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ರವರ ನೇತೃತ್ವದ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಅಭಿವೃದ್ಧಿಗೆ ಪ್ರಮುಖವಾಗಿ ಪಾತ್ರವಹಿಸುತ್ತಿದೆ ಎಂದು ಹೇಳಿದರು.
ಅದೇ ರೀತಿ ತೆಲಂಗಾಣ ರಾಜ್ಯದಲ್ಲಿಯೂ ನಮ್ಮ ಕಾಂಗ್ರೆಸ್ ಪಕ್ಷವು 6 ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ನೀಡಿದ್ದು ತೆಲಂಗಾಣದ ಜನತೆ ಸ್ಪಷ್ಟ ಬಹುಮತವನ್ನು ನೀಡಿದರೆ ಇಲ್ಲಿಯೂ ಈ 6 ಗ್ಯಾರಂಟಿ ಗಳನ್ನು ಈಡೇರಿಸಿ ರೈತರ, ಬಡವರ ,ಮಹಿಳೆಯರ ನಿರುದ್ಯೋಗಿಗಳ,ಹಾಗೂ ಎಲ್ಲಾ ವರ್ಗದವರ ಅಭಿವೃದ್ಧಿಗೆ ಸಹಕಾರವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.