Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಜನರ ನೆಮ್ಮದಿಯ ಜೀವನಕ್ಕೆ ಪೂರಕವಾಗಿ ಕೆಲಸ ಮಾಡಬೇಕು - ಸಚಿವ ಕೃಷ್ಣಭೈರೇಗೌಡ

ಸುದ್ದಿಮೂಲ ವಾರ್ತೆ

ತುಮಕೂರು, ಸೆ.8 : ಸರ್ಕಾರದ ಆಡಳಿತದಲ್ಲಿ ಕಂದಾಯ ಇಲಾಖೆಗೆ ದೊಡ್ಡ ಪಾತ್ರವಿದ್ದು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನಪರವಾಗಿ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯು ಸರ್ಕಾರದ ಮಾತೃ ಇಲಾಖೆಯಾಗಿದ್ದು, ಪ್ರತಿನಿತ್ಯ ಲಕ್ಷಾಂತರ ಜನ ಕಂದಾಯ ಇಲಾಖೆ ಕಚೇರಿಗೆ ಜಾತಿ, ಆದಾಯ ಪ್ರಮಾಣ, ಪಹಣಿ, ಸರ್ವೆ, ಇನ್ನೂ ಮುಂತಾದ ಕೆಲಸ ಕಾರ್ಯಗಳಿಗಾಗಿ ಜನರು ಬರುತ್ತಾರೆ. ಸಾರ್ವಜನಿಕರನ್ನು ಸುಮ್ಮನೇ ಅಲೆದಾಡಿಸದೆ ಕೆಲಸದಲ್ಲಿ ವೇಗ ಪಡೆದುಕೊಂಡು ಜನಸಾಮಾನ್ಯರ ಕೆಲಸ ಮಾಡಿಕೊಡಬೇಕು ಎಂದು ಸೂಚಿಸಿದರು.

2019-20ನೇ ಸಾಲಿನಲ್ಲಿ ಬರಪೀಡಿತ ತಾಲ್ಲೂಕುಗಳಾಗಿ

ಚಿಕ್ಕನಾಯಕನಹಳ್ಳಿ, ಶಿರಾ, ತಿಪಟೂರಿಗೆ ಕುಡಿಯುವ ನೀರಿಗಾಗಿ ಬಿಡುಗಡೆ ಮಾಡಿದ್ದ 70ಲಕ್ಷ ರೂ.ಗಳು ಎಸ್.ಡಿ.ಆರ್.ಎಫ್. ಪಿಡಿ ಖಾತೆಯಲ್ಲಿ ಖರ್ಚಾಗದೆ ಉಳಿದಿದ್ದು, ಅನುದಾನವನ್ನು ಯಾಕೆ ಉಳಿಸಿಕೊಂಡಿದ್ದೀರಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಶ್ನಿಸಿದ ಅವರು, ಸದರಿ ಅನುದಾನವನ್ನು ಜಿಲ್ಲಾ ಪಂಚಾಯತ್‌ಗೆ ವರ್ಗಾಯಿಸುವಂತೆ ಸೂಚಿಸಿದರು.

ಜೆ ಸ್ಲಿಪ್, ಪಾವತಿ ಮ್ಯುಟೆಶನ್ ವ್ಯವಸ್ಥೆಯನ್ನು ಹಾಗೆ ಉಳಿಸಿಕೊಂಡು, ಉಳಿದ ಸೇವೆಗಳನ್ನು ಸ್ವಯಂಚಾಲಿತವಾಗಿ ಮ್ಯುಟೆಷನ್ ಮಾಡುವ ಮೂಲಕ ಕೆಲಸದ ಒತ್ತಡವನ್ನು ಕಡಿಮೆ

ಮಾಡಬಹುದಾಗಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳ ಸಲಹೆ ಸೂಚನೆಗಳನ್ನು ಆಲಿಸಿದ ಸಚಿವರು, ತುಮಕೂರು ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 5ವರ್ಷ ಮೀರಿದ 5300 ಪ್ರಕರಣಗಳು ಸೇರಿದಂತೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕೋರ್ಟ್ ಕೇಸ್ ಫೆಂಡೆನ್ಸಿ 11,000 ದಷ್ಟಿದ್ದು ಇದು ಒಪ್ಪಿಕೊಳ್ಳುವ ಅಂಕಿ ಅಂಶ ಅಲ್ಲ. ಆದ್ದರಿಂದ ಉಪವಿಭಾಗಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಕೋರ್ಟ್ ನಡೆಸಬೇಕು. ಇನ್ನು ಎರಡು ತಿಂಗಳೊಳಗಾಗಿ ಅರ್ಧದಷ್ಟು ಪ್ರಕರಣಗಳನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದರು.

ತುಮಕೂರು ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಕಚೇರಿಗಳಲ್ಲಿ ಕಡ್ಡಾಯವಾಗಿ ಇ-ಆಫೀಸ್ ಜಾರಿಗೊಳಿಸಬೇಕು. ಜನಪರವಾಗಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿ ಸಿಬ್ಬಂದಿಗಳು ನಡೆದುಕೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಟಿ.ಬಿ.ಜಯಚಂದ್ರ ಮಾತನಾಡಿ, ಶಿರಾ ಕ್ಷೇತ್ರದಲ್ಲಿ ನೂರಾರು ಬೋಗಸ್ ಹಕ್ಕುಪತ್ರ ವಿತರಣೆಯಾಗಿದ್ದು, 1500 ಎಕರೆಗೂ ಹೆಚ್ಚು ಅರಣ್ಯ ಭೂಮಿ ಭೂ ಕಬಳಿಕೆದಾರರ ಪಾಲಾಗಿದ್ದು, ಈ ಕುರಿತಂತೆ ತನಿಖೆ ನಡೆಸುವಂತೆ ಕಂದಾಯ ಸಚಿವರಲ್ಲಿ ಮನವಿ ಮಾಡಿದಾಗ ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮಧುಗಿರಿ ಉಪವಿಭಾಗಾಧಿಕಾರಿಗಳು ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಂಡು ಇನ್ನೊಂದು ತಿಂಗಳೊಳಗಾಗಿ ತನಿಖೆಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಸರ್ಕಾರಿ ಜಮೀನುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು ಎಂದು ಅವರು ಈ ಸಂದರ್ಭ ಸೂಚಿಸಿದರು. ಪ್ರತಿ ತಿಂಗಳು ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ತಪ್ಪದೇ ಪರಿಶೀಲಿ ಸಲಾಗುವುದು ಹಾಗೂ 2-3ತಿಂಗಳಿಗೊಮ್ಮೆ ಭೌತಿಕ ಸಭೆ ನಡೆಸುವುದಾಗಿ ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ