Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಆರ್ ಡಿ ಪಾಟೀಲ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ- ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿಮೂಲ ವಾರ್ತೆ

ಕಲಬುರಗಿ, ನ.8 : ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ಬಂಧನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಒಂದು ಮೊಬೈಲ್ ಸಿಕ್ಕಿದೆ ಅದನ್ನು ವಿಧಿವಿಜ್ಞಾನ‌ ಸಂಸ್ಥೆಗೆ ಕಳಿಸಲಾಗಿದೆ ತನಿಖೆ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೆಲವೊಮ್ಮೆ ಮಾಹಿತಿ ಕೊಟ್ಟರೂ ಕೂಡಾ ಕಾರಣಾಂತರಗಳಿಂದ ಬಂಧನ ಮಾಡಲಾಗಿರುವುದಿಲ್ಲ. ಕೆಲವೊಮ್ಮೆ ನಮ್ಮವರೇ ಶಾಮೀಲಾಗಿರುತ್ತಾರೆ. ಆದರೆ, ನಮ್ಮವರು ಶಾಮೀಲಾಗಿರುವುದು ಕಂಡುಬಂದರೇ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈಗ ತನಿಖೆ ನಡೆಯುತ್ತಿದೆ. ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ. ಸರ್ಕಾರ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಳುವುದಿಲ್ಲ ಎಂದರು.

ಸರ್ಕಾರದ ವತಿಯಿಂದ ಏನೇನು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಒಂದಿಬ್ಬರು ಕಾಪಿ ಮಾಡಿರಬಹುದು. ಕೆಲವು ಕಡೆ ಬ್ಲೂಟೂಥ್ ಬಳಕೆಯಾಗಿದೆ. ಕಲಬುರಗಿ ಮಾತ್ರ ಅಲ್ಲದೇ ಯಾದಗಿರಿ, ವಿಜಯಪುರದಲ್ಲಿ, ಹುಬ್ಬಳ್ಳಿಯಲ್ಲಿ ಹಾಗೂ ಬೆಂಗಳೂರಿನಲ್ಲಿಯೂ ಕೂಡಾ ಘಟನೆ ನಡೆದಿವೆ. ಇದರ ಲೋಪಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಯಾವುದೇ ಪ್ರಕರಣ ಆದರೂ ಅದರ ಗಾಂಭೀರ್ಯತೆ ತಿಳಿದುಕೊಂಡು ಸರ್ಕಾರ ಮುಂದಿನ‌ ಕ್ರಮ ಕೈಗೊಳ್ಳಲಿದೆ. ಓಎಂ ಆರ್ ನಮ್ಮ ಜಿಲ್ಲೆಯಲ್ಲಿ ನಡೆದಿಲ್ಲ ಬೇರೆ ಕಡೆ ನಡೆದಿದೆ. ಓಎಂ ಆರ್ ಹೊರಗಡೆ ಬಂದಿದೆ ಎಂದರೆ ಯಾರಾದರೂ ಮೊಬೈಲ್ ಬಳಸಿರಬಹುದು. ಇದು ರಾಜ್ಯದ ಬೇರೆ ಬೇರೆ ಕಡೆ ನಡೆದಿದೆ. ಹಾಗಾಗಿ ಈ ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಯುತ್ತಿದೆ ಅದರ ವರದಿ ಆಧರಿಸಿ ಪ್ರಕರಣವನ್ನು ಸಿಓಡಿಗೆ ಅಥವಾ ಸಿಬಿಐ ಗೆ ಕೊಡುವ ಕುರಿತು ಗೃಹ ಸಚಿವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಆ ಬಗ್ಗೆ ಹಿಂಜರಿಯುವ ಪ್ರಶ್ನೆಯೇ ಇಲ್ಲ ಎಂದರು.

ಆರ್ ಡಿ ಪಾಟೀಲ್ ಗೆ ಪ್ರಿಯಾಂಕ್ ಖರ್ಗೆ ಅವರ ಶ್ರೀ ರಕ್ಷೆ ಇದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಟಾಂಗ್ ನೀಡಿದ ಅವರು, ಈ ಹಿಂದೆ ಪಿಎಸ್ ಐ ಪರೀಕ್ಷೆ ನಡೆದಾಗ ಯಾವ ಸಂಸದರು ಶಾಲೆಯೊಂದರಲ್ಲೇ ಪರೀಕ್ಷೆ ನಡೆಯಬೇಕು ಪತ್ರ ಬರೆದಿದ್ದರು. ಯಾವ ಶಾಸಕರು ಶಾಸಕರ ಭವನದಲ್ಲೇ ಡೀಲ್ ಮಾಡಿದ್ದರು. ಅಂದಿನ ಗೃಹ ಸಚಿವರ ಆರೋಪಿತರ ಮನೆಗೆ ಹೋಗಿ ಗೋಡಂಬಿ ಚಹಾ ಸೇವನೆ ಮಾಡಿದ್ದರು. ಮಾಜಿ ಸಚಿವರೊಬ್ಬರು ಆರೋಪಿಗಳ ಬಂಧನವಾದಾಗ ಬಿಡುಗಡೆ ಮಾಡಲು ಕೋರಿದ್ದರು. ಈಗ ನಮ್ಮ ಬಗ್ಗೆ ನನ್ನ ಶಾಸಕರ ಬಗ್ಗೆ ಅನುಮಾನಗಳಿದ್ದರೆ ಬಿಜೆಪಿ ದಾಖಲೆ ನೀಡಲಿ. ನನಗೆ ಆರ್ ಡಿ ಪಾಟೀಲ್ ಆತ್ಮೀಯನಿದ್ದರೆ ಬಿಜೆಪಿಯವರು ಯಾವ ಅವನನ್ನು ಬಂಧಿಸಲಿಲ್ಲ. ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ ಜೊತೆಗೆ ಆಳವಾಗಿ ಅಧ್ಯಯನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಸರ್ಕಾರಕ್ಕೆ ಯುವಕರ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ. ಈ ಹಿಂದೆ ಅಂತಿಮ ಪಟ್ಟಿ ಪ್ರಕಟಣೆ ಆದ 7 ತಿಂಗಳ ಮೇಲೆ ಸರ್ಕಾರ ಎಚ್ಚೆತ್ತುಕೊಂಡಿತ್ತು. ಆದರೆ ಈಗ ಇಲ್ಲಿ ಹಾಗಾಗಿಲ್ಲ‌. ಯುವಕರ ಭವಿಷ್ಯಕ್ಕಾಗಿ

Prevention of Corruption in Government Recruitment ಬಿಲ್ ತಯಾರಿಸುತ್ತಿದ್ದೇವೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ಖಾಸಗಿ ಬಿಲ್ ಮೂವ್ ಮಾಡಿದ್ದೆ‌. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗಿದೆ. ಅದು ಈಗಾಗಲೇ ಕಾನೂನು ಸಚಿವರ ಒಪ್ಪಿಗೆ ನಂತರ ಡಿಪಿಆರ್ ಗೆ ಕಳಿಸಿದ್ದಾರೆ. ಸಿಎಂ ಅವರು ಡಿಪಿಆರ್ ತರಿಸಿಕೊಂಡು ಮಂಜೂರು ಮಾಡಿದರೆ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಪರೀಕ್ಷೆಗಳಲ್ಲಿ ನಡೆದ ಅಕ್ರಮ ಸರ್ಕಾರಕ್ಕೆ ಮುಜುಗರ ಎದುರಾದರೂ ಕೂಡಾ ಪರೀಕ್ಷೆಗೆ ಮುನ್ಮ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಪರೀಕ್ಷೆ ಕೇಂದ್ರ ಬಳಿಯ ಲಾಡ್ಜ್ ಗಳ ತಪಾಸಣೆ ನಡೆಸಲಾಗಿದೆ. 200 ಅಡಿ ಒಳಗೆ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶ ನೀಡಿಲ್ಲ. ಡಿಟೆಕ್ಟರ್ ಕೂಡಾ ಅಳವಡಿಸಲಾಗಿತ್ತು. ಈ ಹಿಂದೆ ಈ ರೀತಿ ಕ್ರಮ ಕೈಗೊಳ್ಳಲಾಗಿತ್ತಾ? ಎಂದು ಪ್ರಶ್ನಿಸಿದ ಖರ್ಗೆ, ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ 50% ಅಭ್ಯರ್ಥಿಗಳು ಪರೀಕ್ಷೆಗೆ ಗೈರು ಹಾಜಿರಾಗಿದ್ದರು ಎಂದರು.

ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಮಫ್ತಿಯಲ್ಲಿ ಪರಿಶೀಲನೆಗೆ ಹೋಗಿದ್ದರು. ಆಗ ಆರ್ ಡಿ ಪಾಟೀಲ್ ಹಿಂದಿನಿಂದ ಹೋಗಿದ್ದಾನೆ ಎಂದರು. ಪೊಲೀಸರ ಮಧ್ಯೆ ಕ್ರೆಡಿಟ್ ವಿಚಾರದಲ್ಲಿ ಭಿನ್ನಾಭಿಪ್ರಾಯ ಇದೆ ಎನ್ನುವುದನ್ನು ತಳ್ಳಿ ಹಾಕಿದ ಸಚಿವರು ಅಧಿಕಾರಿಗಳು ಇನ್ನೂ ಬಿಜೆಪಿಯ ಅಮಲಿನಲ್ಲಿ ಇದ್ದಾರೆ. ನಮಗೆ ಗ್ಯಾರಂಟಿ‌ ಜಾರಿಗೆ ತರುವುದರಲ್ಲಿ ಸ್ವಲ್ಪ ಆ ಕಡೆ ಬಿಜಿ ಆಗಿದ್ದೆವು. ಅವರಿಗೆ ಟೈಟ್ ಮಾಡಲು ಕಾಲಾವಕಾಶ ಬೇಕು. ನಾವು ಅಧಿಕಾರಕ್ಕೆ ಬಂದ ಮೇಲೆ ಸುಧಾರಣೆ ಕಂಡಿದೆ ಎಂದು ಒತ್ತಿ ಹೇಳಿದರು.

ಕಿಯೋನಿಕ್ಸ್ ನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಬಿಜೆಪಿಯವರಿಗೆ ಮಾಡಲು‌ ಕೆಲಸ ಇಲ್ಲ. ಅವರು ಯಾರೋ ಹೇಳಿದ್ದನ್ನು ಕೇಳುತ್ತಾರೆ. ಸುಳ್ಳಿನ‌ ಕಾರ್ಖಾನೆ ತೆಗೆದಿದ್ದಾರೆ. ಐಟಿ ಸೆಲ್ ನವರಹ ವಾಟ್ಸಪ್ ನಲ್ಲಿ ಏನು ಹಾಕುತ್ತಾರೋ ಅದನ್ನೇ ನಂಬುತ್ತಾರೆ. ಯಾವುದೇ ಪ್ರಕರಣದ ಕುರಿತಂತೆ ಆಳವಾದ ಅಧ್ಯಯನ ಮಾಡುವುದನ್ನು ಬಿಜೆಪಿ ಕಲಿಯಲಿ. ನಾಳೆ ಬೆಂಗಳೂರಿನಲ್ಲಿ ಈ ಬಗ್ಗೆ ಪ್ರೆಸ್ ಮೀಟ್ ಮಾಡಲಿದ್ದೇನೆ. ಆಗ ಯಾರು ರಾಜೀನಾಮೆ ನೀಡಬೇಕಾಗಬಹುದು ಎನ್ನುವ ಸಂಗತಿ‌ ಹೊರಬಲಿದೆ ಎಂದರು.

ಬಿಜೆಪಿಯವರು ಮೂರನೆಯ ಪಾರ್ಟಿ‌ ಪರಿಶೀಲನೆ ಮಾಡದೆ ದುಡ್ಡು ಬಿಡುಗಡೆ ಮಾಡಿ ಎನ್ನುತ್ತಾರಲ್ಲ. ಇದೇನು 40% ಸರ್ಕಾರವಲ್ಲ. ಜನರ ತೆರಿಗೆಯ ದುಡ್ಡು. ಯಾರು ಸರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೋ ಅವರಿಗೆ ದುಡ್ಡು ಸಿಗಲಿದೆ

‌ಯಾರು ಉಪ್ಪು ತಿಂದಿದ್ದಾರೋ ಅವರು ನೀರು ಕುಡಿಯಲೇಬೇಕು. ನಾನು ಯಾವ ಕಾಮಗಾರಿಯಲ್ಲಿ ದುಡ್ಡು ತೆಗೆದುಕೊಂಡಿದ್ದೀನಿ ಎಂದು ಹೇಳಲಿ ಎಂದು ಸವಾಲ್ ಹಾಕಿದರು.

ಕರ್ನಾಟಕ‌ ಸರ್ಕಾರದ ಕಾರ್ಯವೈಖರಿ‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ‌ ಮಧ್ಯಪ್ರದೇಶದಲ್ಲಿ ಟೀಕೆ‌ ಮಾಡಿರುವ ಕುರಿತು ಪತ್ರಕರ್ತರು ಕೇಳಿದಾಗ ಉತ್ತರಿಸಿದ ಸಚಿವರು, ಮೋದಿ ಅವರಿಗೆ ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸ‌ ಗೊತ್ತಿಲ್ಲ. ಬಿಜೆಪಿ ಅಧಿಕಾರಕಕ್ಕೆ‌ ಬಂದಾಗ ಐವರು ಸಿಎಂ ಅವರನ್ನು ಬದಲಿಸಿದ್ದಾರೆ. ಮಾಜಿ‌ ಸಿಎಂ ದಿಲ್ಲಿಯಲ್ಲಿ ಅವರ ಮನೆ ಕಾಯ್ದರೂ ಕ್ಯಾರೆ ಅಂದಿಲ್ಲ. ಕೆಳಮನೆ ಹಾಗೂ ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರು ಯಾರು ? ನಮ್ಮಲ್ಲಿ ಸಮರ್ಥ ಎಐಸಿಸಿ ಅಧ್ಯಕ್ಷರು, ಸಮರ್ಥ‌ಸಿಎಂ ಹಾಗೂ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರು‌ ಇದ್ದಾರೆ. ಅವರ ಬಳಿ ಯಾರಿದ್ದಾರೆ? ಮೋದಿ ಅವರು ಮೊದಲು ತಮ್ಮ ಮನೆಯನ್ನು ಸ್ವಚ್ಛಗೊಳಿಸಿಕೊಳ್ಳಲಿ. ಮೋದಿಯವರ ಕೃಪಾಕಟಾಕ್ಷದಿಂದ 40% ಸರ್ಕಾರ ಎಂದು ಹೆಸರು ಬಂದಿದೆ ಎಂದು ಟಾಂಗ್ ನೀಡಿದರು. ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ